ಕಲಬುರಗಿ: ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ನೇರ ನೇಮಕಾತಿ ಹಾಗೂ ಬಡ್ತಿ ಮೂಲಕ ತುಂಬ ಬೇಕಾಗಿರುವ ಹುದ್ದೆಗಳನ್ನು ತ್ವರಿತವಾಗಿ ಭರ್ತಿ ಮಾಡಲು ಕ್ರಮ ಕೈಗೊಳ್ಳುವಂತೆ ಕೋರಿ ಎಲ್ಲ ಸಚಿವರಿಗೆ ಹಾಗೂ ಮುಖ್ಯಮಂತ್ರಿಗಳು ಹೊಂದಿರುವ ಖಾತೆಗಳಿಗೆ ಸಂಬಂಧಿಸಿದಂತೆ ಸಚಿವಾಲಯ ಮುಖ್ಯಸ್ಥರಿಗೆ ಭಾರತ ಸಂವಿಧಾನ ಅನುಚ್ಚೇದ 371 (ಜೆ) ಅಡಿ ಹೊರಡಿಸಲಾಗಿರುವ ಆದೇಶಗಳ ಅನುಷ್ಠಾನದ ಪ್ರಗತಿ ಪರಿಶೀಲನೆ ಮತ್ತು ಪರಾಮರ್ಶಿಸುವ ಕುರಿತು ರಚಿಸಲಾಗಿರುವ ಸಚಿವ ಸಂಪುಟ ಉಪ ಸಮಿತಿ ಅಧ್ಯಕ್ಷರೂ ಆದ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಪತ್ರ ಬರೆದಿದ್ದಾರೆ.
ಆಗಸ್ಟ್ 17, 2023 ರಂದು ನಡೆದ ಸಚಿವ ಸಂಪುಟ ಉಪ ಸಮಿತಿ ಸಭೆಯಲ್ಲಿ ತೆಗೆದುಕೊಳ್ಳಲಾದ ತೀರ್ಮಾನದಂತೆ ಕಲ್ಯಾಣ ಕರ್ನಾಟಕ ಪ್ರದೇಶದ ಅಭಿವೃದ್ಧಿಗಾಗಿ ಸ್ಥಳೀಯ ವೃಂದದಲ್ಲಿನ ಮೀಸಲಿರಿಸಿರುವ ಹುದ್ದೆಗಳನ್ನು ತ್ವರಿತವಾಗಿ ಭರ್ತಿ ಮಾಡಬೇಕಿರುವುದರಿಂದ ಸಚಿವ ಪ್ರಿಯಾಂಕ್ ಖರ್ಗೆ ಅವರು ಈ ಪತ್ರಗಳನ್ನು ಸಚಿವರಿಗೆ ಹಾಗೂ ಅಧಿಕಾರಿಗಳಿಗೆ ರವಾನಿಸಿದ್ದಾರೆ.
ಸಂವಿಧಾನ ಅನುಚ್ಛೇದ 371 (ಜೆ) ಅಡಿಯಲ್ಲಿ ಇಲಾಖಾವಾರು ಭರ್ತಿ ಮಾಡಲು ಬಾಕಿ ಇರುವ ನೇರ ನೇಮಕಾತಿ ಹಾಗೂ ಮುಂಬಡ್ತಿಯಲ್ಲಿ ಹುದ್ದೆಗಳ ವಿವರಗಳನ್ನು ಪತ್ರದ ಜೊತೆ ನೀಡಲಾಗಿದೆ. ಕಲ್ಯಾಣ ಕರ್ನಾಟಕ ಭಾಗದಲ್ಲಿ ನೇರ ನೇಮಕಾತಿ ಮೂಲಕ 28,023 ಹುದ್ದೆಗಳನ್ನು ಭರ್ತಿ ಮಾಡಬೇಕಿದ್ದು, ಇವಗಳಲ್ಲಿ 12,945 ಹುದ್ದೆಗಳನ್ನು ಭರ್ತಿ ಮಾಡುವ ಕ್ರಮ ಲೋಕಸೇವಾ ಆಯೋಗ ಹಾಗೂ ಇನ್ನಿತರ ಸಂಸ್ಥೆಗಳ ಮೂಲಕ ನಡೆಯುತ್ತಿದೆ. ಉಳಿದಂತೆ 15,078 ಹುದ್ದೆಗಳು ಖಾಲಿ ಇದ್ದು ಭರ್ತಿ ಪ್ರಕ್ರಿಯೆ ಆರಂಭಗೊಳ್ಳಬೇಕಿದೆ. ಇವುಗಳಲ್ಲಿ ಎ,ಬಿ,ಸಿ ಹಾಗೂ ಡಿ ವೃಂದದ ಹುದ್ದೆಗಳು ಸೇರಿವೆ.
ಕಲ್ಯಾಣ ಕರ್ನಾಟಕ ಭಾಗದಲ್ಲಿ 9,905 ವಿವಿಧ ಹುದ್ದೆಗಳನ್ನು ಬಡ್ತಿ ಮೂಲಕ ತುಂಬ ಬೇಕಿದ್ದು, ಈ ಹುದ್ದೆಗಳನ್ನು ಬಡ್ತಿ ಮೂಲಕ ತುಂಬಲು ಕ್ರಮ ಕೈಗೊಳ್ಳುವಂತೆಯೂ ಸಚಿವ ಪ್ರಿಯಾಂಕ್ ಖರ್ಗೆ ಸಂಪುಟದ ಎಲ್ಲ ಸಚಿವರಿಗೂ ಬರೆದಿರುವ ಪತ್ರದಲ್ಲಿ ಕೋರಿದ್ದಾರಲ್ಲದೆ, ಇಲಾಖೆಯ ಅಧಿಕಾರಿಗಳ ಸಭೆ ಕರೆದು ಈ ನಿಟ್ಟಿನಲ್ಲಿ ಪ್ರಗತಿ ಸಾಧಿಸಲು ಸಹಕಾರ ನೀಡಬೇಕೆಂದೂ ಹೇಳಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…