ಕಲಬುರಗಿ: ನಾಲ್ಕು ತಿಂಗಳಿಂದ ಒಂದೇ ಕಡೆಯಲ್ಲಿ ನಿಂತ ಎರಡು ಸ್ಲಿಪರ್ ಖಾಸಗಿ ಸಾರಿಗೆ ಬಸ್ ಗಳಿಗೆ ಬೆಂಕಿ ತಗುಲಿ ಸುಟ್ಟುಕರಗಲಾಗಿರುವ ಘಟನೆ ವಿಶ್ವ ವಿದ್ಯಾಲಯ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಶನಿವಾರ ಸಂಜೆ ಹೊತ್ತಿಗೆ ಸಂಭವಿಸಿದೆ.
ನಗರದ ಹಾಗರಗಾ ರಸ್ತೆಯ ಮಹೆಫಿಲ್ ಎ ಖಾಸ್ ಧಾಬಾದ ಹತ್ತಿರ ಅವಘಡ ಸಂಭವಿಸಿದ್ದು, ಒಂದು ಗಂಟೆಗೂ ಹೆಚ್ಚು ಕಾಲ ಎರಡು ಬಸ್ ಗಳಿಗೆ ಬೆಂಕಿ ಹೊತ್ತಿ ಉರಿದ ಪರಿಣಾಮ ಸಂಪೂರ್ಣ ಸುಟ್ಟು ಹೋಗಿವೆ.
ಅವಘಡಕ್ಕೆ ಭಾರಿ ಗಾತ್ರದಲ್ಲಿ ಹೋಗೆ ಕಾಣಿಸಿಕೊಂಡಿರಿಂದ ಸ್ಥಳದಲ್ಲಿ ಆತಂಕದ ವಾತವರಣ ನಿರ್ಮಾಣವಾಗಿತ್ತು. ನಂತರ ಅಗ್ನಿ ಶಾಮಕ ದಳದ ಸಿಬ್ಬಂದಿಗಳು ಘಟನಾ ಸ್ಥಳಕ್ಕೆ ಆಗಮಿಸಿ ಬೆಂಕಿಯನ್ನು ನಂದಿಸುವ ಮೂಲಕ ಅನಾಹುತವನ್ನು ತಪ್ಪಿಸಿದರು.
ಈ ವೇಳೆ ಡಿಸಿಪಿ ಕನಿಕಾ ಶೆಕ್ರೇವಾಲ್, ಎಸಿಪಿ ರಾಜಣ್ಣ ಅವರು ಸ್ಥಳಕ್ಕೆ ಭೇಟಿ ನೀಡಿಲಿದ್ದು, ವಿಶ್ವ ವಿದ್ಯಾಲಯದ ಅಣ್ಣಪ್ಪಾ ಇಎಸ್ಐ, ಠಾಣೆಯ ಸಿಬ್ಬಂದಿ ಅನೀಲ್, ಮಹಾಂತೇಶ ಘಟನಾ ಸ್ಥಳದ ವಾತಾವರಣ ಮಾಹಿತಿ ಕಲೆ ಹಾಕುತ್ತಿದ್ದು, ಈ ಕುರಿತು ಕಲಬುರಗಿ ವಿಶ್ವ ವಿದ್ಯಾಲಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಕಲಬುರಗಿ: ಕಲ್ಯಾಣ ಕರ್ನಾಟಕ ರೈತಾಪಿ ಸಂಘದ ಜಿಲ್ಲಾ ಅಧ್ಯಕ್ಷರನ್ನಾಗಿ ಬಳಿರಾಮ ರಾಮಜಿ ಚೌವ್ಹಾಣ, ಹಾಗೂ ತಾಲೂಕು ಅಧ್ಯಕ್ಷರನ್ನಾಗಿ ಶಿವರಾಜ ದೇಶಮುಖಪ್ಪಾ…
ಕಲಬುರಗಿ: ಪುರಾತನ ಕಾಲದಲ್ಲಿ ನಾಗಾವಿ ಪ್ರದೇಶವು ದಕ್ಷಿಣ ಭಾರತದಲ್ಲಿ ನಾಗಾವಿ ಪ್ರಸಿದ್ದಿ ಪಡೆದ ವಿಶ್ವ ವಿದ್ಯಾಲಯವಾಗಿತ್ತು ಎಂದು ತಹಸಿಲ್ದಾರ್ ನಾಗಯ್ಯ…
ಕಲಬುರಗಿ: ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ದಿ.1-1-2025 ಅರ್ಹತಾ ದಿನವನ್ನಾಗಿ ಪರಿಗಣಿಸಿಕೊಂಡು ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ನಡೆಸಲಾಗುತ್ತಿದ್ದು,…
ಕಲಬುರಗಿ: ವಿದ್ಯಾರ್ಥಿಗಳು ಜಿಲ್ಲೆಯ ಎಲ್ಲಾ ವಿಕಲಚೇತನರಿಗೆ ಹೆಚ್ಚಿನ ಸ್ಥಾನಮಾನಗಳನ್ನು ಸಿಗಬೇಕು ಹಾಗೂ ಎಲ್ಲ್ಲಾ ಕ್ರೀಡೆಗಳಲ್ಲಿ ಭಾಗವಹಿಸಿ ಜಯಸಾಧಿಸಬೇಕು ಎಂದು ಅಪರ…
ಪ್ರಜ್ವಲ್,ಧೀರಜ್ ಸೋಲಿಸಿ ಗೆದ್ದು ಬೀಗಿದ ಬೊಬ್ರೋಬ್ ಹಾಗೂ ಸುಲ್ತಾನೋವ್ ಕಲಬುರಗಿ, ನವೆಂಬರ್ ೨೧ : ಐಟಿಎಫ್ ಕಲಬುರಗಿ ಓಪನ್ ಟೆನಿಸ್…
ಕಲಬುರಗಿ: ವೀರಭದ್ರೇಶ್ವರ ಸಾಂಸ್ಕೃತಿಕ ಹಾಗೂ ಗ್ರಾಮೀಣ ಅಭಿವೃದ್ಧಿ ಸಂಸ್ಥೆ ರಿ ಆಳಂದ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು…