ಕಲಬುರಗಿ: ಜಯನಗರ ಶಿವಮಂದಿರದಲ್ಲಿ ಜಯನಗರ ಶಿವಮಂದಿರ ಅಭಿವೃದ್ಧಿ ಟ್ರಸ್ಟ್ ವತಿಯಿಂದ ಹಮ್ಮಿಕೊಂಡಿದ್ದ 68ನೇ ಕನ್ನಡ ರಾಜ್ಯೋತ್ಸವ ದಿನಾಚರಣೆ ಅಂಗವಾಗಿ ಕರುನಾಡ ತಾಯಿ ಭುವನೇಶ್ವರಿ ದೇವಿಗೆ ಮಾಲಾರ್ಪಣೆ ಮಾಡಿ ಆಚರಿಸಲಾಯಿತು.
ನಂತರ ನಡೆದ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಟ್ರಸ್ಟ್ ಅಧ್ಯಕ್ಷ ಲಿಂಗರಾಜ ಸಿರಗಾಪೂರ ಕನ್ನಡ ನೆಲ,ಜಲ ನಾಡು ನುಡಿಯ ರಕ್ಷಣೆ ಮಾಡುವುದು ನಮ್ಮೆಲ್ಲ ಜವಾಬ್ದಾರಿಯಾಗಿದೆ.ಕನ್ನಡ ಭಾಷೆ ಉಳಿಸಿ ಬೆಳೆಸುವ ಅಗತ್ಯವು ಇದೆ.ರಾಜ್ಯದ ಪ್ರತಿ ಮನೆ ಮನೆಯಲ್ಲೂ ಕನ್ನಡ ಮೆರೆಯಬೇಕು.ಅಂಗಡಿ ಇನ್ನಿತರ ಮಳಿಗೆಗಳ ನಾಮಫಲಕದಲ್ಲಿ ಕನ್ನಡದಿಂದಲೇ ಬೆರೆಸಬೇಕು.ಇದು ಕಡ್ಡಾಯವಾಗಿ ಪಾಲಿಸಬೇಕು ಎಂದು ಕರೆ ನೀಡಿದರು.
ಟ್ರಸ್ಟ್ ಹಿರಿಯ ಸದಸ್ಯರಾದ ಬಸವರಾಜ ಅನ್ವರಕರ, ಕೋಶಾಧ್ಯಕ್ಷ ಬಸವರಾಜ ಮಾಗಿ, ಸದಸ್ಯರಾದ ಮನೋಹರ ಬಡಶೇಷಿ ಹಾಗೂ ನಾಗರಾಜ ಖೂಬಾ ಅವರು ಮಾತನಾಡಿದರು.
ಟ್ರಸ್ಟ್ ಮಹಿಳಾ ಘಟಕದ ಪದಾಧಿಕಾರಿಗಳು ಮೊದಲು ನಾಡ ಗೀತೆ ಹಾಡಿದರು.ಟ್ರಸ್ಟ್ ಸಂಘಟನಾ ಕಾರ್ಯದರ್ಶಿ ಬಂಡಪ್ಪ ಕೇಸೂರ,ಸಹ ಕಾರ್ಯದರ್ಶಿ ಸಿದ್ಧಲಿಂಗ ಗುಬ್ಬಿ,ಹಿರಿಯ ಸದಸ್ಯರಾದ ಭೀಮಾಶಂಕರ ಶೆಟ್ಟಿ,ಎಸ್.ಡಿ.ಸೇಡಂಕರ ಮಲ್ಲಯ್ಯ ಸ್ವಾಮಿ ಬೀದಿಮನಿ, ಶಿವಕುಮಾರ ಪಾಟೀಲ, ಮಲ್ಲಯ್ಯ ಸ್ವಾಮಿ ಗಂಗಾಧರಮಠ, ಮಹಿಳಾ ಘಟಕದ ಅಧ್ಯಕ್ಷೆ ಶೈಲಜಾ ವಾಲಿ, ಅನಿತಾ ದೇವಣಿ, ಸುಷ್ಮಾ ಮಾಗಿ, ಲತಾ ತುಪ್ಪದ, ಅಂಬಕ್ಕಾ ಪಾಟೀಲ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಕಲಬುರಗಿ: ನಗರದ ಪ್ರತಿಷ್ಠಿತ ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ, ಶ್ರೀಮತಿ ವೀರಮ್ಮ ಗಂಗಸಿರಿ ಮಹಿಳಾ ಪದವಿ-ಪೂರ್ವ ಕಾಲೇಜಿನಲ್ಲಿ ಸಂವಿಧಾನ ದಿನ…
ಶಹಾಬಾದ: ಮಾನವೀಯ ಮೌಲ್ಯಗಳು ವಿದ್ಯಾರ್ಥಿ ಯುವಜನರ ಬೆಳೆಸಿಕೊಂಡು ಉತ್ತಮ ನಾಗರಿಕರಾಗಬೇಕೆಂದು ಎಸ್ಎಸ್ ಮರುಗೋಳ ಕಾಲೇಜಿನ ಪ್ರಾಚಾರ್ಯರಾದ ಪ್ರೊ. ಕೆ.ಬಿ. ಬಿಲ್ಲವ…
ಶಹಾಪುರ : 26 : ಚಿಕ್ಕ ವಯಸ್ಸಿನಲ್ಲಿಯೆ ಹಿರಿದಾದ ಜ್ಞಾನವನ್ನು ಹೊಂದಿದ್ದ ಚೆನ್ನಬಸವಣ್ಣ ಷಟಸ್ಥಲ ಜ್ಞಾನಿ ಎಂದು ಕರೆಯಿಸಿಕೊಂಡರು. ಬಸವಣ್ಣನವರ…
ಶಹಾಬಾದ: ನಗರಸಭೆಯ ವಾರ್ಡ ನಂ.3 ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ವಾಜೀದ್ ಖಾನ್ ಜಮಾದಾರ ಅವರು ಗೆಲುವು ಸಾಧಿಸಿದ್ದಾರೆ. ನಗರದ…
ಶಹಾಬಾದ: ಜಾತಿ-ಬೇಧ ಎನ್ನದೇ ಸರ್ವರಿಗೂ ಮೂಲಭೂತ ಹಕ್ಕನ್ನು ಒದಗಿಸಿ, ಬದುಕುವ ವಾತಾವರಣ ಸೃಷ್ಠಿಸಿದ್ದೇ ಡಾ. ಬಿ .ಆರ್. ಅಂಬೇಡ್ಕರ್ ಬರೆದ…
ಶಹಾಬಾದ: ಸಂವಿಧಾನದ ಆಶೋತ್ತರಗಳು, ಮೌಲ್ಯಗಳನ್ನು ಅರಿತು ಅದರಂತೆ ಎಲ್ಲರೂ ನಡೆದರೆ ನಮ್ಮ ದೇಶ ಜಗತ್ತಿನಲ್ಲಿಯೇ ಉನ್ನತ ಸ್ಥಾನದಲ್ಲಿರುತ್ತದೆ ಎಂದು ಬಿಜೆಪಿ…