ಬಿಸಿ ಬಿಸಿ ಸುದ್ದಿ

ಜಿಲ್ಲೆಯಲ್ಲಿ ಬಲಿಷ್ಠ ಸಂಘಟನೆ ಕಟ್ಟಿದ ಕೀರ್ತಿ ಕರವೇಗೆ ಸಲ್ಲುತ್ತದೆ : ಹೆಡಗಿಮದ್ರಾ ಶ್ರೀ

ಯಾದಗಿರಿ: ರಾಜ್ಯದಲ್ಲಿ ಪ್ರತಿಯೊಂದು ಸಮಸ್ಯೆಗಾಗಿ ನಿರಂತರ ಹೋರಾಟ ಮಾಡುತ್ತಾ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ಸಂಘಟನೆ ಎಂದರೆ ಅದು ಕರ್ನಾಟಕ ರಕ್ಷಣಾ ವೇದಿಕೆ ಸಾಮಾಜಿಕ ಕಳಕಳಿಯುಳ್ಳ ಸಂಘಟನೆಯಾಗಿದೆ ಎಂದು ಹೆಡಗಿಮದ್ರಾ ಶ್ರೀ ಶಾಂತಶಿವಯೋಗಿ ಮಠದ ಪೀಠಾಧಿಪತಿ ಶ್ರೀ ಶಾಂತಮಲ್ಲಿಕಾರ್ಜುನ ಪಂಡಿತಾರಾಧ್ಯ ಮಹಾಸ್ವಾಮಿಗಳು ಹೇಳಿದರು.

ನಗರದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಕಾರ್ಯಾಲಯ ಉದ್ಘಾಟನಾ ಸಮಾರಂಭದ ಸಾನ್ನಿಧ್ಯವಹಿಸಿ ಮಾತನಾಡಿದರು. ಪ್ರತಿ ವರ್ಷ ರಕ್ತದಾನ ಶಿಬಿರ, ಆರೊಗ್ಯ ತಪಾಸಣಾ ಶಿಬಿರ ಹೀಗೆ ಹತ್ತು ಹಲವು ಸಾಮಾಜಿಕ ಪರ ಕಾಳಜಿ ವಹಿಸಿದ್ದೇ ಅಲ್ಲದೆ ವಿದ್ಯಾರ್ಥಿಗಳ ಮತ್ತು ರೈತರ ಪರವಾಗಿ ಬಹು ದೊಡ್ಡ ಹೋರಾಟಗಳನ್ನು ಮಾಡುತ್ತಾ ಜನರ ಸಮಸ್ಯೆಗಳಿಗೆ ತೀರ ಹತ್ತಿರದಿಂದ ಸ್ಪಂದಿಸುತ್ತಿದೆ ಎಂದು ಹೇಳಿದರು.

ಜೆಡಿಎಸ್ ಮುಖಂಡರಾದ ಹನುಮೇಗೌಡ ಬೀರನಕಲ್ ಮಾತನಾಡಿ, ಜಿಲ್ಲೆಯ ಪ್ರತಿಯೊಂದು ರೈತರ ಸಮಸ್ಯೆಗಳಿಗೆ ಕರವೇ ಸದಾ ಸ್ಪಂದಿಸುತ್ತಿದೆ, ಯಾವುದೇ ರಾಜಕೀಯ ಮುಖಂಡರು ಮಾಡದ ಕಾರ್ಯವನ್ನು ಕರವೇ ಮಾಡುತ್ತಿದೆ ಎಂದರೆ ತಪ್ಪಾಗಲಿಕ್ಕಿಲ್ಲ, ಇನ್ನೂ ಹಲವು ಸಮಸ್ಯೆಗಳಿಗೆ ಕರವೇ ಹೋರಾಟ ರೂಪಿಸಿ ಜನಪ್ರತಿನಿಧಿಗಳಿಗೆ ಮತ್ತು ಸರ್ಕಾರದ ಗಮನ ತರುವಂತಹ ಕೆಲಸ ಮಾಡಬೇಕು ಎಂದು ಸಲಹೆ ನೀಡಿದರು.

ನಗರಸಭೆ ಸದಸ್ಯರಾದ ಲಲಿತಾ ಅನಪೂರ ಮಾತನಾಡಿ, ಯಾವುದೇ ಪಕ್ಷಕ್ಕೆ ಸೀಮಿತವಾಗದೆ ಕರವೇ ಕಾರ್ಯಕರ್ತರ ಜನರ ನೈಜ ಸಮಸ್ಯೆಗಳಿಗೆ ಹೋರಾಟ ಮಾಡುತ್ತಿರುವುದು ಉತ್ತಮವಾದ ಬೆಳವಣಿಗೆಯಾಗಿದೆ. ಯುವಕರು ರಾಜಕೀಯದಿಂದ ದೂರವಿದ್ದು, ಸಂಘಟನೆಯ ಮುಖಾಂತರ ಜನರ ಸಮಸ್ಯೆಗಳಿಗೆ ಸ್ಪಂದಿಸುತ್ತಿರುವುದು ಶ್ಲಾಘನೀಯವಾಗಿದೆ ಎಂದು ಹೇಳಿದರು. ಕರವೇ ಜಿಲ್ಲಾಧ್ಯಕ್ಷ ಟಿ.ಎನ್.ಭೀಮುನಾಯಕ ಅಧ್ಯಕ್ಷತೆವಹಿಸಿ ಮಾತನಾಡಿದರು.

ಈ ಸಂದರ್ಭದಲ್ಲಿ ಗುರುಮಠಕಲ್ ಖಾಸಾಮಠದ ಶ್ರೀ ಶಾಂತವೀರ ಸ್ವಾಮೀಜಿ, ಬಸ್ಸುಗೌಡ ಬಿಳ್ಹಾರ, ಕರವೇ ರಾಯಚೂರು ಜಿಲ್ಲಾಧ್ಯಕ್ಷ ವಿನೋಧರಡ್ಡಿ ಎಂ, ಡಾ.ಶರಣು ಗದ್ದುಗೆ, ತಾಲೂಕು ಅಧ್ಯಕ್ಷ ಮಲ್ಲು ಮಾಳಿಕೇರಿ, ಜಿಲ್ಲಾ ಪ್ರಧಾನಕಾರ್ಯದರ್ಶಿ ಸಿದ್ದು ನಾಯಕ ಹತ್ತಿಕುಣಿ, ಜಿಪಂ ಸದಸ್ಯರಾದ ಶಿವಲಿಂಗಪ್ಪ ಪುಟಗಿ, ನಾಗರತ್ನ ಮೂರ್ತಿ ಅನಪುರ, ಬಸವರಾಜಪ್ಪಗೌಡ ವಡಗೇರಾ, ಶಶಿಧರರಡ್ಡಿ ಹೊಸಳ್ಳಿ, ಭೀಮಾಶಂಕರ ಇಬ್ರಾಹಿಂಪೂರ, ಡಾ.ಸುಭಾಶ್ಚಂದ್ರ ಕೌಲಗಿ, ಸುಭಾಷ್ ಐಕೂರು, ಮಲ್ಲರೆಡ್ಡಿಗೌಢ ಹತ್ತಿಕುಣಿ, ಸುದರ್ಶನ ನಾಯಕ, ಶ್ರೀನಿವಾಸರಡ್ಡಿ ಕಂದಕೂರ, ಭಾಷುಮಿಯಾ ವಡಗೇರಾ, ರಫಿಕ್ ಉಳ್ಳೆಸೂಗೂರು, ಮಲ್ಲಿಕಾರ್ಜುನಗೌಡ ಬೀರನಕಲ್, ಭೀಮಾಶಂಕರ ಹತ್ತಿಕುಣಿ, ಹಣಮಂತ ಖಾನಳ್ಳಿ, ಅಬ್ದುಲ್ ವಡಗೇರಾ, ಶಿವು ವಡಗೇರಾ, ಭೀಮಣ್ಣ ಶಖಾಪೂರ, ವೆಂಕಟೇಶ ಬೈರಮಡ್ಡಿ, ಮಹಾವೀರ ಲಿಂಗೇರಿ, ವಿಶ್ವರಾಧ್ಯ ದಿಮ್ಮೆ, ತೇಜರಾಜ್ ರಾಠೋಡ, ಸಾಬು ಹೋರುಂಚಾ, ರಾಜು ಚವ್ಹಾಣ, ವೆಂಕಟೇಶ ರಾಠೋಡ, ಮಲ್ಲು ದೇವಕರ್, ಸಿದ್ದಪ್ಪ ಕ್ಯಾಸಪನಳ್ಳಿ, ಸಾಹೇಬಗೌಡ ನಾಯಕ, ಭೀಮು ಬಸವಂತಪೂರ, ಮಹೇಶ ಠಾಣಗುಂದಿ, ಮಲ್ಲು ಹಾಲಗೇರಾ, ಸಿದ್ದು ಸಾಹುಕಾರ ಸೇರಿದಂತೆ ಇತರರಿದ್ದರು.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

3 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

13 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

13 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

13 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

1 day ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

1 day ago