ಬಿಸಿ ಬಿಸಿ ಸುದ್ದಿ

ಸಿಎಂ ಸಿದ್ದರಾಮಯ್ಯ ಜೊತೆ ಕೆಕೆಆರ್‌ಡಿಬಿ ಅಧ್ಯಕ್ಷ ಡಾ. ಅಜಯ್ ಸಿಂಗ್‌ ಸುದೀರ್ಘ ಸಭೆ

ಕಲಬುರಗಿ: ಜಿಲ್ಲೆಯ ಜೇವರ್ಗಿ ಹಾಗೂ ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನಲ್ಲಿರುವ ಕೃಷ್ಣಾ ಮೇಲ್ದಂಡೆ ಯೋಜನೆಯ ಅಚ್ಚುಕಟ್ಟು ಪ್ರದೇಶದಲ್ಲಿನ ಜೆಬಿಸಿ., ಎಂಬಿಸಿ ಹಾಗೂ ಎಸ್ಬಿಸಿ, ಮಲ್ಲಾಬಾದ್ ಲಿಫ್ಟ್ 1,2,3, ಕಾಲುವೆಗಳ ವಾರಾಬಂಧಿ ದಿನಾಂಕದಲ್ಲಿ ಸೂಕ್ತ ಬದಲಾವಣೆ ಮಾಡುವ ಕುರಿತು ಬೆಂಗಳೂರಲ್ಲಿ ಶನಿವಾರ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯನವರೊಂದಿಗೆ ಕೆಕೆಆರ್‌ಡಿಬಿ ಅದ್ಯಕ್ಷರು, ಜೇವರ್ಗಿ ಶಾಸಕರಾದ ಡಾ. ಅಜಯ್‌ ಸಿಂಗ್‌ ಹಾಗೂ ಸಣ್ಣ ಕೈಗಾರಿಕೆ ಕಾತೆ ಸಚಿವರು ಹಾಗೂ ಶಹಾಪುರ ಸಾಸಕರಾದ ಶರಣಬಸಪ್ಪ ದರ್ಶನಾಪೂರ ಸುದೀರ್ಘವಾಗಿ ಚರ್ಚಿಸಿ ರೈತರ ಹೆಚ್ಚುವರಿ ನೀರಿನ ಬೇಡಿಕೆಯ ಬಗ್ಗೆ ಗಮನ ಸೆಳೆದರು.

ಕೃಷ್ಣಾ ಮೇಲ್ದಂಡೆ ಯೋಜನೆಯ ಈ ಪ್ರದೇಶದಲ್ಲಿ ಬಿಸಿಲಿ ತಾಪ ಹೆಚ್ಚಾಗಿ ಉಷ್ಣತೆಯಲ್ಲಿ ತೀವ3 ಹೆಚ್ಚಳ ಕಂಡು ಬಂದಿದೆ. ಇದಲ್ಲದೆ ಮಳೆಯ ಕೊರತೆಯಿಂದಾಗಿ ಭೂಮಿಯಲ್ಲಿನ ತೇವಾಂಶವೂ ಒಣಗಿ ಹೋಗಿದೆ. ಹೀಗಾಗಿ ಈಗಾಗಲೇ ಬೆಳೆದು ನಿಂತಿರುವ ತೊಗರಿ, ಹತ್ತಿ ಫಶಲು ಹೂ ಬಿಡುವ ಹಂತದಲ್ಲಿ ನೀರಿನ ಕೊರತೆ ಕಾಡುತ್ತಿದೆ.

ಈ ಪ್ರದೇಶದಲ್ಲಿ ಹೆಚ್ಚಾಗುತ್ತಿರುವ ನೀರಿನ ಬೇಡಿಕೆಯನ್ನು ಪರಿಹರಿಸಲು ಈಗಿರುವ ಕಾಲುವೆಗಳ ನೀರು ಬಿಡುವ ವಾರಾಬಂದಿಯನ್ನು ಹೊಸ ದಿನಾಂಕಗಳೊಂದಿಗೆ ಮರು ಹೊಂದಾಣಿಕೆ ಮಾಡುವ ಮೂಲಕ ಈ ಭಾಗದ ರೈತರಿಗೆ ಅನುಕೂಲ ಮಾಡಿಕೊಡಬೇಕು ಎಂದು ಸಭೆಯಲ್ಲಿ ಕೆಕೆಆರ್‌ಡಿಬಿ ಅಧ್ಯಕ್ಷ ಡಾ. ಅಜಯ್‌ ಸಿಂಗ್‌ ಹಾಗೂ ಸಚಿವರಾದ ಶರಣಬಸಪ್ಪ ದರ್ಶನಾಪುರ ಇಬ್ಬರೂ ಸೇರಿಕೊಂಡು ಸಿಎಂ ಸಿದ್ದರಾಮಯ್ಯನವರ ಗಮನ ಸೆಳೆದರು.

ಕೃಷ್ಣಾ ಅಚ್ಚು ಪ್ರದೇಶದಲ್ಲಿನ ಜೇವರ್ಗಿ, ಶಹಾಪುರ ಭಾಗದಲ್ಲಿರುವ ಮೇಲೆ ಹೇಳಿದ ಕಾಲುವೆಗಳ ಪ್ರದೇಶದಲ್ಲಿ ತಲೆ ದೋರಿರುವ ಈ ಸಮಸ್ಯೆಗೆ ತಾವು ಸೂಕ್ತ ಪರಿಹಾರ ನೀಡುವುದಾಗಿ ಇದೇ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯನವರು ಭರವಸೆ ನೀಡಿದ್ದಾರೆ. ಈ ಸಂದರ್ಭದಲ್ಲಿ ಸಿಎಂ ರಾಜಕೀಯ ಸಲಹೆಗಾರ ಗೋವಿಂದರಾಜು ಇದ್ದರು.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

34 mins ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

10 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

10 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

11 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

1 day ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

1 day ago