ಉತ್ಸವಗಳು ಸದೃಢ ಸಮಾಜ ಕಟ್ಟುತ್ತವೆ: ಸಚಿವ ಡಾ. ಶರಣಪ್ರಕಾಶ ಪಾಟೀಲ್

0
27

ಕಲಬುರಗಿ: ಉತ್ಸವಗಳು ಜನರ ಮನಸ್ಸನ್ನು ಗಟ್ಟಿಗೊಳಿಸಿ ಸಮಾನತೆ ತಂದು ಸದೃಢ ಸಮಾಜ ಕಟ್ಟುವಂತಾಗಬೇಕು ಎಂದು ಕರ್ನಾಟಕ ರಾಜ್ಯ ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಭಿವೃದ್ಧಿ ಸಚಿವರಾದ ಡಾ. ಶರಣಪ್ರಕಾಶ ಪಾಟೀಲ ಹೇಳಿದರು.

ನಗರದ ಸಂತೋಷ ಕಾಲೋನಿಯ ಕೆಎಚ್‍ಬಿ ಗ್ರೀನ್ ಪಾರ್ಕ್ ಬಡಾವಣೆಯಲ್ಲಿ ನವರಾತ್ರಿ ಉತ್ಸವದ ನಿಮಿತ್ಯ ಸಾಂಸ್ಕøತಿಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡುತ್ತ ಬಡಾವಣೆಯಲ್ಲಿ ಎಲ್ಲಾ ಧರ್ಮದವರು ಕೂಡಿಕೊಂಡು ಇಂತಹ ಅದ್ಭುತ ಕಾರ್ಯಕ್ರಮ ಹಮ್ಮಿಕೊಂಡು ಆಚರಣೆ ಮಾಡುವುದರೊಂದಿಗೆ ಸರ್ವ ಜನಾಂಗದ ಶಾಂತಿಯ ತೋಟ ಮಾಡುತ್ತಿರುವುದು ಶ್ಲಾಘನೀಯ. ಬಡಾವಣೆಯ ಮೂಲಭೂತ ಸಮಸ್ಯೆಗಳಿಗೆ ಪ್ರಾಮಾಣಿಕವಾಗಿ ಸ್ಪಂದಿಸಿ ಪರಿಹಾರ ಮಾಡುತ್ತೆನೆ ಎಂದು ಹೇಳಿದರು.

Contact Your\'s Advertisement; 9902492681

ಸಂಘದ ಮಾರ್ಗದರ್ಶಕರಾದ ಸಂಗಮೇಶ ಸರಡಗಿ ಪ್ರಾಸ್ತಾವಿಕವಾಗಿ ಮಾತನಾಡುತ್ತ ಬಡಾವಣೆಯು ಗ್ರಾಮ ಪಂಚಾಯತಿ ವ್ಯಾಪ್ತಿಗೂ ಇಲ್ಲ, ಮಹಾನಗರ ಪಾಲಿಕೆ ವ್ಯಾಪ್ತಿಗೆ ತೆಗೆದುಕೊಳ್ಳುತ್ತಿಲ್ಲ ಹೀಗಾಗಿ ಸಮಸ್ಯೆಗಳಿಗೆ ಸ್ಪಂದಿಸುವವರು ಯಾರು ಎನ್ನುವುದು ಯಕ್ಷ ಪ್ರಶ್ನೆಯಾಗಿದೆ. ಸಮಸ್ಯೆಗಳಿಗೆ ಸ್ಪಂದಿಸಿ ಅತ್ಯುತ್ತಮವಾದ ಬಡಾವಣೆ ಮಾಡಲು ಸಹಕರಿಸಬೇಕೆಂದು ಮನವಿ ಮಾಡಿಕೊಂಡರು.

ಖ್ಯಾತ ವೈದ್ಯರಾದ ಡಾ. ಭಾಗ್ಯಶ್ರೀ ಶರಣಪ್ರಕಾಶ ಪಾಟೀಲ ಮಾತನಾಡುತ್ತಾ ಇಂತಹ ಸಾಂಸ್ಕøತಿಕ ಕಾರ್ಯಕ್ರಮ ಹಮ್ಮಿಕೊಂಡು ಕಲಬುರಗಿ ಹೃದಯವಂತರ ಬಳಗವಾಗಿ ಜಿಲ್ಲೆಗೆ ಮಾದರಿಯಾದ ಬಡಾವಣೆಯಾಗಿದೆ ಎಂದು ಹೇಳಿದರು.

ಕಲಬುರಗಿ ಜಿಲ್ಲಾ ಪಂಚಾಯತ ಮಾಜಿ ಸದಸ್ಯರಾದ ಶರಣಗೌಡ ಡಿ. ಪಾಟೀಲ ಹಾಗೂ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷರಾದ ಸಂಜೀವ ಕುಮಾರ ಶೆಟ್ಟಿ ವೇದಿಕೆ ಮೇಲಿದ್ದರು.
ಇದೇ ಸಂದರ್ಭದಲ್ಲಿ ಬಡಾವಣೆಯ ಸಮಸ್ಯೆಗಳು ಕುರಿತು ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಸಚಿವರಿಗೆ ಮನವಿ ಪತ್ರ ಸಲ್ಲಿಸಲಾಯಿತು.

ಪ್ರೀತಿ ಕುಲಕರ್ಣಿ ಪ್ರಾರ್ಥಿಸಿದರು. ನ್ಯಾಯವಾದಿ ಹಣಮಂತರಾಯ ಎಸ್. ಅಟ್ಟೂರ ಸ್ವಾಗತಿಸಿದರು. ವೀರೇಶ ಬೋಳಶೆಟ್ಟಿ ನಿರೂಪಿಸಿ, ವಂದಿಸಿದರು. ಮಲ್ಲಿಕಾರ್ಜುನ ಹೂಗಾರ ಅನ್ನದಾಸೋಹ ಸೇವೆ ಸಲ್ಲಿಸಿದರು.

ಕಾರ್ಯಕ್ರಮದಲ್ಲಿ ಮಕ್ಕಳು ಹಾಗೂ ಸತಿ-ಪತಿಗಳು ಒಂದಾಗಿ ದಾಂಡಿಯ ನೃತ್ಯ ಮಾಡುವುದರೊಂದಿಗೆ ನೆರೆದವರನ್ನು ರಂಜಿಸಿ “ನಾವೆಲ್ಲರೂ ಒಂದೆ, ಬಡಾವಣೆಯ ಅಭಿವೃದ್ಧಿಗೆ ಮುಂದೆ” ಎನ್ನುವ ಸಂದೇಶ ನೀಡಿದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here