DPSE ಶಿಕ್ಷಕರ ನೇಮಕಾತಿಗೆ ಒತ್ತಾಯಿಸಿ ವಿಧಾನ ಪರಿಷತ್ ಸದಸ್ಯ ಶಶೀಲ್ ನಮೋಶಿಗೆ ಮನವಿ

0
123

ಕಲಬುರಗಿ; ಪೂರ್ವ ಪ್ರಾಥಮಿಕ ಶಿಕ್ಷಣದಲ್ಲಿ ಡಿಪ್ಲೋಮೋ DPSE ಕೋರ್ಸನ್ನು ಮುಗಿಸಿರುವ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಬೇಕೆಂದು ಸರಕಾರದ ಮೇಲೆ ಒತ್ತಾಡಹಾಕಬೇಕೆಂದು ಒತ್ತಾಯಿಸಿ ಡಿ.ಪಿ.ಎಸ್.ಇ ತರಬೇತಿ ಪಡೆದ ಶಿಕ್ಷಕರ ಸಂಘ ವತಿಯಿಂದ ವಿಧಾನ ಪರಿಷತ್ ಸದಸ್ಯರಾದ ಶಶೀಲ್ ಜಿ ನಮೋಶಿ ಅವರಿಗೆ ಭೇಟಿ ನೀಡಿ ಮನವಿ ಸಲ್ಲಿಸಿ ಆಗ್ರಹಿಸಿದರು.

ಸೋಮವಾರ ವಿಧಾನ ಪರಿಷತ್ ಸದಸ್ಯರಿಗೆ ಭೇಟಿ ನೀಡಿ 2018-2019 ನೇ ಸಾಲಿನ ಆಯ ವ್ಯಯ ಘೋಷಣೆಯಂತೆ ಪ್ರಸ್ತುತ ರಾಜ್ಯವ್ಯಾಪಿ 1500ಕ್ಕೂ ಅಧಿಕ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಆಂಗ್ಲ ಮಾಧ್ಯಮದಲ್ಲಿ ತರಗತಿಗಳು ನಡೆಯುತ್ತಿದೆ ಹಾಗೂ 276 ಕರ್ನಾಟಕ ಪಬ್ಲಿಕ್ ಶಾಲೆಗಳು (ಏPS)  ಕಾರ್ಯ ನಿರ್ವಹಿಸುತ್ತಿದ್ದು, ಸದರಿ ಶಾಲೆಗಳಲ್ಲಿ ಆಂಗ್ಲ ಮಾಧ್ಯಮದಲ್ಲಿ 1 ಮತ್ತು 2ನೇ ತರಗತಿಗಳನ್ನು ಪ್ರಾರಂಭಿಸಲಾಗಿದೆ. ಮುಂದುವರೆದು, ಸದರಿ ಶಾಲೆಗಳಲ್ಲಿ ಆ ತರಗತಿಗಳಿಗೆ ಬೋಧಿಸಲು ನಿಗದಿತ ವಿದ್ಯಾರ್ಹತೆ ಹೊಂದಿದ ಹಾಗೂ ತರಬೇತಿ ಪಡೆದ ಶಿಕ್ಷಕರು ಲಭ್ಯವಿರುವುದಿಲ್ಲ. ಇದರಿಂದಾಗಿ ಮಕ್ಕಳ ಕಲಿಕೆಯ ಮೇಲೆ ಪ್ರತಿಕೂಲ ಪರಿಣಾಮ ಉಂಟಾಗುತ್ತಿದೆ ಎಂದು ತಿಳಿಸಿದರು.

Contact Your\'s Advertisement; 9902492681

ಕೋರ್ಸ್ ತೇರ್ಗಡೆಯಾದ ಅಭ್ಯರ್ಥಿಗಳನ್ನು ಆಂಗ್ಲ ಮಾಧ್ಯಮದ ಸರ್ಕಾರಿ ಪ್ರಾಥಮಿಕ ಶಾಲೆ ಹಾಗೂ ಕೆ ಪಿ ಎಸ್ ಶಾಲೆಗಳಲ್ಲಿ ನೇಮಕ ಮಾಡಿಕೊಳ್ಳಲು ಅಗತ್ಯವಿರುವ ವೃಂದ ಮತ್ತು ನೇಮಕಾತಿ ನಿಯಮಗಳನ್ನು ರಚನೆ ಮಾಡಿ ನೇಮಕಾತಿ ಮಾಡಿಕೊಳ್ಳಲು ರಾಜ್ಯ ಸರಕಾರದ ಮೇಲೆ ಒತ್ತಾಡ ತರಬೇಕೆಂದು ಮನವಿ ಸಲ್ಲಿಸಿ ಒತ್ತಾಯಿಸಿದ್ದಾರೆ.

ಈ ಸಂದರ್ಭದಲ್ಲಿ ಸಂಘದ ಉಪಾ ಅಧ್ಯಕ್ಷರಾದ ಆಶಾ, ನೇಹಾ ಫಾತೀಮಾ, ಶಹೇಬಾಜ್ ಹಾಗೂ ರೀಹಾನ್ ಸೇರಿದಂತೆ ಮುತಾಂದವರು ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here