ಕಲಬುರಗಿ: ಸೇಡಂ ಪಟ್ಟಣದ ಮಾಜಿ ಪುರಸಭೆ ಸದಸ್ಯ ರಾಜು ಹಡಪದ ಅವರಿಗೆ ರಾಜ್ಯ ಸವಿತಾ ಸಮಾಜದ ಅಭಿವೃದ್ದಿ ನಿಗಮದ ಅಧ್ಯಕ್ಷರನ್ನಾಗಿ ನಾಮ ನಿರ್ದೆಶನ ಮಾಡಬೇಕು ಎಂದು ಎ.ಐ ಸಿ.ಸಿ ಅಧ್ಯಕ್ಷರಾದ ಡಾ. ಮಲ್ಲಿಕಾರ್ಜುನ ಖರ್ಗೆ ಅವರಿಗೆ ಸವಿತ ಸಮಾಜದ ಮುಖಂಡರು ಮನವಿ ಮಾಡಿದ್ದಾರೆ.
ಎ.ಐ ಸಿ.ಸಿ ಅಧ್ಯಕ್ಷರಾದ ಡಾ. ಮಲ್ಲಿಕಾರ್ಜುನ ಖರ್ಗೆ ಅವರಇಗೆ ಅವರ ಕಲಬುರಗಿ ನಿವಾಸದಲ್ಲಿ ಸವಿತಾ ಸಮಾಜದ ಮುಖಂಡರು ಭೇಟಿಯಾಗಿ ಸೇಡಂ ಸವಿತಾ ಸಮಾಜದ ತಾಲೂಕ ಅಧ್ಯಕ್ಷರಾಗಿ ಸಮಾಜದ ಅಭಿವೃದ್ಧಿಗಾಗಿ ಸಾಕಷ್ಟು ಶ್ರಮ ವಹಿಸಿದ್ದಾರೆ. ಸ್ಥಳೀಯ ನಮ್ಮ ಶಾಸಕರ ಅನುದಾನದ ಅಡಿಯಲ್ಲಿ ಸವಿತಾ ಭವನ ನಿರ್ಮಿಸಿದ್ದಾರೆ.
ಮುಂದುವರೆದು ಜಿಲ್ಲಾ ಸವಿತಾ ಸಮಾಜದ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ ಗುರುತಿಸಿಕೊಂಡು ಸಕ್ರಿಯ ಕಾರ್ಯಕರ್ತರಾಗಿ ಸೇಡಂ ಪುರಸಭೆಯ ನಾಮ ನಿರ್ದೇಶಕ ಸದಸ್ಯರಾಗಿ ಕಾಂಗ್ರೆಸ್ ಪಾರ್ಟಿಯ ಸೇಡಂ ಬ್ಲಾಕ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ ಹಾಗೂ ತಾಲೂಕ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಸಂಘಟಿತ ಕಾರ್ಮಿಕರ ಸೇಡಂ ಬ್ಲಾಕ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತ ಹಾಗೂ ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯ ಅಭಿವೃದ್ಧಿ ಸಚಿವರಾದ ಡಾ. ಶರಣ ಪ್ರಕಾಶ ಪಾಟೀಲ್ ಅವರ ಆಪ್ತರಾಗಿದ್ದು, ಅವರ ನೆರಳಲ್ಲಿ ಸೇವೆ ಸಲ್ಲಿಸುತ್ತಾ ಬರುತ್ತಿದ್ದಾರೆ.
ಆದಕಾರಣ ಇವರಿಗೆ ಕರ್ನಾಟಕ ರಾಜ್ಯ ಸವಿತಾ ಸಮಾಜದ ಅಭಿವೃದ್ಧಿ ನಿಗಮ ಮಂಡಳಿ ಅಧ್ಯಕ್ಷನಾಗಿ ನೇಮಿಸಬೇಕೆಂದು ಮನವಿ ಮಾಡಿದ್ದರು.
ಈ ಸಂದರ್ಭದಲ್ಲಿ ಸೇಡಂ ಪಟ್ಟಣದ ಮಾಜಿ ಪುರಸಭೆ ಸದಸ್ಯ ರಾಜು ಹಡಪದ ,ಅಂಬ್ರಿಶ ಮಂಗಲಗಿ, ಮದನ ಗದವಾಲ, ಸುರೇಕಾಂತ ಬೆಣ್ಣೂರ, ಶರಣಪ್ಪ, ಪ್ರಭು ಮದ್ದುರ, ಶಿವಶರಣಪ್ಪ, ರಾಜು ಕೊಳ್ಳಿ, ಶಾಂತು ಚೆನ್ನುರ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಕಲಬುರಗಿ: ಕಳೆದ ಅಕ್ಟೋಬರ್ 2 ರಂದು ನಗರದ ಹೊರವಲಯದ ನಂದೂರ ಕೈಗಾರಿಕಾ ಪ್ರದೇಶದ ದಾಲ್ ಮಿಲ್ ವೊಂದರಲ್ಲಿ ಅಕ್ರಮ ಅಕ್ಕಿ…
ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…
ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…
ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…