ಬಿಸಿ ಬಿಸಿ ಸುದ್ದಿ

ಸಂಸ್ಕಾರಯುತ ಶಿಕ್ಷಣದಿಂದ ಸಮುದಾಯದ ಅಭಿವೃದ್ಧಿ ಸಾದ್ಯ

ಕಲಬುರಗಿ: ನಗರದ ಕನ್ನಡ ಭವನದಲ್ಲಿ ಏರ್ಪಡಿಸಿದ್ದ 2022-23ನೇ ಸಾಲಿನ ಹತ್ತನೇ/ಪಿ.ಯು.ಸಿ ಪರೀಕ್ಷೆಗಳಲ್ಲಿ ಅತ್ಯಧಿಕ ಅಂಕಗಳಿಸಿದ ಅಲೆಮಾರಿ ಹೆಳವ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ್ ಉದ್ಘಾಟಿಸಿದರು.

ಕಾರ್ಯಕ್ರಮವನ್ನು ಶಾಸಕ ಅಲ್ಲಮಪ್ರಭು ಪಾಟೀಲ್ ಉದ್ಘಾಟಿಸಿ ಮಾತನಾಡಿ ಅತಿ ಹಿಂದುಳಿದ ಅಲೆಮಾರಿ ಹೆಳವ ಸಮಾಜವನ್ನು ಪರಿಶಿಷ್ಟ ಪಂಗಡದ ಪಟ್ಟಿಗೆ ಸೇರಿಸವುದು ಅವಶ್ಯವಾಗಿದೆ. ಆಸ್ತಿಗಾಗಿ ದುಡಿಯುವುದಕ್ಕಿಂತ ಉತ್ತಮವಾದ ಶಿಕ್ಷಣ ಮತ್ತು ಸಂಸ್ಕಾರವನ್ನು ನೀಡುವ ಮೂಲಕ ಮಕ್ಕಳನ್ನೇ ಆಸ್ತಿಯನ್ನಾಗಿ ಪರಿವರ್ತಿಸಬೇಕು ಎಂದರು. ನಗರದಲ್ಲಿ ಹೆಳವ ಸಮಾಜಕ್ಕೆ ಸಮುದಾಯ ಭವನ ನಿರ್ಮಿಸಲು ಸಹಾಯ ಮಾಡುವುದಾಗಿ ತಿಳಿಸಿದರು.

ವಿಧಾನ ಪರಿಷತ್ ಸದಸ್ಯ ತಿಪ್ಪಣ್ಣಪ್ಪ ಕಮಕನೂರ ಮಾತನಾಡಿ ಅಲೆಮಾರಿ ಹೆಳವ ಸಮಾಜ ಅತಿ ಸಣ್ಣ ಹಾಗೂ ಕಡುಬಡತನದಿಂದ ಕೂಡಿದ್ದರೂ, ಅಲೆಮಾರಿ ಮಕ್ಕಳ ಸಾಧನೆ ಶ್ಲಾಘನೀಯವಾದದ್ದು ಎಂದರು. ಇದೇ ಸಂದರ್ಭದಲ್ಲಿ ಸಮಾಜದ ಏಳಿಗೆಗಾಗಿ 5ಲಕ್ಷ ಅನುದಾನ ನೀಡುವುದಾಗಿ ಘೋಷಿಸಿದರು.

ಕಾರ್ಯಕ್ರಮದ ದಿವ್ಯ ಸಾನಿದ್ಯವನ್ನು ಪೂಜ್ಯ ಶ್ರೀ ಶಂಕರಲಿಂಗ ಮಹಾಸ್ವಾಮಿಗಳು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಸದಸ್ಯ ತಿಪ್ಪಣ್ಣಪ್ಪ ಕಮಕನೂರು, ಸುನಿಲಕುಮಾರ ಒಂಟಿ, ಡಾ. ಕರಿಬಸಮ್ಮ ಹಾಗೂ ವಿಜಯಕುಮಾರ ಪಾಟೀಲ್ ತೇಗಲತಿಪ್ಪಿ ವಹಿಸಿದ್ದರು. ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ತಾಲೂಕು ಕಲ್ಯಾಣಾಧಿಕಾರಿ ಅಧಿಕಾರ ಡಾ. ಕರಿಬಸಮ್ಮ ಅವರು ಪ್ರತಿಭಾವಂತ ಮಕ್ಕಳಿಗೆ ನೋಟ ಪುಸ್ತಕ ನೀಡಿದರು.

ಸಮಾರಂಭದಲ್ಲಿ ಸಮಾಜದ ಮುಖಂಡರಾದ ಮಲ್ಲಿಕಾರ್ಜುನ ಬಿ.ಹೆಚ್, ಎಚ್.ಎನ್. ಗೋಗಿ, ಶ್ರೀಮಂತ ಸೌಂದರ್ಗಿ, ಜಿಲ್ಲಾಧ್ಯಕ್ಷ ಸಾಯಬಣ್ಣ ಹೆಳವರ, ಬಸವರಾಜ ಎಸ್. ಹೆಳವರ, ಮಲ್ಲಿಕಾರ್ಜುನ ಹೆಳವರ ಹೆಬ್ಬಾಳ, ಗುರಲಿಂಗ ಹೆಳವರ, ಹಣಮಂತ್ರಾಯ ಹಳಿಸಗರ, ರಾಘು ಮಾಸ್ತಾರ, ಮಲ್ಲಪ್ಪ ತಳ್ಳಳ್ಳಿ, ಪ್ರಭು ಯಾಳಗಿ, ಅಶೋಕ ಹೆಳವರ, ತಿಪ್ಪಣ್ಣ ಹೆಳವರ, ಗಂಗಾಧರ ಹೆಳವರ, ರಾಜು ಹೆಳವರ, ಕುಮಾರ ಯಾದವ, ಕನಕರೆಡ್ಡಿ ಯಾದವ ಸೇರಿದಂತೆ ಸಮಾಜದ ಮುಖಂಡರು ಭಾಗವಹಿಸಿದ್ದರು.

emedialine

Recent Posts

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

11 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

13 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

19 hours ago

ಸಿದ್ದ ಶ್ರೀ ಕಾರ್ಖಾನೆ ಪ್ರಾರಂಭವಾಗುವರೆಗೂ ಹೋರಾಟ: ವೀರಣ್ಣ ಗಂಗಾಣಿ

ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…

20 hours ago

ದಕ್ಷಿಣ ಭಾರತ ಅಂತರ ವಿಶ್ವವಿದ್ಯಾಲಯ ಮಹಿಳೆಯರ ಕಬಡ್ಡಿ ಕ್ರೀಡಾಕೂಟಕ್ಕೆ ಆಯ್ಕೆ

ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…

20 hours ago

ಪ್ರಿಯಾಂಕ್ ಖರ್ಗೆ ಜನ್ಮದಿನ; ರಕ್ತದಾನ ಶಿಬಿರಕ್ಕೆ ಶಾಸಕ ಪಾಟೀಲ ಚಾಲನೆ

ಕಲಬುರಗಿ: ನಗರದ ವಾರ್ಡ ನಂ.51.ರ  ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…

1 day ago