ಕಲಬುರಗಿ: ಬಿಜೆಪಿ ಮುಖಂಡನ ಆತ್ಮಹತ್ಯೆಗೆ ಹೊಸ ತಿರುವು

0
45

ಕಲಬುರಗಿ: ಸೇಡಂ ತಾಲ್ಲೂಕಿನ ಶಿರೋಳ್ಳಿ ಗ್ರಾಮದ ಶಿವಕುಮಾರ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ತಿರುವ ಪಡೆದುಕೊಂಡಿದೆ, ಆತ್ಮಹತ್ಯೆಗೆ ಸಾಲದ ಹೊರೆ ಕಾರಣವಾಗಿದೆ ಎಂದು ಕುಟುಂಸ್ಥರು ಸುಲೆಪೇಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ.

ಇತ್ತ ಬಿಜೆಪಿ ಮುಖಂಡರು ಶಿವಕುಮಾರ ಪೂಜಾರಿ ಬಿಜೆಪಿ ಮುಖಂಡರಾಗಿದ್ದು, ಆತ್ಮಹತ್ಯೆಗೆ ಮಾಜಿ ಸಚಿವ ಶರಣ ಪ್ರಕಾಶ್ ಪಾಟೀಲ್ ರ ಬೆಂಬಲಿಗರು ಕಾರಣ ಎಂದು ಸೇಡಂ ಕ್ಷೇತ್ರದ ಬಿಜೆಪಿ ಮಾಜಿ ಶಾಸಕ ರಾಜಕುಮಾರ್ ಪಾಟೀಲ್ ತೆಲ್ಲೂಕುರ್ ಅವರು ವೈದ್ಯಕೀಯ ಸಚಿವ ಶರಣಪ್ರಕಾಶ್ ಪಾಟೀಲ್  ಗುರುವಾರ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಆಡಿಯೋ ಬಿಡುಗಡೆ ಮಾಡಿ ಗಂಭೀರ ಆರೋಪ ಮಾಡಿದರು.

Contact Your\'s Advertisement; 9902492681

ಗುರುವಾರ ಬೆಳಿಗ್ಗೆ ಆತ್ಮಹತ್ಯೆಗೆ ಶರಣಾದ ಶಿವಕುಮಾರ್ ಅವರ ಕುಟುಂಬಸ್ಥರು ಕೆಜಿಬಿ ಬ್ಯಾಕ್ ನಿಂದ 70 ಸಾವಿರ ಸಾಲ ಸೇರಿದ ಖಾಸಿ 10-12 ಲಕ್ಷ ಸಾಲ ಪಡೆದಿದ್ದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಸುಲೆಪೇಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಇತ್ತ ಬಿಜೆಪಿ ನಾಯಕರು ಶಿವಕುಮಾರ ಆತ್ಮಹತ್ಯೆಗೆ ಕಾಂಗ್ರೆಸ್ ಕಾರ್ಯಕರ್ತರು ಕಾರಣ. ಕಾಂಗ್ರೆಸ್ ಜಿಲ್ಲೆಯಲ್ಲಿ ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರ ಮೇಲೆ ದಾಳಿ ಮತ್ತು ದೌರ್ಜನ್ಯಗಳು ನಡೆಸಲಾಗುತ್ತಿದೆ ಎಂದು ಆರೋಪಿಸಿ ಹೋರಾಟಕ್ಕೆ ಬಿಜೆಪಿ ಪಕ್ಷದ ನಾಯಕರು ತಯಾರಿ ನಡೆಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here