ಕಲಬುರಗಿ : ಜಿಲ್ಲೆಯ ಕಾಳಗಿ ಅರಣ್ಯ ಸಸಿ.ಸಂರಕ್ಷಣಾ ಘಟಕ್ಕೆ ಶನಿವಾರ ಕಲಬುರಗಿ ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್ ಭೇಟಿ ನೀಡಿ ಪರೀಶೀಲನೆ ನಡೆಸಿದರು.
ಈ ಪ್ರದೇಶ ಅರಣ್ಯ ಪ್ರದೇಶವಾಗಿದ್ದು ವಿವಿಧ ಕಡೆಗಳಲ್ಲಿ ಸಸಿಗಳನ್ನು ನೆಡುವ ಕೆಲಸ ಅಚ್ಚುಕಟ್ಟಾಗಿ ಮಾಡಬೇಕು ಎಂದು ಅರಣ್ಯ ಅಧಿಕಾರಿಗಳಿಗೆ ಸೂಚಿಸಿದರು.
ಅರಣ್ಯ ನಮ್ಮ. ಸಂಪತ್ತು ಇದರ ಸಂರಕ್ಷಣೆ ನಮ್ಮ ಎಲ್ಲರ ಮೇಲೆ ಇದೆ ಅರಣ್ಯ ಸಂರಕ್ಷಣೆಯ ಜೊತೆಗೆ ಅದನ್ನು ಬೆಳಸುವಲ್ಲಿ ಅಧಿಕಾರಿಗಳು ಹೆಚ್ಚಿನ ಕಾಳಿಜಿ ವಹಿಸಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಡಿಸಿಎಫ್ ಸುಮಿತ ಪಾಟೀಲ ತಹಸೀಲ್ದಾರ್ ಗಾಮವತಿ ಆರ್ ಐ ಮುಂಜುನಾಥ ವಲಯ ಅರಣ್ಯ ಅಧಿಕಾರಿಗಳು ಉಪಸ್ಥಿತರಿದ್ದರು.