ಶಹಾಬಾದ: ಪದವೀಧರರ ಕ್ಷೇತ್ರದ ಚುನಾವಣೆಯ ನಿಮಿತ್ತ ಪದವೀಧರರು ಮತದಾರರ ಪಟ್ಟಿಯಲ್ಲಿ ಹೆಸರು ನೊಂದಾಯಿಸಿಕೊಳ್ಳಬೇಕು. ಎಲ್ಲ ರಾಜಕೀಯ ಪಕ್ಷಗಳ ಮುಖಂಡರು ಹೆಚ್ಚಿನ ಪ್ರಚಾರ ನೀಡುವ ಮೂಲಕ ಸಹಕರಿಸಬೇಕು ಎಂದು ತಹಸೀಲ್ದಾರ ಗುರುರಾಜ ಸಂಗಾವಿ ಹೇಳಿದರು.
ಅವರು ಗುರುವಾರ ನಗರದ ತಹಸೀಲ್ದಾರ ಕಚೇರಿಯಲ್ಲಿ ಪದವೀಧರರ ಕ್ಷೇತ್ರದ ಚುನಾವಣೆ ನಿಮಿತ್ತ ಪದವೀಧರರು ಹೆಸರು ನೋಂದಾಯಿಸಲು ವಿವಿಧ ರಾಜಕೀಯ ಪಕ್ಷಗಳ ಮುಖಂಡರ ಕರೆದ ಸಭೆಯಲ್ಲಿ ಮಾತನಾಡಿದರು.
ತಹಸೀಲ್ ಕಚೇರಿಯಲ್ಲಿ ಈಗಾಗಲೇ ಕೌಂಟರ್ ತೆರೆಯಲಾಗಿದೆ. ಉಚಿತವಾಗಿ ನಮೂನೆ 18 ಫಾರ್ಮ ಪಡೆದು ಆಧಾರ ಕಾರ್ಡ, ವೋಟರ್ ಕಾರ್ಡ, ಎಸ್‍ಎಸ್‍ಎಲ್‍ಸಿ ಮತ್ತು ಮೂರು ವರ್ಷದ ಪದವಿ ಅಂಕಪಟ್ಟಿ ಹಾಗೂ ಒಂದು ಭಾವಚಿತ್ರ ದಾಖಲೆಗಳೊಂದಿಗೆ ಸಲ್ಲಿಸಬೇಕು.
ಈ ಹಿಂದೆ ಮತ ಚಲಾಯಿಸಿದವರೂ ಇದೀಗ ಮರು ಅರ್ಜಿ ಸಲ್ಲಿಸಬೇಕು. ನೊಂದಣಿ ಮಾಡಿಕೊಳ್ಳಲು ನವೆಂಬರ್ 6 ಕೊನೆಯ ದಿನಾಂಕವಿದ್ದು,ಆದಷ್ಟು ಬೇಗನೆ ಪದವಿ ಹೊಂದಿದದವರು ನೊಂದಣಿ ಮಾಡಿಕೊಳ್ಳಬೇಕು. ಇನ್ನಷ್ಟು ಹೆಚ್ಚಿನ ಸಂಖ್ಯೆಯಲ್ಲಿ ಅರ್ಜಿ ಪಡೆದು ರಾಜಕೀಯ ಮುಖಂಡರು ನೋಂದಣಿಗೆ ಮುಂದಾಗಬೇಕು. ಇದಕ್ಕೆ ಎಲ್ಲರ ಸಸಹಕಾರ ಅಗತ್ಯ ಎಂದರು.
ಬಿಜೆಪಿ ಅಧ್ಯಕ್ಷ ಅಣವೀರ ಇಂಗಿನಶೆಟ್ಟಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಾ.ರಶೀದ್ ಮರ್ಚಂಟ್, ಬಿಎಸ್‍ಪಿಯ ಶೇಖ ಬಾಬು ಉಸ್ಮಾನ್ ಸೇರಿದಂತೆ ಅನೇಕರು ಇದ್ದರು.
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…
ಕಲಬುರಗಿ: ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಚಿವ ಪ್ರಿಯಾಂಕ್ ಖರ್ಗೆ ಅವರ ಜನ್ಮದಿನದ ಪ್ರಯುಕ್ತ ಜೈ ಕನ್ನಡಿಗರ…
ಕಲಬುರಗಿ; ಕಾರಾಗೃಹದ ಬಂದಿಗಳಿಗೆ ಉಚಿತವಾಗಿ ಅದಾನಿ ಸಕ್ಷಮ ಸ್ಕಿಲ್ ಡೆವಲಪ್‍ಮೆಂಟ್, ವಾಡಿ ಹಾಗೂ ಕೇಂದ್ರ ಕಾರಾಗೃಹದ ಸಹಯೋಗದೊಂದಿಗೆ ಬಂದಿಗಳ ಮನಃ…