ಪದವೀಧರರ ಕ್ಷೇತ್ರದ ಮತದಾರರ ಪಟ್ಟಿ ಪರಿಷ್ಕರಣೆ: ಅ.17, 26, 30 ರಂದು ವಿಶೇಷ ಅಭಿಯಾನ

0
28

ಕಲಬುರಗಿ: ಈಶಾನ್ಯ ಪದವೀಧರರ ಕ್ಷೇತ್ರದ ಮತದಾರರ ಪಟ್ಟಿ ಪರಿಷ್ಕರಣೆ ಭಾಗವಾಗಿ ಯಾವೊಬ್ಬ ಅರ್ಹ ಮತದಾರರು ನೋಂದಣಿ ಪ್ರಕ್ರಿಯೆಯಿಂದ ಹೊರಗುಳಿಯದಂತೆ ಇದೇ ಅಕ್ಟೋಬರ್ 17, 26 ಹಾಗೂ 30 ರಂದು ಕಲಬುರಗಿ ಜಿಲ್ಲೆಯಲ್ಲಿ “ಮತದಾರರ ವಿಶೇಷ ನೋಂದಣಿ ಅಭಿಯಾನ” ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಮತ್ತು ಕ್ಷೇತ್ರದ ಸಹಾಯಕ ಮತದಾರರ ನೋಂದಣಾಧಿಕಾರಿ ಬಿ.ಫೌಜಿಯಾ ತರನ್ನುಮ್ ತಿಳಿಸಿದ್ದಾರೆ.

ವಿಶೇಷ ಅಭಿಯಾನ ದಿನಗಳಂದು ಕಲಬುರಗಿ ಜಿಲ್ಲಾಧಿಕಾರಿಗಳ ಕಛೇರಿ, ಮಹಾನಗರ ಪಾಲಿಕೆ ಕಚೇರಿ, ಕಲಬುರಗಿ ಮತ್ತು ಸೇಡಂ ಸಹಾಯಕ ಆಯುಕ್ತರ ಕಚೇರಿ, ಜಿಲ್ಲೆಯ ಎಲ್ಲಾ ತಹಸೀಲ್ ಕಛೇರಿಗಳು ಹಾಗೂ ವಿವಿಧ ಶಿಕ್ಷಣ ಸಂಸ್ಥೆಗಳಲ್ಲಿ ಬೆಳಿಗ್ಗೆ 9 ಗಂಟೆಯಿಂದ ಸಾಯಂಕಾಲ 5.30 ವರೆಗೆ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಗೆ ನಮೂನೆ-18ರಲ್ಲಿ ಅರ್ಜಿ ಸ್ವೀಕರಿಸಲಾಗುತ್ತದೆ.

Contact Your\'s Advertisement; 9902492681

ಸುಭದ್ರ ಪ್ರಜಾಪ್ರಭುತ್ವದ ವ್ಯವಸ್ಥೆಯನ್ನು ಬಲಪಡಿಸುವ ನಿಟ್ಟಿನಲ್ಲಿ ಅರ್ಹ ಮತದಾರರು ಚುನಾವಣಾ ಪ್ರಕ್ರಿಯೆಯಲ್ಲಿ ಸಕ್ರೀಯ ಬಾಗವಹಿಸುವಿಕೆ ತುಂಬಾನೆ ಮುಖ್ಯವಾಗಿದೆ. ಚುನಾವಣಾ ಆಯೋಗ ಹಾಗೂ ಮತದಾರರ ನೋಂದಣಾಧಿಕಾರಿಗಳ ನಿರ್ದೇಶನದಂತೆ ಆಯೋಜಿಸಿರುವ ವಿಶೇಷ ಅಭಿಯಾನಗಳ ಪ್ರಯೋಜನ ಪಡೆದು ಹೆಚ್ಚಿನ ಸಂಖ್ಯೆಯಲ್ಲಿ ಹೆಸರು ನೊಂದಾಯಿಸುವಂತೆ ಅರ್ಹ ಮತದಾರರಲ್ಲಿ ಡಿ.ಸಿ. ಮನವಿ ಮಾಡಿದ್ದಾರೆ.

ಹೆಸರು ಸೇರ್ಪಡೆಗೆ‌ ನವೆಂಬರ್ 6 ಕೊನೆ‌ ದಿನ: ಅರ್ಹತಾ ದಿನಾಂಕ 01.11.2023 ಆಧರಿಸಿ ಪರಿಷ್ಕರಣೆ ಕಾರ್ಯ ನಡೆದಿದೆ. ಈ ಹಿಂದಿನ ಮತದಾರರ ಪಟ್ಟಿಯಲ್ಲಿ ಹೆಸರು ಇರುವ ಮತದಾರರು ಸಹ ನಮೂನೆ-18ರಲ್ಲಿ ಹೊಸದಾಗಿ ಅರ್ಜಿ ಸಲ್ಲಿಸಿ ಹೆಸರು ನೊಂದಣಿ ಮಾಡಿಕೊಳ್ಳಬೇಕಾಗಿರುತ್ತದೆ. ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸಲು 2023ರ ನವೆಂಬರ್ 6 ಕೊನೆ ದಿನವಾಗಿದ್ದು, ಕೊನೆ ದಿನದ ವರೆಗೆ ಕಾಯದೆ ಕೂಡಲೆ ಹೆಸರು ನೊಂದಾಯಿಸಿಕೊಳ್ಳುವಂತೆ ಜಿಲ್ಲಾಧಿಕಾರಿಗಳು‌ ಮನವಿ ಮಾಡಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here