ಬಿಸಿ ಬಿಸಿ ಸುದ್ದಿ

ಶ್ರೀನಿವಾಸ ಸರಡಗಿ ಮಹಾಲಕ್ಷ್ಮೀ ಶಕ್ತಿ ಪೀಠದಲ್ಲಿ ಅ.24.ರಂದು 11ನೇ ದಸರಾ ದರ್ಬಾರ

ಕಲಬುರಗಿ: ತಾಲೂಕಿನ ಶ್ರೀನಿವಾಸ್ ಸರಡಗಿ ಗ್ರಾಮದ ಮಹಾಕ್ಷ್ಮೀ ಶಕ್ತಿ ಪೀಠದ 11ನೇ ದಸರಾ ದರ್ಬಾರದ ಪ್ರಯುಕ್ತ 2ನೇ ಮೈಸೂರು ಮಾದರಿಯಲ್ಲಿ ಜಂಬೂ ಸವಾರಿ ಭವ್ಯ ಮೆರವಣಿಗೆ ಹಾಗೂ ತುಲಾಭಾರ ಮತ್ತು ಭಾವೈಕ್ಯ ಧರ್ಮಸಭೆ ಅ. 24 ರಂದು ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರಗುವವು.

ಶಕ್ತಿಪೀಠಾಧಿಪತಿಗಳಾದ ಡಾ. ಅಪ್ಪಾರಾವ ದೇವಿ ಮುತ್ಯಾ ಇವರ ಅಪ್ಪಣೆಯ ಮೇರೆಗೆ ಜರಗಲಿದೆ. 24. ರಂದು ವಿಜಯದಶಮಿ ಮಂಗಳವಾರ ಬೆಳಗ್ಗೆ 6 ಗಂಟೆಗೆ ದೇವಿಯ ಮಹಾಭಿಷೇಕ ಮಹಾಅಲಂಕಾರ, ಮಹಾನೈವಿದ್ಯ ಮಧ್ಯಾಹ್ನ 12.30 ಗಂಟೆಗೆ ಜಂಬೂ ಸವಾರಿ ಭವ್ಯ ಮೆರವಣಿಗೆಯನ್ನು ಗ್ರಾಮೀಣ ವಿಭಾಗದ ಡಿ.ವಾಯ್.ಎಸ್.ಪಿ ಉಮೇಶ ಚಿಕ್ಮಠ ಹಾಗೂ ವಿಶ್ವವಿದ್ಯಾಲಯ ಪೆÇಲೀಸ್ ಠಾಣೆಯ ಪೆÇಲೀಸ್ ಸರ್ಕಲ್ ಇನ್ಸಪೆಕ್ಟರ್ ಸುಶೀಲಕುಮಾರ ಉದ್ಘಾಟಿಸುವರು. ನಂತರ ಮೈಸೂರು ಮಾದರಿಯಲ್ಲಿ ಗ್ರಾಮದ ಪ್ರಮುಖ ರಾಜ ಬೀದಿಯಿಂದ ಶ್ರೀ ದೇವಿಯ ಶಕ್ತಿಪೀಠದವರೆಗೆ ಆನೆ ಅಂಬಾರಿ ಮೇಲೆ ಜಂಬೂ ಸವಾರಿ ಹಾಗೂ ಈ ನಾಡಿನ ಅನೇಕ ನುರಿತ ಕಲಾ ತಂಡಗಳಿಂದ ಸಾಂಸ್ಕøತಿಕ ಕಾರ್ಯಕ್ರಮ ಜರಗುವುದು.

ಸಾಯಂಕಾಲ 5. 45 ಗಂಟೆಗೆ ಪರೇಡ್ ಕವಾಯತ್ ಮುಖಾಂತರ ಬನ್ನಿ ಮುಡಿಯುವ ಕಾರ್ಯಕ್ರಮ ಸಾಯಂಕಾಲ 6 ಗಂಟೆಗೆ ಭಾವೈಕ್ಯ ಧರ್ಮಸಭೆ ಜರುಗವುದು. ವಿವಿಧ ಕ್ಷೇತ್ರದಲ್ಲಿ ಶ್ರಮಿಸಿದ ಗಣ್ಯರಿಗೆ ಸುಕ್ಷೇತ್ರ ಶ್ರೀನಿವಾಸ ಸರಡಗಿ ಶ್ರೀ ಶಕ್ತಿಪೀಠದ ವತಿಯಿಂದ ಪ್ರಶಸ್ತಿ ಪ್ರದಾನದೊಂದಿಗೆ ಗೌರವಿಸಲಾಗುವದು. ಪೂಜ್ಯರಿಗೆ ತುಲಾಭಾರ ಸೇವೆ ಜರುಗುವುದು.

ಭಾವೈಕ್ಯ ಧರ್ಮಸಭೆ ಸಾ. 6 ಗಂಟೆಗೆ ಶ್ರೀ ಸರಡಗಿ ಅನ್ನಪೂರ್ಣೇಶ್ವರಿ ಬಸವಕಲ್ಯಾಣ ಸಂಸ್ಥಾನ ಮಕ್ಕಳಿಂದ ಹಾಗೂ ಶ್ರೀ ಸರಡಗಿ ಶಕ್ತಿ ಇಂಗ್ಲೀಷ್ ಮಿಡಿಯಮ್ ಸ್ಕೂಲ್ ಕಲಬುರಗಿ ರೂಪಕ ಸಾಂಸ್ಕøತಿಕ ಕಾರ್ಯಕ್ರಮ ಮುಗಳನಾಗಾಂವ ಕಟ್ಟಮನಿ ಹಿರೇಮಠದ ಶ್ರೀ ಷ.ಬ್ರ. ಅಭಿನವ ಸಿದ್ಧಲಿಂಗ ಶಿವಾಚಾರ್ಯರು, ಇವರು ಸಾನಿಧ್ಯ ವಹಿಸುವರು.

ಭರತನೂರ ವಿರಕ್ತಮಠದ ಶ್ರೀ ಮ.ನಿ.ಪ್ರ. ಚಿಕ್ಕಗುರುನಂಜೇಶ್ವರ ಮಹಾಸ್ವಾಮಿಗಳು, ಶ್ರೀ ಷ.ಬ್ರ ವೀರಭದ್ರ ಶಿವಾಚಾರ್ಯರು, ಪೂಜ್ಯ ಶ್ರೀ ಶರಣಯ್ಯ ಸ್ವಾಮಿಗಳು ಇವರು ಉಪಸ್ಥಿತಿ ಇರುವರು. ಸಚಿವರಾದ ಡಾ.ಶರಣಪ್ರಕಾಶ ಪಾಟೀಲ ಕಾರ್ಯಕ್ರಮ ಉದ್ಘಾಟಿಸುವರು.

ಗ್ರಾಮೀಣ ಮತಕ್ಷೇತ್ರದ ಶಾಸಕ ಬಸವರಾಜ ಮತ್ತಿಮೂಡ ಅಧ್ಯಕ್ಷತೆ ವಹಿಸುವರು. ಶಾಸಕ ಅಲ್ಲಮಪ್ರಭು ಪಾಟೀಲ, ವಿಧಾನ ಪರಿಷತ್ ಸದಸ್ಯರಾದ ಬಿ.ಜಿ.ಪಾಟೀಲ, ತಿಪ್ಪಣಪ್ಪ ಕಮಕನೂರ, ಮಾಜಿ ಶಾಸಕ ದತ್ತಾತ್ರೇಯ ಸಿ. ಪಾಟೀಲ ರೇವೂರ, ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸೋಮಶೇಖರ ಗೋನಾಯಕ, ಸ.ನೌ.ಸಂಘದ ಅಧ್ಯಕ್ಷ ರಾಜು ಲೇಂಗಟಿ, ಕಾಂಗ್ರೇಸ್ ಮುಖಂಡ ನೀಲಕಂಟರಾವ ಮೂಲಗೆ, ಬಿಜೆಪಿ ಮುಖಂಡ ಪ್ರದೀಪ ವಾತಡೆ, ಮಾಜಿ ತಾ.ಪಂ.ಅಧ್ಯಕ್ಷ ಸಂಗಮೇಶ ನಾಗನಳ್ಳಿ, ಬಿಜೆಪಿ ಗ್ರಾಮೀಣ ಮಂಡಲ ಅಧ್ಯಕ್ಷ ಸಂಗಮೇಶ ವಾಲಿ, ಮಾಜಿ ವಿ.ಪಕ್ಷದ ನಾಯಕ ಆರ್.ಎಸ್.ಪಾಟೀಲ ಸೇರಿದಂತೆ ವಿವಿಧ ರಾಕೀಯ ಮುಖಂಡರು ಮುಖ್ಯ ಅತಿಥಿಗಳಾಗಿ ಆಗಮಿಸುವರು. ಮದ್ದು ಸುಡುವ ಕಾರ್ಯಕ್ರಮವನ್ನು ಸೋಲಾಪೂರ ಸದ್ಭಕ್ತರಿಂದ ಜರುಗುವುದು.

ಶ್ರೀ ದೇವಿಯ ಪವಿತ್ರ ಕಾರ್ಯಕ್ರಮದಲ್ಲಿ ಕರ್ನಾಟಕ, ಆಂಧ್ರ ಪ್ರದೇಶ, ಮಹಾರಾಷ್ಟ್ರ, ಆಂಧ್ರಪ್ರದೇಶ ಹಾಗೂ ಗ್ರಾಮಸ್ಥರು, ಸಕಲ ಸದ್ಭಕ್ತರು ಆಗಮಿಸಿ ದೇವಿಯ ಕೃಪೆಗೆ ಪಾತ್ರರಾಗಬೇಕೆಂದು ಶಕ್ತಿ ಪೀಠದ ಕಾರ್ಯದರ್ಶಿ ವಿಶ್ವನಾಥ ಪಾಟೀಲ್ ಬೆನೂರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

emedialine

Recent Posts

ಬೆಂಗಳೂರು: ಸೇವಾದಳ ಯಂಗ್ ಬ್ರಿಗೇಡ್‌ನಿಂದ ಸದಸ್ಯತ್ವ ಅಭಿಯಾನಕ್ಕೆ ಚಾಲನೆ

ಕಲಬುರಗಿ: ಕಾಂಗ್ರೆಸ್ ಪಕ್ಷದ ಅಂಗ ಸಂಖ್ಯೆ ಸೇವಾದಳ ಯಂಗ್ ಬ್ರಿಗೇಡ್ ಸದಸ್ಯತ್ವ ಅಭಿಯಾನ ನ.20ರಿಂದ ರಾಜ್ಯವ್ಯಾಪಿ ಆರಂಭ ಮಾಡಲಾಗಿದ್ದು, ಆಸಕ್ತರು…

1 hour ago

ಆತ್ಮವಿಶ್ವಾಸವಿದ್ದರೆ ಜೀವನದಲ್ಲಿ ಏನನ್ನಾದರೂ ಸಾಧಿಸಬಹುದು : ಶಂಕರಗೌಡ

ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…

12 hours ago

ಬೌದ್ಧಿಕ ವಿಕಾಸದಿಂದ ತನ್ನತನದ ಶೋಧ

ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…

12 hours ago

ನಿಧನ ವಾರ್ತೆ; ಆನಂದಪ್ಪ ಉಮ್ಮನಗೋಳ್

ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…

14 hours ago

ಸಂಘಸಂಸ್ಥೆಗಳು ಸಮಾಜಕ್ಕೆ ನೀಡಿದ ಕೋಡುಗೆ ಅಪಾರ ಪಾಳಾಶ್ರೀ

ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…

14 hours ago

ಹೊಸ ಹೊಸ ಉದ್ಯೋಗ ಸೃಷ್ಟಿಸಲು HKE ಸಂಸ್ಥೆ ಕಾರ್ಯ ಶ್ಲಾಘನೀಯ

ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…

14 hours ago