ಮೈಸೂರು; ಮೈಸೂರಿನಲ್ಲಿ ನಡೆಯುತ್ತಿರುವ ವಿಶ್ವವಿಖ್ಯಾತ ಮೈಸೂರು ದಸರಾ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಭೂಸನೂರಿನ ಪ್ರತಿಭೆ ಪವಿತ್ರಾ ಅವರು ವಚನ ಸಂಗೀತ ಕಾರ್ಯಕ್ರಮ ನೀಡಿ ಜನಮನ ಸೂರೆಗೊಂಡರು.
ಆಕಾಶವಾಣಿ ಹಾಗೂ ದೂರದರ್ಶನ ಸುಗಮ ಸಂಗೀತ ಗ್ರೇಡ್ ಕಲಾವಿದೆಯಾಗಿರುವ ಪವಿತ್ರಾ ವಿಶ್ವನಾಥ ರಾಜನಾಳ ಅವರ ಸುಗಮ ಸಂಗೀತ ಕಾರ್ಯಕ್ರಮ ಸಭಿಕರಿಗೆ ರಸದೌತಣ ನೀಡಿತು.
ಪವಿತ್ರಾ ಅವರು ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಭೂಸನೂರ ಗ್ರಾಮದ ಸಂಗೀತ ಮನೆತನದ ಹಿರಿಯ ಕಲಾವಿದರಾದ ಗುರುಶಾಂತಯ್ಯ ಸ್ಥಾವರಮಠ ಅವರ ಮಗಳಾಗಿದ್ದು ಗುಲಬರ್ಗಾ ವಿಶ್ವವಿದ್ಯಾಲಯದಿಂದ ಸಂಗೀತದಲ್ಲಿ ಚಿನ್ನದ ಪದಕ ಪಡೆದುಕೊಂಡಿದ್ದಾರೆ.
ಆಕಾಶವಾಣಿ ಹಾಗೂ ದೂರದರ್ಶನದ ಕಲಾವಿದೆಯಾಗಿರುವ ಇವರು ಪ್ರಸ್ತುತ ದಸರಾ ಸಾಂಸ್ಕøತಿಕ ಕಾರ್ಯಕ್ರಮದಲ್ಲಿ ಸುಗಮ ಸಂಗೀತದಲ್ಲಿ ವಚನ, ಭಾವಗೀತೆ, ದಾಸ ವಾಣಿ ಸೇರಿದಂತೆ ಅನೇಕ ಗೀತೆಗಳನ್ನು ಹಾಡಿ ನೆರೆದಿದ್ದ ಜನರನ್ನು ಗಂಧರ್ವ ಲೋಕಕ್ಕೆ ಕೊಂಡೊಯ್ಯುವ ಮೂಲಕ ಸಂಗೀತ ಕಾರ್ಯಕ್ರಮಕ್ಕೆ ಮೆರಗು ನೀಡಿದರು.
ಇವರಿಗೆ ಲಿಂಗಾನಂದ ಚಿಕ್ಕಮಠ ಹಾರ್ಮೋನಿಯಂ ಸಾಥ್, ವೀರಭದ್ರಯ್ಯ ಸ್ಥಾವರಮಠ ತಬಲಾ ಸಾಥ್ ನೀಡಿದರೆ, ಸವಿತಾ ವೀರಭದ್ರಯ್ಯ ಅವರು ತಾಳವಾದ್ಯ ಸಾಥ್ ನೀಡಿದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…