ಕಲಬುರಗಿ; ಮಹಿಳೆಯರು ಪ್ರತಿಯೊಂದು ಕ್ಷೇತ್ರದಲ್ಲಿ ಬೆಳೆದು ಸ್ವಾವಲಂಬಿಯಾಗಿ ಜೀವನ ನಡೆಸುತ್ತಿರುವುದು ಹೆಮ್ಮೆಯ ವಿಷಯ ಎಂದು ಶ್ರೀ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಚೇರಪರ್ಸನರಾದ ಪೂಜ್ಯ ಮಾತೋಶ್ರೀ ಡಾ. ದಾಕ್ಷಾಯಣಿ ಎಸ್ ಅಪ್ಪ ಅವರು ನುಡಿದರು.
ನಗರದ ಸಂತೋಷ ಕಾಲೋನಿಯ ಕೆಎಚ್‍ಬಿ ಗ್ರೀನ್ ಪಾರ್ಕ್ ಬಡಾವಣೆಯಲ್ಲಿ ನವರಾತ್ರಿ ಉತ್ಸವದ ನಿಮಿತ್ಯ ಸಾಂಸ್ಕøತಿಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡುತ್ತಾ ನವರಾತ್ರಿ ಹಬ್ಬವೆಂದರೆ ದುಷ್ಟ ಗುಣಗಳನ್ನು ಹೋಗಲಾಡಿಸಿ, ಶ್ರೇಷ್ಠ ವಿಚಾರಗಳನ್ನು ಜೀವನದಲ್ಲಿ ಅಳವಡಿಸಿ ಕೊಂಡು ಉತ್ತಮವಾದ ಜೀವನ ಸಾಗಿಸುವುದೇ ನವರಾತ್ರಿ ಹಬ್ಬದ ಸಂದೇಶವಾಗಿದೆ. ವಿಶೇಷವಾಗಿ ನಗರ ಪ್ರದೇಶದಲ್ಲಿ ಇಂತಹ ಕಾರ್ಯಕ್ರಮಗಳು ಆಯೋಜಿಸುವ ಮೂಲಕ ಒಗ್ಗಟ್ಟಿನಲ್ಲಿ ಬಲವಿದೆ ಎಂದು ತೋರಿಸಿಕೊಟ್ಟಿರುವದು ಈ ಕಾರ್ಯಕ್ರಮವೇ ಸಾಕ್ಷಿಯಾಗಿದೆ ಎಂದು ಹೇಳಿದರು.
ಮುಖ್ಯ ಅತಿಥಿಗಳಾದ ಆಳಂದ ಶಾಸಕರಾದ ಬಿ ಆರ್ ಪಾಟೀಲ ಮಾತನಾಡುತ್ತಾ ಹಬ್ಬಗಳು ಕೇವಲ ಆಚರಣೆಗೆ ಸೀಮಿತವಾಗದೆ, ಒಳ್ಳೆಯದನ್ನು ಜೀವನದಲ್ಲಿ ಅಳವಡಿಸಿಕೊಂಡು ವೈಚಾರಿಕತೆಯ ಜೀವನದೊಂದಿಗೆ ಬಸವಾದಿ ಶರಣರ ಪರಿಕಲ್ಪನೆಯ ನಾಡು ನಿರ್ಮಿಸಬೇಕೆಂದು ಹೇಳಿದರು.
ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕರಾದ ಅಲ್ಲಮಪ್ರಭು ಪಾಟೀಲ, ಕಲಬುರಗಿ ಜಿಲ್ಲಾ ಪಂಚಾಯತ ಮಾಜಿ ಅಧ್ಯಕ್ಷರಾದ ನಿತೀನ ವಿ. ಗುತ್ತೇದಾರ, ಶರಣಬಸವೇಶ್ವರ ವಿಶ್ವವಿದ್ಯಾಲಯದ ಡೀನರಾದ ಲಕ್ಷ್ಮಿ ಪಾಟೀಲ, ಕಲ್ಯಾಣ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ ಎಂ. ರಾಚಪ್ಪಾ, ಹೋರಾಟಗಾರ ಬಸವರಾಜ ಕೊರಳ್ಳಿ, ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷರಾದ ಸಂಜೀವಕುಮಾರ ಶೆಟ್ಟಿ ವೇದಿಕೆಯ ಮೇಲಿದ್ದರು.
ಗಂಗಾಂಬಿಕಾ ಎಸ್ ಹಿರೇಮಠ, ಲಲಿತಾ ಗೋಲಗೇರಿ ಪ್ರಾರ್ಥಿಸಿದರು. ಶಿಕ್ಷಕರಾದ ಶಿವಕಾಂತ ಚಿಮ್ಮಾ ಸ್ವಾಗತಿಸಿದರು. ವೀರೇಶ ಬೋಳಶೆಟ್ಟಿ ನಿರೂಪಿಸಿ, ವಂದಿಸಿದರು. ಉದ್ಯಮಿಗಳಾದ ರಾಜಕುಮಾರ ಇಂಡಿ ಅನ್ನದಾಸೋಹ ಸೇವೆ ಸಲ್ಲಿಸಿದರು.
ಕಾರ್ಯಕ್ರಮದಲ್ಲಿ ಮಕ್ಕಳು ಹಾಗೂ ಸತಿ-ಪತಿಗಳು ಒಂದಾಗಿ ದಾಂಡಿಯ ನೃತ್ಯ ಮಾಡಿ ಕಾರ್ಯಕ್ರಮಕ್ಕೆ ಮೆರಗುಗೊಳಿಸಿದರು. ಇದೇ ಸಂದರ್ಭದಲ್ಲಿ ಬಡಾವಣೆ ಹಲವಾರು ಜನರನ್ನು ದ್ರಾಕ್ಷಾಯಿಣಿ ಅಮ್ಮಾ ಅವರು ಆಶೀರ್ವದಿಸಿದರು. ಜನಪದ ಕಲಾವಿದ ರಾಜು ಹೆಬ್ಬಾಳ ಅವರು ಜನಪದ ಶೈಲಿಯೊಂದಿಗೆ ಜನರನ್ನು ರಂಜಿಸಿದರು. ಕಾರ್ಯಕ್ರಮದಲ್ಲಿ ಬಡಾವಣೆಯ ಜನರು ಹಾಗೂ ನಗರದ ಸುತ್ತಮುತ್ತಲಿನ ಗ್ರಾಮದ ಹಲವಾರು ಜನರು ಭಾಗವಹಿಸಿದ್ದರು.
ವಾಡಿ (ಕಲಬುರಗಿ): ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ಅವರ ವೃತ್ತದಲ್ಲಿರುವ ಬಾಬಾಸಾಹೇಬರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಸಂವಿಧಾನ ಪೂರ್ವ ಪೀಠಿಕೆ ಓದುವ ಮೂಲಕ…
ಕಲಬುರಗಿ: ಕಾಂಗ್ರೆಸ್ ಪಕ್ಷದ ಅಂಗ ಸಂಖ್ಯೆ ಸೇವಾದಳ ಯಂಗ್ ಬ್ರಿಗೇಡ್ ಸದಸ್ಯತ್ವ ಅಭಿಯಾನ ನ.20ರಿಂದ ರಾಜ್ಯವ್ಯಾಪಿ ಆರಂಭ ಮಾಡಲಾಗಿದ್ದು, ಆಸಕ್ತರು…
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…