ಕಾಳಗಿ: ಚಿತ್ತಾಪುರ ತಾಲೂಕಿನ ಹಲಕರ್ಟಿ ಗ್ರಾಮದಲ್ಲಿ ವಿಶ್ವಗುರು ಜಗಜ್ಯೋತಿ ಬಸವಣ್ಣನವರ ಭಾವಚಿತ್ರವನ್ನು ಕಿಡಿಗೇಡಿಗಳು ವಿರೂಪ ಗೊಳಿಸಿರುವುದನ್ನು ಕಾಳಗಿ ತಾಲೂಕ ವೀರಶೈವ ಲಿಂಗಾಯತ ಸಮಾಜದ ಕಾಳಗಿ ತಾಲೂಕ ವೀರಶೈವ ಸಮಾಜದ ಅಧ್ಯಕ್ಷರಾದ ರೇವಣಸಿದ್ದ ಬಡಾ ತೀವ್ರವಾಗಿ ಖಂಡಿಸಿದ್ದಾರೆ.
ವಿಶ್ವಗುರು ಜಗಜ್ಯೋತಿ ಬಸವಣ್ಣನವರ ಭಾವಚಿತ್ರ ವಿರೂಪ ಗೊಳಿಸಿದ ವಿಕೃತ ಮನಸ್ಸಿನ ವ್ಯಕ್ತಿಗಳನ್ನು ಕೂಡಲೇ ಪೊಲೀಸ್ ಇಲಾಖೆ ಬಂಧಿಸಿ ಕಾನೂನಿನ ಪ್ರಕಾರ ಕಠಿಣ ಕ್ರಮ ಕೈಗೊಳ್ಳಬೇಕು ಇಲ್ಲದೆ ಹೋದಲ್ಲಿ ಕಾಳಗಿ ತಾಲೂಕಿನಲ್ಲಿ ಬೃಹತ್ ಪ್ರತಿಭಟನೆ ಮಾಡಲಾಗುವುದು ಎಂದು ಪತ್ರಿಕಾ ಪ್ರಕಟಣೆ ಮೂಲಕ ಜಿಲ್ಲಾಡಳಿತ ಆಗ್ರಹಿಸಿದ್ದಾರೆ.