ಬಿಸಿ ಬಿಸಿ ಸುದ್ದಿ

ವೈದ್ಯ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದರೆ ಕಾನೂನು ಕ್ರಮ | ಮೊದಲು ಚಿಕಿತ್ಸೆ ನೀಡಿ: ಪೊಲೀಸ್ ಆಯುಕ್ತ ಚೇತನ್ ಆರ್

ಕಲಬುರಗಿ,ಅ.31; ಕಲಬುರಗಿ ನಗರದಾದ್ಯಂತ ಆಸ್ಪತ್ರೆಯಲ್ಲಿ ರೋಗಿ ಸಂಬಂಧಿಕರು ಆಸ್ಪತ್ರೆ ವೈದ್ಯರು, ಸಿಬ್ಬಂದಿ ಮೇಲೆ ಹಲ್ಲೆ ಅಥವಾ ಆಸ್ಪತ್ರೆಯ ಆಸ್ತಿ-ಪಾಸಿ ಹಾನಿ ಮಾಡಿದಲ್ಲಿ ಅಂತಹವರ ಮೇಲೆ ಕಾನೂನು ಕ್ರಮ ಕೈಗೊಳ್ಳುವುದಾಗಿ ಪೊಲೀಸ್ ಆಯುಕ್ತ ಚೇತನ್ ಆರ್. ತಿಳಿಸಿದ್ದಾರೆ.

ಮೊದಲು ಚಿಕಿತ್ಸೆ ನೀಡಿ: ಮೆಡಿಕಲ್ ಲೀಗಲ್ ಕೇಸ್ ಪ್ರಕರಣಗಳಲ್ಲಿ (ಅಪಘಾತ ಪ್ರಕರಣಗಳು) ಆಸ್ಪತ್ರೆಗೆ ಬರುವ ಗಾಯಾಳು ರೋಗಿಗೆ ಆಸ್ಪತ್ರೆಯ ವೈದ್ಯ ಸಿಬ್ಬಂದಿ ಮೊದಲು ಚಿಕಿತ್ಸೆ ನೀಡಬೇಕು. ತದನಂತರ ಪೊಲೀಸ್ ಇಲಾಖೆಗೆ ಮಾಹಿತಿ ನೀಡಬೇಕು. ಇಂತಹ ಪ್ರಕರಣಗಳ ಕುರಿತು ಆಸ್ಪತ್ರೆಯಲ್ಲಿ ಕಡ್ಡಾಯವಾಗಿ ದಾಖಲೆ ಇಡಬೇಕು ಎಂದು ಪೊಲೀಸ್ ಆಯಕ್ತ ಚೇತನ್ ಆರ್. ತಿಳಿಸಿದರು.

ಮಂಗಳವಾರ ತಮ್ಮ ಕಚೇರಿಯಲ್ಲಿ ಆಸ್ಪತ್ರೆಗಳ ವೈದ್ಯ ಸಿಬ್ಬಂದಿಗಳ ಮೇಲೆ ಹಲ್ಲೆ ಮತ್ತು ಆಸ್ತಿ-ಪಾಸ್ತಿ ಹಾನಿ ತಡೆಗಟ್ಟುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆ, ಜಿಮ್ಸ್, ಇ.ಎಸ್.ಐ.ಸಿ., ಕೆ.ಬಿ.ಎನ್., ಎಂ.ಆರ್.ಎಂ.ಸಿ ಮತ್ತು ಖಾಸಗಿ ಆಸ್ಪತ್ರೆಗಳ ಮುಖ್ಯಸ್ಥರು, ಇಂಡಿಯನ್ ಮೆಡಿಕಲ್ ಅಸೋಸಿಯೇಷನ್ ಮುಖ್ಯಸ್ಥರೊಂದಿಗೆ ಸಭೆ ನಡೆಸಿದ ಅವರು ಆರೋಗ್ಯ ಸಂಸ್ಥೆಗಳ ಸಿಬ್ಬಂದಿಗಳ ಮೇಲೆ ಹಲ್ಲೆ, ಆಸ್ತಿ ಹಾನಿ ಮಾಡಿದಲ್ಲಿ ಕೂಡಲೆ ಪೊಲೀಸ್ ಇಲಾಖೆಯ ಗಮನಕ್ಕೆ ತರಬೇಕು ಎಂದು ಆರೋಗ್ಯ ಸಂಸ್ಥೆಗಳ ಎಲ್ಲಾ ಮುಖ್ಯಸ್ಥರಿಗೆ ಸೂಚನೆ ನೀಡಿದರು.

ಇನ್ನೂ ಆಸ್ಪತ್ರೆಯಲ್ಲಿ ವೈದ್ಯ ಸಿಬ್ಬಂದಿಯ ನಿಷ್ಕಾಳಜಿಯಿಂದ ಯಾವುದೇ ರೋಗಿ ಸಾವನಪ್ಪಿದ್ದರೆ ಇಂತಹ ಪ್ರಕರಣಗಳಲ್ಲಿ ರೋಗಿ ಸಂಬಂಧಿಗಳು ಕಾನೂನನ್ನು ಕೈಗೆ ತೆಗೆದುಕೊಳ್ಳದೆ ಪೊಲೀಸ್ ಠಾಣೆಗೆ ದೂರು ನೀಡಬೇಕು. ಪೊಲೀಸ್ ಅಧಿಕಾರಿಗಳು ದೂರು ಸ್ವೀಕರಿಸಿದ ನಂತರ ಸುಪ್ರೀಂ ಕೋರ್ಟ್ ತೀರ್ಪಿನಂತೆ ಆಸ್ಪತ್ರೆ ಮುಖ್ಯಸ್ಥರಿಂದ ಸಮಗ್ರ ಮಾಹಿತಿ ಪಡೆದು ಮುಂದಿನ ಕಾನೂನು ಕ್ರಮ ಜರುಗಿಸಲಿದ್ದಾರೆ ಎಂದರು.

ಸಭೆಯಲ್ಲಿ ಭಾಗವಹಿಸಿದ ಇಂಡಿಯನ್ ಮೆಡಿಕಲ್ ಅಸೋಸಿಯೇಷನ್ ಅಧ್ಯಕ್ಷ ಡಾ.ಗುರುಪಾಟೀಲ ಮಾತನಾಡಿ ಆಸ್ಪತ್ರೆಗಳಲ್ಲಿ ವೈದ್ಯ ಸಿಬ್ಬಂದಿಗಳ ಮೇಲಿನ ಹಲ್ಲೆ ತಡೆಗಟ್ಟುವ ನಿಟ್ಟಿನಲ್ಲಿ ಆಸ್ಪತ್ರೆಗಳಿಗೆ ಸೂಕ್ತ ಪೊಲೀಸ್ ಭದ್ರತೆ ಒದಗಿಸಬೇಕು ಎಂದು ಮನವಿ ಮಾಡಿಕೊಂಡರು. ಇದಕ್ಕೆ ಸಮ್ಮತಿಸಿದ ಪೊಲೀಸ್ ಆಯುಕ್ತ ಚೇತನ್ ಆರ್. ಅವರು, ಇಂತಹ ಘಟನೆಗಳು ನಡೆದಲ್ಲಿ ಕೂಡಲೆ ಸಮೀಪದ ಪೊಲೀಸ್ ಠಾಣೆ ಅಥವಾ ಕಂಟ್ರೋಲ್ ರೂಂಗೆ ಮಾಹಿತಿ ನೀಡಿದಲ್ಲಿ ಕೂಡಲೆ ನಮ್ಮ ಪೊಲೀಸ್ ತಂಡ ನೆರವಿಗೆ ಬರಲಿದೆ ಎಂದು ಅಭಯ ನೀಡಿದರು.

ಆಸ್ಪತ್ರೆ ಸಿಬ್ಬಂದಿಗಳ ಮತ್ತು ಆಸ್ತಿ-ಪಾಸ್ತಿ ಸುರಕ್ಷತೆ ದೃಷ್ಠಿಯಿಂದ ನಗರದಲ್ಲಿನ ಆಸ್ಪತ್ರೆಗಳು, ಆರೋಗ್ಯ ಸಂಸ್ಥೆಗಳು ಸಿ.ಸಿ.ಟಿ.ವಿ. ಅಳವಡಿಸಿಕೊಳ್ಳಬೇಕಲ್ಲದೆ ಅಗತ್ಯ ಸುರಕ್ಷಾ ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ಆರೋಗ್ಯ ಸಂಸ್ಥೆಗಳ ಮುಖ್ಯಸ್ಥರಿಗೆ ಪೊಲೀಸ್ ಆಯುಕ್ತರು ತಿಳಿಸಿದರು.

ಸಭೆಯಲ್ಲಿ ಡಿ.ಸಿ.ಪಿ. ಕನಿಕಾ ಸಿಕ್ರಿವಾಲ್, ಡಿ.ಎಚ್.ಓ ಡಾ.ರಾಜಶೇಖರ ಮಾಲಿ, ಜಿಮ್ಸ್ ಸಂಸ್ಥೆಯ ಅರ್.ಎಂ‌.ಓ ಡಾ.ನಾಗರಾಜ ಪಾಟೀಲ, ಬಸವೇಶ್ವರ ಆಸ್ಪತ್ರೆಯ ಡಾ.ರಾಜಶೇಖರ ಕುಳಗೇರಿ, ಇ.ಎಸ್.ಐ.ಸಿ., ಕೆ.ಬಿ.ಎನ್., ಎಂ.ಆರ್.ಎಂ.ಸಿ ಸೇರಿದಂತೆ ಇತರೆ ಖಾಸಗಿ ಆಸ್ಪತ್ರೆಗಳ ಮುಖ್ಯಸ್ಥರು, ತಾಲೂಕಾ ಆರೋಗ್ಯಾಧಿಕಾರಿಗಳು, ಇಂಡಿಯನ್ ಮೆಡಿಕಲ್ ಅಸೋಸಿಯೇಷನ್ ಉಪಾಧ್ಯಕ್ಷ ಡಾ.ಕಿರಣ ದೇಶಮುಖ, ವಿವಿಧ ತಜ್ಞ ವೈದ್ಯರುಗಳ ಸಂಘದ ಅಧ್ಯಕ್ಷರು ಸೇರಿದಂತೆ ಇನ್ನಿತರರು ಇದ್ದರು.

emedialine

Recent Posts

ಕಲಬುರಗಿ: ಬಿಜೆಪಿ ಹಿರಿಯ ಮುಖಂಡ ಧರ್ಮಣ್ಣ ದೊಡ್ಡಮನಿ ನಿಧನ

ಕಲಬುರಗಿ: ಬಿಜೆಪಿ ಹಿರಿಯ ಮುಖಂಡ ಧರ್ಮಣ್ಣ ಇಂದು ಬೆಳಗ್ಗೆ ವಾಕಿಂಗ್ ಹೋದಾಗ ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಕಲಬುರಗಿ ನಗರದ ಜೇವರ್ಗಿ…

21 mins ago

ಜೇವರ್ಗಿ: ಲಂಚಾಪಡೆಯುತ್ತಿದ್ದಾಗ ಮಹಿಳಾ ಸಿಬ್ಬಂದಿ ಲೋಕಾಯುಕ್ತರ ಬಲೆಗೆ

ಕಲಬುರಗಿ: ನೀರಿನ ಕನೆಕ್ಷನಗಾಗಿ ಹತ್ತು ಸಾವಿರ ಲಂಚಾಪಡೆಯುತ್ತಿದ್ದಾಗ ಜೇವರ್ಗಿ ಪುರಸಭೆಯ ಮಹಿಳಾ ಸಿಬ್ಬಂದಿ ಲಣೊಕಾಯುಕ್ತರ ಬಲೆಗೆ ಬಿದ್ದ ಘಟನೆ ಬುಧವಾರ…

13 hours ago

371 ಜೆ ಅಡಿ ಉದ್ಯೋಗ ನೇಮಕಾತಿ ಸಂಬಂಧದ ಗೊಂದಲ ನಿವಾರಿಸಿ ಮಾರ್ಗಸೂಚಿ ಸಿದ್ಧಪಡಿಸಲು ಸಚಿವರ ಸೂಚನೆ

ಬೆಂಗಳೂರು: ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ 371 ಜೆ ಅಡಿ ಉದ್ಯೋಗ ನೇಮಕಾತಿ ಹಾಗೂ ಬಡ್ತಿ ಸಂಬಂಧದಲ್ಲಿ ಆಗಿರುವ ಗೊಂದಲಗಳನ್ನು ನಿವಾರಿಸಿ…

14 hours ago

ಶ್ಯಾಮರಾವ ನಾಟಿಕಾರಗೆ ಅಧ್ಯಕ್ಷರನ್ನಾಗಿ ನೇಮಕಕ್ಕೆ ಡಾ. ಮಲ್ಲಿಕಾರ್ಜುನ ಖರ್ಗೆಗೆ ಮನವಿ

ಕಲಬುರಗಿ: ಆದಿಜಾಂಬವ ಸರ್ಕಾರಿ ಅರೆ ಸರ್ಕಾರಿ ನೌಕರರ ಪತ್ತಿನ ಸಹಕಾರ ಸಂಘದ ನಿಯೋಗ ನವದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷರಾದ ಡಾ.ಮಲ್ಲಿಕಾರ್ಜುನ ಖರ್ಗೆ…

15 hours ago

ಚಿರಂಜೀವಿ ವೆಂಕಯ್ಯ ಕುಶಾಲ್ ಗುತ್ತೇದಾರ್ ಗೆ ಸನ್ಮಾನ

ಕಲಬುರಗಿ: ಮಾಜಿ ಸಚಿವರಾದ ಮಾಲಿಕೆಯ್ಯಾ ಗುತ್ತೇದಾರ್ ಅವರ ಅಪ್ಪಟ ಅಭಿಮಾನಿ ಹಾಗೂ ತಾಲೂಕ ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟ ಪೂರ್ವ…

15 hours ago

ಮಹಿಳಾ ಘಟಕದ ನೂತನ ಪದಾಧಿಕಾರಿಗಳ ನೇಮಕ

ಕಲಬುರಗಿ: ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾಧ್ಯಕ್ಷರಾದ ಪ್ರಶಾಂತ್ ಗೌಡ ಮಾಲಿಪಾಟೀಲ್ ಅವರ ನೇತೃತ್ವದಲ್ಲಿ ಜಿಲ್ಲಾ…

15 hours ago