ಬಿಸಿ ಬಿಸಿ ಸುದ್ದಿ

ಗ್ರಂಥ ಬಿಡುಗಡೆ-ಧ್ವನಿಸುರುಳಿ ಲೋಕಾರ್ಪಣೆ 23 ರಂದು

ಚಿತ್ತಾಪುರ: ತಾಲ್ಲೂಕಿನ ನಾಲವಾರದ ಶ್ರೀ ಕೋರಿಸಿದ್ಧೇಶ್ವರ ಮಹಾಸಂಸ್ಥಾನ ಮಠದಲ್ಲಿ ಪ್ರಸ್ತುತ ಪೀಠಾಧಿಪತಿಗಳಾದ ಪೂಜ್ಯ ಶ್ರೀ ಡಾ.ಸಿದ್ಧತೋಟೇಂದ್ರ ಶಿವಾಚಾರ್ಯ ಮಹಾಸ್ವಾಮಿಗಳ ಜನ್ಮದಿನೋತ್ಸವ ಹಾಗೂ ಪೂರ್ವ ಪೀಠಾಧಿಪತಿಗಳಾಗಿದ್ದ ಲೀಲಾಮೂರ್ತಿ ಲಿಂ.ತೋಟೇಂದ್ರ ಶಿವಯೋಗಿಗಳ ಪುಣ್ಯಸ್ಮರಣೋತ್ಸವ ಕಾರ್ಯಕ್ರಮ ಇದೇ ಅಕ್ಟೋಬರ್ 23 ರ ಆಯುಧಪೂಜೆಯ ದಿನದಂದು ಅದ್ಧೂರಿಯಾಗಿ ನಡೆಯಲಿವೆ ಎಂದು ಶ್ರೀಮಠದ ವಕ್ತಾರ ಮಹಾದೇವ ಕೆ ಗಂವ್ಹಾರ ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದಾರೆ.

ಆಯುಧಪೂಜೆಯ ದಿನದಂದು ಶ್ರೀಮಠದ ಆವರಣದಲ್ಲಿ ನಿರ್ಮಿಸಲಾಗಿರುವ ಮಂದಿರಗಳಲ್ಲಿ ಆದಿಶಕ್ತಿ ಸ್ವರೂಪಿಣಿ ಎಲ್ಲಮ್ಮ ದೇವಿಯ ಹಾಗೂ ನಂದಿ ವಿಗ್ರಹಗಳ ನೂತನ ಮೂರ್ತಿ ಪ್ರತಿಷ್ಠಾಪನೆ,ಸಂಜೆ ಲಿಂ.ತೋಟೇಂದ್ರ ಶಿವಯೋಗಿಗಳ ಗದ್ದುಗೆಗೆ ವಿಶೇಷ ಪೂಜೆ ಹಾಗೂ ಮಹಾಮಂಗಳಾರತಿ ನೆರವೇರಲಿವೆ.

ರಾತ್ರಿ 8 ಗಂಟೆಗೆ ಪ್ರಸ್ತುತ ಪೀಠಾಧಿಪತಿಗಳಾದ ಪೂಜ್ಯ ಡಾ. ಸಿದ್ಧತೋಟೇಂದ್ರ ಶಿವಾಚಾರ್ಯ ಮಹಾಸ್ವಾಮಿಗಳ ಜನ್ಮದಿನೋತ್ಸವ ಕಾರ್ಯಕ್ರಮ ನಾಡಿನ ಹಿರಿಯ ಮಠಾಧೀಶರ ಸಮ್ಮುಖದಲ್ಲಿ ನಡೆಯಲಿದ್ದು ಸಮಾರಂಭವನ್ನು ಕೇಂದ್ರ ಸರಕಾರದ ರಾಸಾಯನಿಕ ಗೊಬ್ಬರ ಖಾತೆ ರಾಜ್ಯ ಸಚಿವ ಭಗವಂತ ಖೂಬಾ ಉದ್ಘಾಟಿಸಲಿದ್ದಾರೆ.

ರಾಜ್ಯ ಸರಕಾರದ ಸಣ್ಣ ಕೈಗಾರಿಕಾ ಖಾತೆ ಸಚಿವರಾದ ಶರಣಬಸಪ್ಪಗೌಡ ದರ್ಶನಾಪೂರ ಅವರು ಡಾ.ಸಿದ್ಧತೋಟೇಂದ್ರ ಶ್ರೀಗಳು ರಚಿಸಿದ ‘ಆ ಬಾನು ಆ ಚುಕ್ಕಿ, ಈ ಭುಮಿ ಈ ಹಕ್ಕಿ,ಮತ್ತೆಲ್ಲವೂ’ ಗ್ರಂಥವನ್ನು ಬಿಡುಗಡೆ ಗೊಳಿಸಲಿದ್ದಾರೆ.

ಕರ್ನಾಟಕ ಸರಕಾರದ ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯ ಅಭಿವೃದ್ಧಿ ಸಚಿವರಾದ ಡಾ. ಶರಣ್ ಪ್ರಕಾಶ್ ಪಾಟೀಲ್ ಶ್ರೀಗಳ ವಚನೋಲ್ಲಾಸ ಗ್ರಂಥದ ವಚನಗಳ ಧ್ವನಿಸುರುಳಿ ಲೋಕಾರ್ಪಣೆಗೊಳಿಸಲಿದ್ದಾರೆ.

ಕೆಕೆಆರಡಿಬಿ ಅಧ್ಯಕ್ಷರಾಗಿ ನೇಮಕವಾಗಿರುವ ಡಾ.ಅಜಯ ಧರ್ಮಸಿಂಗ್ ಅವರಿಗೆ ವಿಶೇಷ ಸನ್ಮಾನ ನೆರವೇರಲಿದೆ. ಮುಖ್ಯ ಅತಿಥಿಗಳಾಗಿ ಕಲ್ಬುರ್ಗಿ ಸಂಸತ್ ಸದಸ್ಯ ಡಾ ಉಮೇಶ್ ಜಾದವ್. ಹರಪನಹಳ್ಳಿ ಶಾಸಕರಾದ ಶ್ರೀಮತಿ ಲತಾ ಮಲ್ಲಿಕಾರ್ಜುನ, ತೆಲಂಗಾಣ ರಾಜ್ಯದ ಶಾಸಕರಾದ ಪೈಲೆಟ್ ರೋಹಿತ್ ರೆಡ್ಡಿ.ಕಲಬುರಗಿ ದಕ್ಷಿಣ ಕ್ಷೇತ್ರದ ಶಾಸಕರಾದ ಅಲ್ಲಮಪ್ರಭು ಪಾಟೀಲ, ಅಫಜಲಪುರ ಶಾಸಕ ಎಂ.ವೈ.ಪಾಟೀಲ, ಕಲಬುರಗಿ ಗ್ರಾಮೀಣ ಶಾಸಕ ಬಸವರಾಜ ಮತ್ತಿಮಡು,ಯಾದಗಿರಿ ಶಾಸಕ ಚನ್ನಾರೆಡ್ಡಿ ಪಾಟೀಲ ತುನ್ನೂರ,
ಗುರುಮಠಕಲ್ ಶಾಸಕ ಶರಣಗೌಡ ಕಂದಕೂರ, ಬೀದರ್ ಶಾಸಕ ಡಾ ಶೈಲೇಂದ್ರ ಬೆಲ್ದಾಳೆ. ವಿಧಾನಪರಿಷತ್ ಸದಸ್ಯ ಬಿ.ಜಿ.ಪಾಟೀಲ, ಮಾಜಿ ಶಾಸಕರಾದ ಶ್ರೀ ರಾಜಕುಮಾರ್ ಪಾಟೀಲ್ ತೇಲ್ಕೂರ್ ಶ್ರೀ ದೊಡ್ಡಪ್ಪಗೌಡ ಪಾಟೀಲ ನರಿಬೋಳ ಶ್ರೀ ದತ್ತಾತ್ರೇ ಪಾಟೀಲ್ ರೇವೂರ್ ವೆಂಕಟರೆಡ್ಡಿ ಗೌಡ ಮುದ್ನಾಳ್ ಖ್ಯಾತ ವೈದ್ಯರಾದ ಡಾ ಎಸ್ ಪಿ ಕಾಮ್ ರೆಡ್ಡಿ ಕಲ್ಬುರ್ಗಿ. ಡಾ ಸಿ ಎಮ್ ಪಾಟೀಲ್ ಯಾದ್ಗೀರ್ ಡಾ. ಶರಣು ಭೂಪಾಲ್ ರೆಡ್ಡಿ ಯಾದಗಿರ್ ಸುರೇಶ್ ಸಜ್ಜನ್ ಆಗಮಿಸಲಿದ್ದಾರೆ.

ಜನ್ಮದಿನೋತ್ಸವ ಪ್ರಯುಕ್ತ ಹಿರಿಯ ಸಾಹಿತಿಗಳಿಂದ ಉಪನ್ಯಾಸ, ನಾಡಿನ ಪ್ರಸಿದ್ಧ ಗಾಯಕರಿಂದ ವಿಶೇಷ ಸಂಗೀತ ರಸಮಂಜರಿ ಕಾರ್ಯಕ್ರಮ, ಪರಮಪೂಜ್ಯ ಶ್ರೀ ಗಳವರಿಗೆ ನಾಣ್ಯಗಳ ತುಲಾಭಾರ, ಶಿವಲಿಂಗ ಭಿಮ್ನಳ್ಳಿ, ಬೆಂಗಳೂರು ಭಕ್ತರಿಂದ ಸಾಧಕರಿಗೆ ಪ ಗುರು ರಕ್ಷೆ ಸನ್ಮಾನ ನಡೆಯಲಿವೆ.

ಆಗಮಿಸುವ ಸಾವಿರಾರು ಭಕ್ತರಿಗೆ ವಿಶೇಷ ಪ್ರಸಾದ ವ್ಯವಸ್ಥೆ ಮಾಡಲಾಗುತ್ತಿದ್ದು,ಸಿದ್ಧತೆಗಳು ಸಮರೋಪಾದಿಯಲ್ಲಿ ನಡೆಯುತ್ತಿವೆ.
ಜನ್ಮದಿನದ ಅಂಗವಾಗಿ ನಾಡಿನ ವಿವಿಧ ಭಾಗಗಳ ಹಲವಾರು ಭಕ್ತರಿಂದ ಪೂಜ್ಯರಿಗೆ ಗೌರವಾರ್ಪಣೆ ನಡೆಯಲಿವೆ.

ಹಿಂದಿನ ಪೀಠಾಧಿಪತಿಗಳ ಪುಣ್ಯ ಸ್ಮರಣೋತ್ಸವ ಹಾಗೂ ಪ್ರಸ್ತುತ ಪೀಠಾಧಿಪತಿಗಳ ಜನ್ಮದಿನೋತ್ಸವ ಕಾರ್ಯಕ್ರಮ ಒಂದೇ ದಿನ ನಡೆಯುವ ವಿಶೇಷ ಕ್ಷಣಗಳನ್ನು ಕಣ್ತುಂಬಿ ಕೊಳ್ಳುವುದಕ್ಕೆ ಕರ್ನಾಟಕ, ಆಂಧ್ರ, ತೆಲಂಗಾಣಾ,ಮಹಾರಾಷ್ಟ್ರ ಸೇರಿದಂತೆ ದೇಶದ ವಿವಿಧ ಭಾಗಗಳ ಸಹಸ್ರಾರು ಭಕ್ತರು ಆಗಮಿಸುತ್ತಾರೆ.

ಭಾವ-ಅನುಭಾವ, ವಚನೋಲ್ಲಾಸ,ಶ್ರಾವಣ ಶುಭತೋರಣ, ಉರಿಯುಂಡ ಕರ್ಪುರ, ಹನಿ-ಅನುಭಾವ, ಯಾತ್ರಾಸ್ಮೃತಿ ಯಂತಹ ತಮ್ಮ ವಿಶಿಷ್ಟ ಕೃತಿಗಳಿಂದ ಕನ್ನಡ ಸಾಹಿತ್ಯ ಲೋಕದಲ್ಲಿ ಗಮನಸೆಳೆದಿರುವ ಡಾ.ಸಿದ್ಧತೋಟೇಂದ್ರ ಶ್ರೀಗಳ ಮತ್ತೊಂದು ಕೃತಿ “ಆ ಬಾನು-ಆ ಚುಕ್ಕಿ, ಈ ಭೂಮಿ -ಈ ಹಕ್ಕಿ,ಮತ್ತೆಲ್ಲವೂ’ ಎನ್ನುವ ಪುಸ್ತಕ ಬಿಡುಗಡೆ ಗೊಳ್ಳುತ್ತಿರುವುದು ಈ ಬಾರಿಯ ವಿಶೇಷ.ಪೂಜ್ಯರು ಬರೆದ ವಚನೋಲ್ಲಾಸ ಕೃತಿಯ ವಚನಗಳು ಧ್ವನಿಸುರುಳಿ ರೂಪದಲ್ಲಿ ಹೊರಬರುತ್ತಿದ್ದು,ಖ್ಯಾತ ಗಾಯಕರು ಧ್ವನಿ ನೀಡಿದ್ದಾರೆ.
ಪೂಜ್ಯರ ಜನ್ಮದಿನದ ಸಂಭ್ರಮದಲ್ಲಿ ಪಾಲ್ಗೊಂಡು ಗುರುವಿನ ಕೃಪೆಗೆ ಪಾತ್ರರಾಗಬೇಕೆಂದು ಮನವಿ ಮಾಡಿದ್ದಾರೆ.

emedialine

Recent Posts

ಆತ್ಮವಿಶ್ವಾಸವಿದ್ದರೆ ಜೀವನದಲ್ಲಿ ಏನನ್ನಾದರೂ ಸಾಧಿಸಬಹುದು : ಶಂಕರಗೌಡ

ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…

5 hours ago

ಬೌದ್ಧಿಕ ವಿಕಾಸದಿಂದ ತನ್ನತನದ ಶೋಧ

ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…

5 hours ago

ನಿಧನ ವಾರ್ತೆ; ಆನಂದಪ್ಪ ಉಮ್ಮನಗೋಳ್

ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…

7 hours ago

ಸಂಘಸಂಸ್ಥೆಗಳು ಸಮಾಜಕ್ಕೆ ನೀಡಿದ ಕೋಡುಗೆ ಅಪಾರ ಪಾಳಾಶ್ರೀ

ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…

7 hours ago

ಹೊಸ ಹೊಸ ಉದ್ಯೋಗ ಸೃಷ್ಟಿಸಲು HKE ಸಂಸ್ಥೆ ಕಾರ್ಯ ಶ್ಲಾಘನೀಯ

ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…

7 hours ago

ಸ್ವಾಭಿಮಾನದ ಬದುಕಿಗೆ ಸಂಗೀತ ಪೂರಕ

ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…

7 hours ago