ಸುರಪುರ: ತಾಲೂಕಿನ ಎಲ್ಲಾ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿನ ಗ್ರಾಮಗಳಲ್ಲಿ ನಿರ್ಮಿಸಲಾಗಿರುವ ಕೇಂದ್ರ ಸರಕಾರದ ಮಹತ್ವಕಾಂಕ್ಷೆ ಯೋಜನೆಯಾದ ಜಲಜೀವನ ಮಿಷನ್ ಯೋಜನೆಯ ಕಾಮಗಾರಿಗಳು ಕಳಪೆಯಾಗಿದ್ದು ತನಿಖೆಗೆ ಆಗ್ರಹಿಸಿ ಗ್ರಾಮಿಣಾಭೀವೃಧ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆಯವರಿಗೆ ಮನವಿ ಸಲ್ಲಿಸಲಾಗಿದೆ.
ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಡಿ.ಜಿ ಸಾಗರ ಬಣದ ಮುಖಂಡರು ಬೆಂಗಳೂರಿನಲ್ಲಿ ಸಚಿವ ಪ್ರಿಯಾಂಕ್ ಖರ್ಗೆಯವರನ್ನು ಅವರ ಕಚೇರಿಯಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಿದ ಮುಖಂಡರು,2022-23ನೇ ಸಾಲಿನ ಜಲಜೀವನ ಮಿಷನ್ ಯೋಜೆನಯ ಕಾಮಗಾರಿಗಳಲ್ಲಿ ದೊಡ್ಡ ಭ್ರಷ್ಟಾಚಾರ ನಡೆಸಲಾಗಿದೆ.
ಅನೇಕ ಗ್ರಾಮಗಳಲ್ಲಿ ಕಳಪೆ ಕಾಮಗಾರಿ ಮಾಡಲಾಗಿದೆ,ಇನ್ನು ಅನೇಕ ಗ್ರಾಮಗಳಲ್ಲಿ ಅರ್ದಂಬರ್ಧ ಕಾಮಗಾರಿ ಮಾಡಿ ಸಂಪೂರ್ಣ ಬಿಲ್ ಪಡೆಯಲಾಗಿದೆ,ಇನ್ನೂ ಕೆಲ ಗ್ರಾಮಗಳಲ್ಲಿ ಕಾಮಗಾರಿ ಮುಗಿಸಿದರು ನೀರು ಸರಬರಾಜು ಮಾಡುತ್ತಿಲ್ಲ. ಇದೆಲ್ಲವನ್ನು ನೋಡಿದಾಗ ಇಡೀ ಯೋಜನೆ ತಾಲೂಕಿನಲ್ಲಿ ಸಂಪೂರ್ಣ ಹಳ್ಳ ಹಿಡಿದಿದೆ ಅನಿಸುತ್ತಿದೆ,ಆದ್ದರಿಂದ ಮಾನ್ಯರಾದ ತಾವುಗಳು ಇದನ್ನು ಸಂಪೂರ್ಣ ತನಿಖೆಗೊಳಪಡಿಸಿ ತಪ್ಪಿತಸ್ಥರ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕು,ಕಾಮಗಾರಿ ಮಾಡಿದ ಗುತ್ತಿಗೆದಾರರನ್ನು ಕಪ್ಪು ಪಟ್ಟಿಗೆ ಸೇರಿಸಬೇಕು ಎಂದು ವಿನಂತಿಸಿಸದರು.
ಈ ಸಂದರ್ಭದಲ್ಲಿ ಸಂಘಟನೆಯ ಜಿಲ್ಲಾ ಸಂಘಟನಾ ಸಂಚಾಲಕ ಶಿವಲಿಂಗ ಹಸನಾಪುರ,ತಾಲೂಕು ಸಂಚಾಲಕ ತಿಪ್ಪಣ್ಣ ಶೆಳ್ಳಗಿ,ಮುಖಂಡರಾದ ಶೇಖರ ಮಂಗಳೂರು,ಭೀಮರಾಯ ಮಂಗಳೂರು,ತಿಮ್ಮಣ್ಣ ದೇವದುರ್ಗ ಸೇರಿದಂತೆ ಅನೇಕರಿದ್ದರು.