ವಿಶ್ವ ಶಾಂತಿ, ಸಮಾನತೆ, ಸಾಮರಸ್ಯ ಸಮಾಜ ನಿರ್ಮಾಣಕ್ಕಾಗಿ ಕೈಜೋಡಿಸಿ: ಯುವಪೀಳಿಗೆಗೆ ರಾಜ್ಯಪಾಲರ ಕರೆ

0
10

ಬೆಂಗಳೂರು/ಧಾರವಾಡ; ನಮ್ಮ ಶೈಕ್ಷಣಿಕ ಮತ್ತು ಸಾಂಸ್ಕøತಿಕ ಸಂಪ್ರದಾಯವು ಬಹಳ ಪುರಾತನವಾಗಿದೆ ಮತ್ತು ಪ್ರಾಚೀನ ಕಾಲದಿಂದಲೂ, “ವಸುಧೈವ ಕುಟುಂಬಕಂ” ತತ್ವಶಾಸ್ತ್ರ ಮತ್ತು ಧ್ಯಾನವನ್ನು ಕೇಂದ್ರೀಕರಿಸುತ್ತದೆ, ಇದು ವಿಶ್ವ ಸಹೋದರತ್ವ, ವಿಶ್ವ ಶಾಂತಿ, ಸಮಾನತೆ ಮತ್ತು ಸಾಮರಸ್ಯವನ್ನು ಕಲಿಸುತ್ತದೆ ಎಂದು ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಹೇಳಿದ್ದಾರೆ.

ಸೋಮವಾರ ನಗರದ ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡದ 73ನೇ ಘಟಿಕೋತ್ಸವದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

Contact Your\'s Advertisement; 9902492681

ವಿಶ್ವವಿದ್ಯಾಲಯದಲ್ಲಿ ಗಳಿಸಿದ ಜ್ಞಾನದೊಂದಿಗೆ, ಇಂದಿನ ವಿದ್ಯಾರ್ಥಿಗಳು ಮುಂಬರುವ ಪೀಳಿಗೆಗೆ ಸ್ಫೂರ್ತಿಯ ಮೂಲವಾಗುತ್ತೀರಿ ಮತ್ತು “ಏಕ್ ಭಾರತ್ – ಶ್ರೇಷ್ಠ ಭಾರತ” ಮತ್ತು “ಸ್ವಾವಲಂಬಿ ಭಾರತ” ನಿರ್ಮಾಣದಲ್ಲಿ ಭಾಗವಹಿಸುತ್ತೀರಿ ಎಂಬ ನಂಬಿಕೆ ಇದೆ. ಯುವಪೀಳಿಗೆ ವಿಶ್ವ ಸಹೋದರತ್ವ, ವಿಶ್ವ ಶಾಂತಿ, ಸಮಾನತೆ ಮತ್ತು ಸಾಮರಸ್ಯ ಸಮಾಜವನ್ನು ನಿರ್ಮಾಣದಲ್ಲಿ ತೊಡಗಿಸಿಕೊಳ್ಳಬೇಕು ಎಂದು ಕರೆ ನೀಡಿದರು.

ಪ್ರಾಚೀನ ಕಾಲದಿಂದಲೂ ಭಾರತದ ಜ್ಞಾನ ಪರಂಪರೆಯು ಉನ್ನತ ಮಟ್ಟದಲ್ಲಿದೆ. ಸಿಂಧೂ ಕಣಿವೆ ನಾಗರಿಕತೆಯ ಅಸಾಧಾರಣ ವಾಸ್ತುಶಿಲ್ಪ ಮತ್ತು ನಗರ ಯೋಜನೆಯಿಂದಾಗಿ, ಗಣಿತ, ಖಗೋಳ, ವೈದ್ಯಕೀಯ, ಎಂಜಿನಿಯರಿಂಗ್, ವಾಸ್ತುಶಿಲ್ಪ ಇತ್ಯಾದಿ ಕ್ಷೇತ್ರಗಳಲ್ಲಿ ಜ್ಞಾನವನ್ನು ಪಡೆಯಲು ವಿಶ್ವದ ವಿವಿಧ ದೇಶಗಳಿಂದ ವಿದ್ಯಾರ್ಥಿಗಳು ಮತ್ತು ಸಂಶೋಧಕರು ನಳಂದ ಮತ್ತು ತಕ್ಷಶಿಲೆಯಂತಹ ವಿಶ್ವವಿದ್ಯಾಲಯಗಳಿಗೆ ಬಂದರು. ಇಂದು ಅಂತಹ ಶಿಕ್ಷಣದ ಅವಶ್ಯಕತೆಯಿದೆ, ಇದು ದೇಶ, ಸಂಸ್ಕøತಿ ಮತ್ತು ಮೌಲ್ಯಗಳನ್ನು ಸರ್ವೋಚ್ಚವೆಂದು ಪರಿಗಣಿಸಿ ದೇಶದ ಸರ್ವತೋಮುಖ ಅಭಿವೃದ್ಧಿಗೆ ಉಪಯುಕ್ತವಾಗಿದೆ ಎಂದು ಅಭಿಪ್ರಾಯಪಟ್ಟರು.

ಜೀವನದ ಯಶಸ್ಸಿನಲ್ಲಿ ಶಿಕ್ಷಣವು ಬಹುದೊಡ್ಡ ಕೊಡುಗೆಯನ್ನು ಹೊಂದಿದೆ, ಶಿಕ್ಷಣವು ಜೀವನದ ಪ್ರತಿಯೊಂದು ಕ್ಷೇತ್ರದಲ್ಲೂ ಉಪಯುಕ್ತವಾಗಿದೆ, ಒಬ್ಬ ವ್ಯಕ್ತಿಯು ಶಿಕ್ಷಣ ಪಡೆದಾಗ ಮಾತ್ರ ಅವನ ಅಭಿವೃದ್ಧಿಯಾಗುತ್ತದೆ. ಪ್ರಸ್ತುತ ಸ್ವಯಂ ಉದ್ಯೋಗವನ್ನು ಉತ್ತೇಜಿಸುವ ಅವಶ್ಯಕತೆಯಿದೆ. ಇಂದು ಜಗತ್ತಿನಲ್ಲಿ ಪ್ರಾಜೆಕ್ಟ್ ಆಧಾರಿತ ಕಲಿಕೆಗೆ ಪ್ರಾಮುಖ್ಯತೆ ನೀಡಲಾಗುತ್ತಿದೆ. ಇದಕ್ಕಾಗಿ ವಿಶ್ವವಿದ್ಯಾಲಯಗಳು ವಿದ್ಯಾರ್ಥಿಗಳನ್ನು ಸ್ವಯಂ ಉದ್ಯೋಗಿಗಳನ್ನಾಗಿ ಮಾಡಲು ನಾವೀನ್ಯತೆ ಮತ್ತು ಉದ್ಯಮಶೀಲತಾ ಕಡೆಗೆ ಕೆಲಸ ಮಾಡಬೇಕಾಗಿದೆ ಎಂದು ತಿಳಿಸಿದರು.

ದೇಶದ ಒಟ್ಟಾರೆ ಅಭಿವೃದ್ಧಿ ಮತ್ತು ತಾಂತ್ರಿಕ ಪ್ರಗತಿಗಾಗಿ ಶಿಕ್ಷಣದಲ್ಲಿ ಸಾಂಸ್ಕೃತಿಕ ಮತ್ತು ಮಾನವೀಯ ಮೌಲ್ಯಗಳನ್ನು ಸೇರಿಸುವುದನ್ನು ಖಚಿತಪಡಿಸಿಕೊಳ್ಳುವುದು ಶಿಕ್ಷಣ ತಜ್ಞರು, ನೆರವು ಪಡೆದ ಸಂಸ್ಥೆಗಳು, ನೀತಿ ನಿರೂಪಕರು, ಮಾನವತಾವಾದಿಗಳು ಮತ್ತು ಸಮಾಜದ ಜವಾಬ್ದಾರಿಯಾಗಿದೆ ಎಂದು ಹೇಳಿದರು.

ಸ್ವಾತಂತ್ರ್ಯದ ನಂತರ ದೇಶವು ಎಲ್ಲಾ ಕ್ಷೇತ್ರಗಳಲ್ಲಿ ಅಭೂತಪೂರ್ವ ಪ್ರಗತಿಯನ್ನು ಸಾಧಿಸಿದೆ ಮತ್ತು ದೇಶದ ಆರ್ಥಿಕತೆಯು ಪ್ರಬಲವಾಗಿದೆ. ಇಂದು ನಮ್ಮ ಆರ್ಥಿಕತೆಯು ವಿಶ್ವದ 5 ನೇ ಅತಿದೊಡ್ಡ ಆರ್ಥಿಕತೆಯಾಗಿದೆ. ದೇಶವನ್ನು ಮತ್ತಷ್ಟು ಬಲಪಡಿಸಲು ಮತ್ತು ವಿಶ್ವದ 3 ನೇ ಅತಿದೊಡ್ಡ ಆರ್ಥಿಕತೆಯನ್ನು ಮಾಡಲು ನಿರ್ಧರಿಸಲಾಗಿದೆ. ದೇಶವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡುವಲ್ಲಿ ಹಾಗೂ ಪರಿಸರ ಸಂರಕ್ಷಣೆ ಮಾಡಲು ಮುಂದಾಗಬೇಕು ಎಂದು ತಿಳಿಸಿದರು.

ಕರ್ನಾಟಕ ರಾಜ್ಯವು ದೇಶದ ಪ್ರಗತಿಪರ ರಾಜ್ಯವಾಗಿದ್ದು, ಹುಬ್ಬಳ್ಳಿ-ಧಾರವಾಡವು ರಾಜ್ಯದ ಸಾಂಸ್ಕೃತಿಕ ರಾಜಧಾನಿ ಎಂದು ಕರೆಯಲ್ಪಡುತ್ತದೆ, ಶಾಸ್ತ್ರೀಯ ಸಂಗೀತ ಕ್ಷೇತ್ರದಲ್ಲಿ, ಧಾರವಾಡವು ಜಗತ್ತಿಗೆ ಅನೇಕ ರತ್ನಗಳನ್ನು ನೀಡಿದೆ. ಕರ್ನಾಟಕ ವಿಶ್ವವಿದ್ಯಾಲಯವು ರಾಜ್ಯದ ಎರಡನೇ ಅತ್ಯಂತ ಹಳೆಯ ವಿಶ್ವವಿದ್ಯಾಲಯವಾಗಿದೆ. ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಪಡೆದಿರುವ ಈ ವಿಶ್ವವಿದ್ಯಾಲಯ ಹಲವು ಸಾಧನೆ ಮಾಡಿದೆ ಎಂದು ಶ್ಲಾಘಿಸಿದರು.

ಸಮಾರಂಭದಲ್ಲಿ ಸಚಿವರಾದ ಎಂ.ಸಿ.ಸುಧಾಕರ್, ಕುಲಪತಿ ಪೆÇ್ರ.ಕೆ.ಬಿ ಗುಡಸಿ, ಇಂಡೋ-ಫ್ರೆಂಚ್ ಸೆಂಟರ್ ಫಾರ್ ಪ್ರಮೋಷನ್ ಆಫ್ ಅಡ್ವಾನ್ಸ್ಡ್ ರಿಸರ್ಚ್, ನವದೆಹಲಿಯ ನಿರ್ದೇಶಕ, ಪೆÇ್ರಫೆಸರ್ ನಿತಿನ್ ಸೇಠ್ ಸೇರಿದಂತೆ ಮುಂತಾದ ಗಣ್ಯರು ಉಪಸ್ಥಿತರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here