ಕಲಬುರಗಿ: ಬೆಳೆಗಳಿಗೆ ಕೀಟನಾಶಕ ಸಿಂಪಡಿಸುವ ಸಂದರ್ಭದಲ್ಲಿ ರೈತರು ಅನುಸರಿಸಬೇಕಾದ ಅಗತ್ಯ ಸುರಕ್ಷತಾ ಕ್ರಮಗಳ ಬಗ್ಗೆ ಅಗತ್ಯ ಮಾಹಿತಿ ಹಾಗೂ ಅರಿವು ಮೂಡಿಸಬೇಕು ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಕೃಷಿ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಸಚಿವರು ಮಾತನಾಡುತ್ತಿದ್ದರು.
ಚಿತ್ತಾಪುರ ತಾಲೂಕಿನ ಹಲಕರ್ಟಿ ಗ್ರಾಮದಲ್ಲಿ ನಡೆದ ಘಟನೆಯಲ್ಲಿ ಕೀಟನಾಶಕ ಸಿಂಪಡಿಸಿದ ರೈತರು ಆರೋಗ್ಯ ಸಮಸ್ಯೆ ಎದುರಿಸುತ್ತಿರುವ ಕುರಿತು ಕಳವಳ ವ್ಯಕ್ತಿಪಡಿಸಿದ ಸಚಿವರಾದ ಪ್ರಿಯಾಂಕ್ ಖರ್ಗೆ ಈ ಕುರಿತು ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಸಮದ್ ಪಟೇಲ್ ಅವರಿಂದ ಮಾಹಿತಿ ಪಡೆದರು.
ಸಚಿವರಿಗೆ ಮಾಹಿತಿ ನೀಡಿದ ಪಟೇಲ್, ರೈತರು ಮೊನೊಕ್ರೊಟಫಾಸ್ ಜೊತೆಗೆ ಫಂಗಸ್ ಗಾಗಿ ಬಳಸುವ ಕೀಟನಾಶಕ ಮಿಶ್ರಣ ಮಾಡಿ ಯಾವುದೇ ಸುರಕ್ಷತಾ ಕ್ರಮ ಕೈಗೊಳ್ಳದೆ ಕೇವಲ ಬನಿಯನ್ ಧರಿಸಿ ಸಿಂಪಡಿಸಿದ್ದಾರೆ. ಹಾಗಾಗಿ ಅವರಿಗೆ ಆರೋಗ್ಯ ಸಮಸ್ಯೆ ಎದುರಾಗಿದೆ. ನಾಲವಾರದ ತರಕಸಪೇಟ ಗ್ರಾಮದಲ್ಲಿಯೂ ಕೂಡಾ ಸೋರುತ್ತಿರುವ ಕೀಟನಾಶಕ ಸಿಂಪಡಿಸಿದ್ದರಿಂದ ರೈತರ ಬೆನ್ನಿಗೆ ಗಾಯಗಳಾಗಿವೆ ಎಂದರು.
ಆಗ ಮಧ್ಯೆ ಪ್ರವೇಶಿಸಿದ ಸಚಿವರು ಕೀಟನಾಶಕಗಳ ಬಳಕೆ ಹಾಗೂ ಸಿಂಪಡಿಸುವ ಸಂದರ್ಭದಲ್ಲಿ ಯಾವ ಸುರಕ್ಷತಾ ಕ್ರಮ ಕೈಗೊಳ್ಳಬೇಕೆಂದು ರೈತರಿಗೆ ಅಗತ್ಯ ಮಾಹಿತಿ ಜೊತೆಗೆ ಅರಿವು ನೀಡಬೇಕು ಎಂದು ಸೂಚಿಸಿದರು.
ಜಿಲ್ಲೆಯಲ್ಲಿ ಪ್ರಧಾನ ಮಂತ್ರಿ ಕಿಸಾನ್ ಯೋಜನೆಯಡಿಯಲ್ಲಿ ಸಾಧನೆ ಸ್ಪೂರ್ತಿದಾಯಕವಾಗಿಲ್ಲ ಎಂದು ಅಸಮಧಾನ ವ್ಯಕ್ತಪಡಿಸಿದ ಸಚಿವರು ಈ ಬಗ್ಗೆ ಅಗತ್ಯ ಕ್ರಮವಹಿಸುವಂತೆ ಸೂಚಿಸಿದರು. ಕಳೆದ ವರ್ಷದಲ್ಲಿ ನೆಟೆರೋಗ ಬಂದು ತೊಗರಿ ಸಂಪೂರ್ಣ ಹಾಳಾಗಿತ್ತು. ಈ ಸಲದ ಮುಂಗಾರು ಹಂಗಾಮಿನಲ್ಲಿ ಹೆಸರು ಹಾಗೂ ಉದ್ದು ಹಾಳಾಗಿದೆ ಈಗ ಮತ್ತೆ ತೊಗರಿ ಹಾಳಾಗುತ್ತಿದೆ. ಬಿತ್ತನೆಗೆ ರೈತರು ಸಾಲ ಮಾಡಿಕೊಂಡಿದ್ದಾರೆ. ಈ ಸಂದರ್ಭದಲ್ಲಿ ರೈತರಿಗೆ ಪರಿಹಾರ ದೊರಕಿಸಿಕೊಡುವ ನಿಟ್ಟಿನಲ್ಲಿ ಇಲಾಖೆ ತಕ್ಷಣ ಅಗತ್ಯ ಕ್ರಮಕೈಗೊಳ್ಳಬೇಕು ಎಂದು ನಿರ್ದೇಶನ ನೀಡಿದರು.
ಈ ಸಂದರ್ಭದಲ್ಲಿ ಶಾಸಕರಾದ ಅಲ್ಲಮಪ್ರಭು ಪಾಟೀಲ್, ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್ , ಜಿಪಂ ಸಿಇಓ ಭಂವರಕುಮಾರ ಮೀನಾ, ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ ಹಾಗೂ ಕೃಷಿ ಮತ್ತು ತೋಟಗಾರಿಕೆ ಇಲಾಖೆ ಅಧಿಕಾರಿಗಳು ಇದ್ದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…