ಕಲಬುರಗಿ: ಅಂತ್ಯೋದಯ ಅನ್ನ ಯೋಜನೆ ಆದ್ಯತಾ ಪಡಿತರ ಚೀಟಿದಾರರು ಮತ್ತು ಕಲ್ಯಾಣ ಸಂಸ್ಥೆಗಳಿಗೆ ಹೆಚ್ಚುವರಿ ಅಕ್ಕಿ ಸರಬರಾಜಿಗೆ ರಾಜ್ಯ ಸರ್ಕಾರ ಮುಕ್ತ ಟೆಂಡರ್ ಕರೆಯದೇ, ಕೇಂದ್ರದ ಸಂಸ್ಥೆಗಳಿಂದ ಅಕ್ಕಿ ಖರೀದಿಸಿ ಅಕ್ರಮ ಎಸಗಲಾಗಿದೆ’ ಎಂದು ಜಯ ಕರ್ನಾಟಕ ಸಂಘಟನೆಯ ಜಿಲ್ಲಾ ಅಧ್ಯಕ್ಷ ಮಲ್ಲಿಕಾರ್ಜುನ ಎಸ್. ಸಾರವಾಡ ಆರೋಪಿಸಿದ್ದಾರೆ.
ಪ್ರತಿ ಕೆ.ಜಿಗೆ ₹34.60ರಂತೆ ಕೇಂದ್ರ ಸರ್ಕಾರದ ಸಂಸ್ಥೆಗಳಾದ ಕೇಂದ್ರೀಯ ಬಂಡಾರ, ಎನ್‍ಸಿಸಿಎಫ್‍ನಿಂದ ಸರ್ಕಾರ 40 ಸಾವಿರ ಮೆಟ್ರಿಕ್ ಟನ್ ಅಕ್ಕಿ ಖರೀದಿಸಲು ಮುಂದಾಗಿದೆ ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಮುಕ್ತ ಟೆಂಡರ್ ಕರೆದರೆ ಹಲವಾರು ಸಂಸ್ಥೆಗಳು ಟೆಂಡರ್‍ನಲ್ಲಿ ಭಾಗವಹಿಸುವ ಮೂಲಕ ಗುಣಮಟ್ಟದ ಅಕ್ಕಿ ಜನರಿಗೆ ದೊರಕುತ್ತಿತ್ತು. ಪ್ರಧಾನ ಮಂತ್ರಿ ಪೆÇೀಷಣಾ ಅಭಿಯಾನ ಯೋಜನೆ ಅಡಿಯ ಫಲಾನುಭವಿಗಳಿಗೆ ವಿತರಣೆ ಮಾಡಲು ಪ್ರತಿ ಕೆ.ಜಿಗೆ ₹29 ರಂತೆ ಅದೇ ಸಂಸ್ಥೆ ವಿತರಣೆ ಮಾಡಿದೆ. ಇದು ನೋಡಿದರೆ ಅಕ್ರಮ ಎಸಗಿರುವುದು ಕಂಡು ಬರುತ್ತದೆ’ ಎಂದರು.
ಕೂಡಲೇ ಈ ಆದೇಶವನ್ನು ರದ್ದುಪಡಿಸಿ ಸರ್ಕಾರ ಬೊಕ್ಕಸಕ್ಕೆ ಆಗುವ ನಷ್ಟವನ್ನು ತಪ್ಪಿಸಬೇಕು. ಗುಣಮಟ್ಟದ ಅಕ್ಕಿ ಪೂರೈಸಬೇಕು. ಅಕ್ರಮದಲ್ಲಿ ಶಾಮೀಲಾದ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಸಿದ್ಧಲಿಂಗ ರಾಠೋಡ, ಸಂಭಾಜಿ ಪಿಸೇ, ರಾಜು ಕುಂಬಾರ್ ಇದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…