ಮನ್ನೂರ ಆಸ್ಪತ್ರೆಯಲ್ಲಿ ವಿಶ್ವ ಆಘಾತ ಜಾಗೃತಿ ದಿನ ಆಚರಣೆ

0
17

ತುರ್ತು ಜೀವರಕ್ಷಕ ಚಿಕಿತ್ಸೆಗಾಗಿ ತರಬೇತಿ ಅವಶ್ಯಕ : ಡಾ.ಫಾರುಕ್ ಮನ್ನೂರ

ಕಲಬುರಗಿ: ನಮ್ಮ ಸುತ್ತಮುತ್ತ ಇರುವ ವ್ಯಕ್ತಿಗಳಿಗೆ ರಸ್ತೆ ಅಪಫಾತ ಅಥವಾ ಹಠಾತ್ ಹೃದಯಾಘಾತ, ಇನ್ನು ಯಾವುದಾದರೂ ಅವಘಡಗಳಾಗಿ ಆಘಾತಕ್ಕೀಡಾದಾಗ ಏನು ಮಾಡುವುದು ಎನ್ನುವುದು ತೋಚುವುದೇ ಇಲ್ಲ. ಪ್ರಾಥಮಿಕ ಚಿಕಿತ್ಸೆಯಿಂದ ದೊಡ್ಡ ತೊಂದರೆ ಉಂಟಾಗದಂತೆ ತಡೆಯುವ ನಿಟ್ಟಿನಲ್ಲಿ ಹಲವಾರು ಜನರಿಗೆ ಸರಿಯಾದ ತಿಳುವಳಿಕೆಯೇ ಇರುವುದಿಲ್ಲ. ವೈದ್ಯಕೀಯ ಚಿಕಿತ್ಸೆಗೆ ಅವರನ್ನುಕೊಂಡೊಯುವರೆಗಿನ ಅಮೂಲ್ಯ ಸಮಯ ಉಳಿಸುವ ನಿಟ್ಟಿನಲ್ಲಿ ಸಾಮಾನ್ಯವಾದ ತುರ್ತು ಜೀವರಕ್ಷಕ ಚಿಕಿತ್ಸೆಗಳ ತರಬೇತಿ ಪಡೆದುಕೊಳ್ಳುವುದು ತುಂಬಾ ಅವಶ್ಯಕವಾಗಿದೆ ಎಂದು ಮನ್ನೂರ ಮಲ್ಟಿಸ್ಪೇಷಾಲಿಟಿ ಆಸ್ಪತ್ರೆಯ ಮುಖ್ಯಸ್ಥ ಡಾ. ಫಾರುಕ್ ಅಹ್ಮದ ಮನ್ನೂರ ತಿಳಿಸಿದ್ದಾರೆ.

ಕಳೆದ 3 ವರ್ಷದಲ್ಲಿ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡವರ ಚಿಕಿತ್ಸೆ ಯಶಸ್ವಿಆಗಿದ್ದು ಮೊದಲು ಜನರು ಚಿಕಿತ್ಸೆಗಾಗಿ ಹೈದ್ರಾಬಾದ್, ಸೋಲಾಪುರ, ಬೆಂಗಳೂರಿಗೆ ಹೊಗುತ್ತಿದ್ದರು ಇವಾಗ ಕಲಬುರಗಿಯಲ್ಲಿ ಜನರು ಚಿಕಿತ್ಸೆ ಪಡೆಯುತ್ತಿದ್ದಾರೆ. ಡಾ. ಫಾರುಕ್ ಅಹ್ಮದ ಮನ್ನೂರ, ಮುಖ್ಯಸ್ಥರು‌ ಮನ್ನೂರ ಮಲ್ಟಿಸ್ಪೇಷಾಲಿಟಿ ಆಸ್ಪತ್ರೆ.

ಕಲಬುರಗಿಯ ರಿಂಗ್ ರಸ್ತೆಯಲ್ಲಿರುವ ಪ್ರತಿಷ್ಠಿತ ಮನ್ನೂರ ಮಲ್ಟಿಸ್ಪೇಷಾಲಿಟಿ ಆಸ್ಪತ್ರೆಯಲ್ಲಿ ವಿಶ್ವ ಆಘಾತ ಜಾಗೃತಿದಿನ (ಟ್ರೋಮಾ ಡೇ)ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

Contact Your\'s Advertisement; 9902492681

ತುರ್ತು ಸಂದರ್ಭಗಳಲ್ಲಿ ರೋಗಿಗಳಿಗೆ ನೀಡುವ ಪ್ರಾಥಮಿಕ ಚಿಕಿತ್ಸೆ ಅವರ ಜೀವವನ್ನು ಉಳಿಸುವ ನಿಟ್ಟಿನಲ್ಲಿ ಬಹಳ ಸಹಕಾರಿ. ಅದರಲ್ಲೂ ವೈದ್ಯಕೀಯ ಸೌಲಭ್ಯಕ್ಕೆ ಅವರನ್ನು ಸಾಗಿಸುವ ಮುನ್ನ ಅಮೂಲ್ಯ ಸಮಯದಲ್ಲಿ ನೀಡುವ ಚಿಕಿತ್ಸೆ ಬಹಳಷ್ಟು ಪರಿಣಾಮಕಾರಿಯಾಗಿದೆ ಎಂದರು.

ಈ ಬಗ್ಗೆ ಜನರಲ್ಲಿ ಜಾಗೃತಿಯನ್ನು ಮೂಡಿಸಬೇಕು ಹಾಗೂ ಅವರಿಗೆ ಜೀವರಕ್ಷಕ ಪ್ರಾಥಮಿಕ ಚಿಕಿತ್ಸೆಯ ಬಗ್ಗೆ ಸುಲಭವಾಗಿ ತರಬೇತಿಯನ್ನು ನೀಡುವುದು ನಮ್ಮ ಮುಖ್ಯ ಉದ್ದೇಶವಾಗಿದೆ. ಮುಂದಿನ ದಿನಗಳಲ್ಲಿ ಕಲಬುರಗಿ, ಬೀದರ್,ಯಾದಗಿರಿ ಜಿಲ್ಲೆಯ ಪ್ರತಿ ತಾಲೂಕು ಮಟ್ಟದಲ್ಲಿ ಜನರಿಗೆ ನಮ್ಮ ಆಸ್ಪತ್ರೆಯ ವೈದ್ಯರ ತಂಡದಿಂದ ಜಾಗೃತಿ ಮೂಡಿಸುವ ಕಾರ್ಯಕ್ರಮ ಹಾಗೂ ಉಚಿತ ಆರೋಗ್ಯ ತಪಾಸಣೆ ಶಿಬಿರ ಆಯೋಜಿಸಲಾಗುವುದು ಎಂದು ತಿಳಿಸಿದ್ದರು.

ಈ ಸಂದರ್ಭದಲ್ಲಿ ವೈದ್ಯರಾದ ಡಾ.ಮಿನಾಜ್ ಹರಸೂರಿ, ಡಾ,ವಿವೇಶ ವಿರೇಶ, ಡಾ. ಪೈಜುಲ್, ಡಾ. ಸಫಿಯಾ ತರನೂಮ್, ಡಾ,ಲಕ್ಷ್ಮಿಕಾಂತ ಮೇತ್ರಿ ಸೇರಿದಂತೆ ಆಸ್ಪತ್ರೆಯ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here