ಶಹಾಬಾದ: ಸಸಿಗಳನ್ನು ಹಚ್ಚುವುದರ ಜೊತೆಗೆ ಅವುಗಳನ್ನು ಮಕ್ಕಳಂತೆ ಸಂರಕ್ಷಿಸಿ ಕಾಳಜಿಯಿಂದ ಬೆಳೆಸಬೇಕೆಂದು ಭಂಕೂರ ಗ್ರಾಮ ಪಂಚಾಯತ ಅಧ್ಯಕ್ಷ ಶರಣಬಸಪ್ಪ ಧನ್ನಾ ಹೇಳಿದರು.
ಅವರು ಭಂಕೂರ ಗ್ರಾಮದ ಬಸವನಗರದ ಉದ್ಯಾನವನದಲ್ಲಿ ಹಾಗೂ ರಸ್ತೆಯ ಪಕ್ಕದಲ್ಲಿ ಆಯೋಜಿಸಲಾದ ಸಸಿ ನೆಡುವ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಮಾತನಾಡಿದರು.
ಮರಗಳನ್ನು ಬೆಳೆಸಿ ಸೂಕ್ತವಾದ ಪೋಷಣೆ ಮಾಡಿದರೆ ಕಾಲಕಾಲಕ್ಕೆ ಮಳೆಯಾಗುತ್ತದೆ. ಆದರೆ ಇಂದು ದೇಶದ ಎಲ್ಲಾ ಕಡೆ ಮುಂಗಾರು ಮಳೆ ಸರಿಯಾದ ವೇಳೆಗೆ ಬರದೇ ಇರುವದಕ್ಕೆ ಈ ಪರಿಸರ ನಾಶವೇ ಕಾರಣ. ಕೇವಲ ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ ಎಂದು ಹೇಳಿಕೊಂಡು ಕೂಡದೇ ಅದನ್ನು ಕಾರ್ಯರೂಪಕ್ಕೆ ತಂದರೆ ಮಾತ್ರ ಆ ಘೋಷ ವಾಕ್ಯಕ್ಕೆ ಮನ್ನಣೆ ಬರುತ್ತದೆ. ಇದನ್ನು ಪ್ರತಿಯೊಬ್ಬರೂ ಪಾಲಿಸಬೇಕು.ಹೆಚ್ಚು ಹೆಚ್ಚು ಮರಗಳನ್ನು ಬೆಳೆಸುವುದರಿಂದ ಉತ್ತಮ ಪರಿಸರದೊಂದಿಗೆ ಆರೋಗ್ಯಕರ ವಾತಾವರಣ ನಿರ್ಮಾಣವಾಗುತ್ತದೆ ಎಂದು ಹೇಳಿದರು.
ಗ್ರಾಪಂ ಸದಸ್ಯ ಈರಣ್ಣ ಕಾರ್ಗಿಲ್ ಮಾತನಾಡಿ, ಪರಿಸರ ಸಮತೋಲನ ಕಾಪಾಡಲು ನಾವು ಹೆಚ್ಚು ಹೆಚ್ಚು ಸಸಿಗಳನ್ನು ಬೆಳೆಸುವ ಮುಖಾಂತರ ಪರಿಸರ ಸಂರಕ್ಷಣೆ ಮಾಡಬೇಕು. ಅಲ್ಲದೇ ಪರಿಸರ ಸಂರಕ್ಷಣೆಯಲ್ಲಿ ಸುಂದರಲಾಲ ಬಹುಗುಣ ಹಾಗೂ ಸಾಲು ಮರದ ತಿಮ್ಮಕ್ಕರ ಶ್ರಮ ಬಹಳಷ್ಟಿದೆ ಎಂದರು. ಅಲ್ಲದೇ ಹಳ್ಳಿ ಹಳ್ಳಿಗಳಿಗೂ ಈ ಪರಿಸರದ ಬಗ್ಗೆ ಅರಿವು ಮೂಡಿಸಬೇಕಾದ ಜವಾಬ್ದಾರಿ ನಮ್ಮದಾಗಿದೆ ಎಂದರು.
ಗ್ರಾಮ ಪಂಚಾಯತ ಸದಸ್ಯ ಈರಣ್ಣ ಗುಡೂರ್, ಬಸವ ಸಮಿತಿ ಅಧ್ಯಕ್ಷ ನೀಲಕಂಠ ಮುದೋಳಕರ್, ಉಮೇಶ ಪಾಟೀಲ್, ಅಮೃತ ಮಾನಕರ್, ಗೋಪಾಲ್ ರಾಠೋಡ, ಸುರೇಶ ಪಾಟೀಲ್, ಮಲ್ಲಿಕಾರ್ಜುನ ಘಾಲಿ, ಶರಣಬಸಪ್ಪ ನಾಗನಹಳ್ಳಿ, ವಿಜಯಕುಮಾರ ಮುತ್ತಿಗಿ, ಭೀಮಯ್ಯ ಗುತ್ತೇದಾರ, ಅಮರಪ್ಪ ಹೀರಾಳ, ಮಹದೇವಪ್ಪ ಮಾನಕರ್ ಸೇರಿದಂತೆ ಅನೇಕರು ಇದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…