ರಾಜ್ಯೋತ್ಸವ ಅರ್ಥಪೂರ್ಣವಾಗಿ ಆಚರಿಸಲು ನಿರ್ಧಾರ

0
20

ಶಹಾಬಾದ: ನವೆಂಬರ್ 1ರಂದು ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಶಿμÁ್ಠಚಾರದಂತೆ ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಗಿದೆ ಎಂಂದು ತಹಸೀಲ್ದಾರ ಗುರುರಾಜ ಸಂಗಾವಿ ಹೇಳಿದರು.

ಅವರು ಬುಧವಾರ ನಗರದ ತಹಸೀಲ್ದಾರ ಕಛೇರಿಯಲ್ಲಿ ಕನ್ನಡ ರಾಜ್ಯೋತ್ಸವ ದಿನಾಚರಣೆ ಕುರಿತು ಆಯೋಜಿಸಲಾದ ಪೂರ್ವಭಾವಿ ಸಿದ್ಧತಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.

Contact Your\'s Advertisement; 9902492681

ನವೆಂಬರ್ 1 ರಂದು ಬೆಳಿಗ್ಗೆ 9ಗಂಟೆಗೆ ನಗರದ ಸರ್ಕಾರಿ ಪ್ರೌಢಶಾಲೆಯ ಆವರಣದಲ್ಲಿ ಕನ್ನಡಾಂಬೆ ಭಾವಚಿತ್ರಕ್ಕೆ ದೇವಿ ಪೂಜೆ ನೇರವೇರಿಸಿ, ರಾಷ್ಟ್ರ ಧ್ವಜಾರೋಹಣ ನಂತರ ತಾಯಿ ಭುವನೇಶ್ವರಿಯ ಭಾವಚಿತ್ರದ ಭವ್ಯ ಮೆರವಣಿಗೆ ನಡೆಸಲಾಗುವುದು ತಿಳಿಸಿದರು.
ಸರಕಾರಿ ಪ್ರೌಢ ಶಾಲೆಯಿಂದ ನೆಹರು ವೃತ್ತ, ಶಾಸ್ತ್ರೀ ವೃತ್ತ, ಭಾರತ ಚೌಕ, ರೇಲ್ವೆ ಚೌಕ ನಂತರ ಮರಳಿ ಸರಕಾರಿ ಶಾಲಾ ಆವರಣದವರೆಗೆ ಮೆರವಣಿಗೆ ನಡೆಯುವುದು.ಶಾಲಾ ಮಕ್ಕಳು ಭಾಗವಹಿಸುವುದರಿಂದ ಸೂಕ್ತ ಪೆÇಲೀಸ್ ಭದ್ರತೆಒದಗಿಸಬೇಕೆಂದು ಸಭೆಯಲ್ಲಿದ್ದವರು ತಿಳಿಸಿದರು.

ತಾಲೂಕ ಮಟ್ಟದ ಕಚೇರಿಗಳಲ್ಲಿ ಅಂದು ಬೆಳಗ್ಗೆ 8 ಗಂಟೆಗೆ ತಮ್ಮ ಶಾಲಾ ಕಾಲೇಜು, ಕಚೇರಿಗಳಲ್ಲಿ ರಾಷ್ಟ್ರಧ್ವಜಾರೋಹಣ ನೆರವೇರಿಸಿ, ತಾಲೂಕಾಢಳಿತ ವತಿಯಿಂದ ನಗರದ ಬಾಲಕರ ಪ್ರೌಢಶಾಲೆಯಲ್ಲಿ ನಡೆಯುವ ಸಾರ್ವಜನಿಕ ಕಾರ್ಯಕ್ರಮದಲ್ಲಿ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು ಕಡ್ಡಾಯವಾಗಿ ಪಾಲ್ಗೊಳ್ಳಬೇಕು. ಅಲ್ಲದೇ ಕಸಾಪ ತಾಲೂಧ್ಯಕ್ಷ ಶರಣಬಸಪ್ಪ ಕೋಬಾಳ, ಕಸಾಪ ಹಿರಿಯ ಸದಸ್ಯರಾದ ಕನಕಪ್ಪ ದಂಡಗುಲಕರ, ಕರವೇ ತಾಲೂಕಾಧ್ಯಕ್ಷ ವಿಶ್ವರಾಜ ಫಿರೋಜಾಬಾದ, ಕರವೇ ಅಧ್ಯಕ್ಷ ಯಲ್ಲಾಲಿಂಗ ಹೈಯಾಳಕರ, ಕನ್ನಡ ದಲಿತ ಸಾಹಿತ್ಯ ಪರಿಷತ್ತಿನ ಭರತ ಧನ್ನಾ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ನಗರ ಸಭೆಯ ವ್ಯವಸ್ಥಾಪಕರಾದ ಶರಣಗೌಡ ಪಾಟೀಲ, ಸುರೇಶ, ಪಶು ಸಂಗೋಪನಾ ಇಲಾಖೆಯ ಡಾ.ನೀಲಪ್ಪ ಪಾಟೀಲ, ಸಂತೋಷ, ಮಹೇಶಕುಮಾರ, ಕನ್ನಡ ದಲಿತ ಸಾಹಿತ್ಯ ಪರಿಷತ್ತಿನ ಶಂಕರ ಜಾನಾ, ಅಂಗವಿಕಲರ ಸಂಘದ ಅಧ್ಯಕ್ಷ ಮಲ್ಲೇಶಿ ಭಜಂತ್ರಿ, ಸೇರಿದಂತೆ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here