ಶಹಾಬಾದ: ಇದೇ ದಿ.27ರಿಂದ ಮೂರು ದಿನಗಳ ಕಾಲ ರಾಜ್ಯ ಸರ್ಕಾರಿ ನೌಕರರ ರಾಜ್ಯ ಮಟ್ಟದ ಕ್ರೀಡಾ ಮತ್ತು ಸಾಂಸ್ಕøತಿಕ ಸ್ಪರ್ಧೆಗಳ ಆಯೋಜನೆ ಮಾಡಲಾಗಿದೆ ಎಂದು ಸರ್ಕಾರಿ ನೌಕರರ ಸಂಘದ ತಾಲ್ಲೂಕಾಧ್ಯಕ್ಷ, ಈರಣ್ಣ ಕೆಂಭಾವಿ ತಿಳಿಸಿದ್ದಾರೆ.
ಅವರು ಈ ಕುರಿತು ಪತ್ರಿಕಾ ಹೇಳಿಕೆ ನೀಡಿ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಯೋಗದಲ್ಲಿ ತುಮಕೂರು ನಗರದ ಮಹಾತ್ಮಾಗಾಂಧಿ ಜಿಲ್ಲಾ ಕ್ರೀಡಾಂಗಣ ದಲ್ಲಿ 2022-2023ನೇ ಸಾಲಿನ ರಾಜ್ಯ ಸರ್ಕಾರಿ ನೌಕರರ ರಾಜ್ಯ ಮಟ್ಟದ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳಆಯೋಜನೆ ಮಾಡಲಾಗಿದೆ. ದಿ.27ರಂದು ಸಂಜೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕ್ರೀಡಾಕೂಟವನ್ನು ಉದ್ಘಾಟಿಸಿ ಲಿದ್ದಾರೆ.
ಉದ್ಘಾಟನಾ ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಗೃಹ ಹಾಗೂ ತುಮಕೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ.ಪರಮೇಶ್ವರ್, ಯುವ ಸಬಲೀ ಕರಣ ಮತ್ತು ಕ್ರೀಡಾ ಸಚಿವ ಬಿ. ನಾಗೇಂದ್ರ, ಸಹಕಾರ ಸಚಿವ ಕೆ.ಎನ್. ರಾಜಣ್ಣ ಹಾಗೂ ಸಚಿವ ಸಂಪುಟದ ಸಚಿವರು, ಸಂಸದರು, ಶಾಸಕರು ಮತ್ತು ಅಧಿಕಾರಿಗಳು ಭಾಗವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ.
ಮೂರು ದಿನಗಳ ಕಾಲ ನಡೆಯುವ ಕ್ರೀಡಾಕೂಟದಲ್ಲಿ ಜಿಲ್ಲಾ ಮಟ್ಟದಿಂದ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುವ ಸುಮಾರು 10 ಸಾವಿರಕ್ಕೂ ಹೆಚ್ಚಿನ ಕ್ರೀಡಾಪಟುಗಳು ಕ್ರೀಡಾಕೂಟಗಳಲ್ಲಿ ಭಾಗವಹಿಸಲಿದ್ದಾರೆ. ಹೆಚ್ಚಿನ ಸಂಖ್ಯೆಯಲ್ಲಿ ಆಸಕ್ತ ಸರ್ಕಾರಿ ನೌಕರರು ಮತ್ತು ಎಲ್ಲಾ ಕ್ರೀಡಾಪಟುಗಳು ಕ್ರೀಡಾಕೂಟದಲ್ಲಿ ಭಾಗವಹಿಸಿ ಯಶಸ್ವಿಗೊಳಿಸಲು ಮನವಿ ಮಾಡಿಕೊಂಡಿದ್ದಾರೆ.