ಅಫಜಲಪುರ: ತಾಲೂಕಿನ ಮದರಾ (ಬಿ) ಗ್ರಾಮದಲ್ಲಿ ವ್ಯಕ್ತಿಯೊಬ್ಬರ ನಿಧನದ ಹಿನ್ನೆಲೆ ಅಂತ್ಯಸಂಸ್ಕಾರಕ್ಕಾಗಿ ಬಳಸುವ ರಥದ ರಿಪೇರಿಗಾಗಿ ಚವಡಾಪುರ ಗ್ರಾಮದ ಗ್ಯಾರೆಜೊಂದರಲ್ಲಿ ರಿಪೇರಿಗೆಂದು ತೆಗೆದುಕೊಂಡು ಹೋದ ಸಂದರ್ಭದಲ್ಲಿ ಕೆಲ ದುಷ್ಕರ್ಮಿಗಳು ಮದರಾ(ಬಿ) ಗ್ರಾಮ ಪಂಚಾಯತ್ ಅಧ್ಯಕ್ಷ ಗೌಡಪ್ಪಗೌಡ ಬಿರಾದಾರ ಅವರ ಕಣ್ಣಿನಲ್ಲಿ ಖಾರದ ಪುಡಿ ಎರಚಿ ಏಕಾಏಕಿ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಪರಾರಿಯಾದ ಘಟನೆಯು ಕಳೆದ ಶುಕ್ರವಾರ ಮುಂಜಾನೆ 11 ಗಂಟೆಯ ಸುಮಾರಿಗೆ ನಡೆದಿದೆ.
ತೀವ್ರ ರಕ್ತಸ್ರಾವದಿಂದ ಗೌಡಪ್ಪಗೌಡ ಬಿರಾದರ್ ಸ್ಥಳದಲ್ಲೇ ಸಾವನ್ನಪ್ಪಿದ್ದು, ಎರಡು ಕುಟುಂಬಗಳ ಮಧ್ಯದ ಹಳೆಯ ವೈಷಮ್ಯದಿಂದಲೇ ಈ ಕೃತ್ಯ ಎಸಗಲಾಗಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದು ಆರೋಪಿಗಳನ್ನು ಕೂಡಲೇ ಬಂಧಿಸಿ ಸೂಕ್ತ ಕಾನೂನು ಕ್ರಮ ಜರುಗಿಸಬೇಕೆಂದು ಒತ್ತಾಯಿಸಿದ್ದಾರೆ.
ಘಟನಾ ಸ್ಥಳಕ್ಕೆ ಕಲ್ಬುರ್ಗಿ ಎಸ್.ಪಿ. ಶ್ರೀನಿವಾಸಲು ಹೆಚ್ಚುವರಿ ಎಸ್.ಪಿ ಎನ್. ಶ್ರೀನಿಧಿ, ಡಿವೈಎಸ್ಪಿ ಗೋಪಿ ಬಿ. ಆರ್, ಪಿ.ಎಸ್.ಐ ಗಳಾದ ರಾಹುಲ್ ಪವಾಡೆ, ಮಡಿವಾಳಪ್ಪ ಬಾಗೋಡಿ, ಸವಿತಾ ಕಲ್ಲೂರ ಶ್ವಾನದಳದ ಸಿಬ್ಬಂದಿ, ಎಫ್.ಎಸ್.ಎಲ್ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ಸಂದರ್ಭದಲ್ಲಿ ಕಲ್ಬುರ್ಗಿ ಎಸ್.ಪಿ.ಶ್ರೀನಿವಾಸಲು ಮಾತನಾಡಿ ಈ ಘಟನೆಗೆ ಕಾರಣರಾದ ಆರೋಪಿಗಳ ಪತ್ತೆಗೆ ವಿಶೇಷ ಪೊಲೀಸ್ ತಂಡ ರಚನೆ ಮಾಡಲಾಗಿದೆ ಎಂದರು.
ಘಟನೆಯು ಅಫಜಲಪುರ ತಾಲೂಕಿನ ದೇವಲಗಾಣಗಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜರುಗಿದೆ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…