ಬಿಸಿ ಬಿಸಿ ಸುದ್ದಿ

ಬಾಲರಾಜ್ ಗುತ್ತೇದಾರರಿಂದ ಬರ ಪರಿಹಾರಕ್ಕಾಗಿ ಒತ್ತಡ ಹೇರಲು ಜೆಡಿಎಸ್ ವರಿಷ್ಠರಿಗೆ ಮನವಿ

ಸೇಡಂ: ಕಲಬುರಗಿ ಜಿಲ್ಲೆಯಲ್ಲಿ ಮುಂಗಾರು ಮಳೆ ವೈಫಲ್ಯದಿಂದ ಬೆಳೆ ಬಾರದೆ ರೈತರು ತೊಂದರೆ ಅನುಭವಿಸುವಂತಾಗಿದೆ. ಬರ ಘೋಷಣೆಯಾದರೂ ರಾಜ್ಯ ಸರ್ಕಾರ ರೈತರಿಗೆ ಪರಿಹಾರ ನೀಡಲು ಮುಂದೆ ಬರುತ್ತಿಲ್ಲ ಆದಕಾರಣ ಸರ್ಕಾರದ ಮೇಲೆ ಒತ್ತಡ ಹೇರಲು ಎಂದು ಸೇಡಂ ಮತಕ್ಷೇತ್ರದ ಜೆಡಿಎಸ್ ಮುಖಂಡ ಬಾಲರಾಜ್ ಗುತ್ತೇದಾರ ಮಾಜಿ ಪ್ರಧಾನಿ ಹೆಚ್,ಡಿ. ದೇವೆಗೌಡರಿಗೆ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅವರಿಗೆ ಮನವಿ ಮಾಡಿದ್ದರು.

ಬೆಂಗಳೂರಿನ ಮಾಜಿ ಪ್ರಧಾನಮಂತ್ರಿ ದೇವೆಗೌಡರ ನಿವಾಸದಲ್ಲಿ ಭೇಟಿಯಾಗಿ ರಾಜ್ಯದಲ್ಲಿ ರೈತ ವಿರೋಧಿ ಸರ್ಕಾರ ಆಗಿದ್ದು ರಾಜ್ಯದ 195 ಬರಗಾಲ ಪೀಡಿತ ತಾಲ್ಲೂಕುಗಳು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿ ಒಂದು ತಿಂಗಳು ಕಳೆದಿದೆ.ಬರಗಾಲ ಪೀಡಿತ ಪ್ರದೇಶಗಳಲ್ಲಿ ಕೇಂದ್ರದ ತಂಡ ಸಮೀಕ್ಷೆ ಮಾಡುತ್ತಿದೆ.ಆದರೆ ಇದು ವಿಳಂಬಕ್ಕೆ ಕಾರಣವಾಗಿದೆ. ತಕ್ಷಣ ರಾಜ್ಯ ಸರ್ಕಾರ ಈಗಾಗಲೇ ಆರ್ಥಿಕ ಸಂಕಷ್ಟ ಎದುರಿಸುತ್ತಿರುವ ರೈತರಿಗೆ ಪರಿಹಾರ ನೀಡಿದರೆ ನಮ್ಮ ಭಾಗದ ರೈತರಿಗೆ ಅನೂಕುವಾಗಲಿದ್ದು ಇಗಾಗಲೆ ಸರ್ಕಾರ ಜಿಲ್ಲಾಧಿಕಾರಿಗಳಿಂದ ವರದಿ ತರಿಸಿಕೊಂಡಿದು ಕೃಷಿ ಸಚಿವರು ಕೂಡ ಜಿಲ್ಲೆಗೆ ಬೇಟಿ ನೀಡಿ ಅಧಿಕಾರಿಗಳ ಸಭೆ ನಡೆಸಿ ಜಿಲ್ಲೆಯ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ ಜೊತೆಗೆ ಸಚಿವರು ಕೂಡ ಬೆಳೆ ವೀಕ್ಷಿಸಿದ್ದಾರೆ.

ಹೆಸರು,ಉದ್ದು, ಎಳ್ಳು, ಸೋಯಾಬಿನ್ ಮುಂತಾದ ಮುಂಗಾರು ಬೆಳೆಗಳು ಮಳೆ ಬಾರದೆ ಹಾಳಾಗಿದೆ.ರೈತರು ಇಲ್ಲಿಯವರೆಗೆ ಬೆಳೆಯಿಂದ ಒಂದು ರೂಪಾಯಿ ಕೂಡ ಕಂಡಿಲ್ಲ.ಸಾಲ ಮಾಡಿ ಬಿತ್ತನೆ ಬೀಜ ಮತ್ತು ಗೊಬ್ಬರ ಖರೀದಿಸಿದ್ದಾರೆ.ಸಾಲ ಮರು ಪಾವತಿಗೆ ಹಣ ಇಲ್ಲ.ಮಳೆ ಬಂದಿದ್ದರೆ ಈಗಾಗಲೇ ರೈತರ ಕೈಗೆ ಹಣ ಬರುತ್ತಿತ್ತು.ಪರಿಸ್ಥಿತಿ ಹೀಗಿರುವಾಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉಚಿತ ಗ್ಯಾರಂಟಿ ಯೋಜನೆಗಳಿಗಾಗಿ ಸರ್ಕಾರದ ಖಜಾನೆ ಖಾಲಿ ಮಾಡುತ್ತಿದ್ದಾರೆ.ಆದರೆ ರೈತರ ಬಗ್ಗೆ ಕಿಂಚಿತ್ತೂ ಕಾಳಜಿ ತೋರುತ್ತಿಲ್ಲಆದಕಾರಣ ತಾವುಗಳು ಬರ ಪರಿಹಾರ ನೀಡುವಂತೆ ಸರ್ಕಾರದ ಮೇಲೆ ಒತ್ತಡ ಹೇರಿ ರೈತರಿಗೆ ಅನೂಕುಲ ಮಾಡಿಕೊಡಬೇಕು ಎಂದು ಮನವಿ ಮಾಡಿದ್ದರು.

ಇನ್ನೂ ಕಲಬುರಗಿ ಜಿಲ್ಲೆ ಸೇರಿದಂತೆ ಸೇಡಂ ಮತಕ್ಷೇತ್ರದ ಬಹುತೇಕ ಪ್ರಾಥಮೀಕ ಆರೋಗ್ಯ ಕೇಂದ್ರದಲ್ಲಿ ರಾತ್ರಿವೇಳೆ ವೈದ್ಯರು ಇರುವುದಿಲ್ಲ ಇಂದರಿಂದ .ರಾತ್ರಿವೇಳೆ ತುರ್ತು ಪರಿಸ್ಥಿತಿ ವೇಳೆ ಚಿಕಿತ್ಸೆ ಸಿಗದೆ ಸಾವುಗಳಾಗುತ್ತಿವೆ ಆದಕಾರಣ ವೈದ್ಯರ ಹುದ್ದೆಗಳನ್ನು ಭರ್ತಿಗೆ ಸರ್ಕಾರದ ಮೇಲೆ ಒತ್ತಡ ಹೇರಬೇಕು ಎಂದು ಮನವಿ ಮಾಡಿದ್ದರು.

emedialine

Recent Posts

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

6 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

8 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

15 hours ago

ಸಿದ್ದ ಶ್ರೀ ಕಾರ್ಖಾನೆ ಪ್ರಾರಂಭವಾಗುವರೆಗೂ ಹೋರಾಟ: ವೀರಣ್ಣ ಗಂಗಾಣಿ

ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…

15 hours ago

ದಕ್ಷಿಣ ಭಾರತ ಅಂತರ ವಿಶ್ವವಿದ್ಯಾಲಯ ಮಹಿಳೆಯರ ಕಬಡ್ಡಿ ಕ್ರೀಡಾಕೂಟಕ್ಕೆ ಆಯ್ಕೆ

ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…

15 hours ago

ಪ್ರಿಯಾಂಕ್ ಖರ್ಗೆ ಜನ್ಮದಿನ; ರಕ್ತದಾನ ಶಿಬಿರಕ್ಕೆ ಶಾಸಕ ಪಾಟೀಲ ಚಾಲನೆ

ಕಲಬುರಗಿ: ನಗರದ ವಾರ್ಡ ನಂ.51.ರ  ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…

1 day ago