ಸುರಪುರ: ನಗರದ ವಿವಿಧ ಕಡೆಗಳಲ್ಲಿ ನಗರಸಭೆ ಸೇರಿದಂತೆ ಅನೇಕ ಕನ್ನಡಪರ ಸಂಘಟನೆಗಳಿಂದ 68ನೇ ಕನ್ನಡ ರಾಜ್ಯೋತ್ಸವ ಆಚರಿಸಲಾಯಿತು.
ನಗರದ ಮಹಾತ್ಮ ಗಾಂಧಿ ವೃತ್ತ ಹಾಗೂ ನಗರಸಭೆ ಕಾರ್ಯಾಲಯದ ಮುಂದೆ ನಡೆದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಕನ್ನಡ ಭುವನೇಶ್ವರಿ ಹಾಗೂ ಮಹಾತ್ಮ ಗಾಂಧಿ ಮತ್ತು ಡಾ:ಬಿ.ಆರ್ ಅಂಬೇಡ್ಕರ್ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ನಂತರ ಪೌರಾಯುಕ್ತ ಪ್ರೇಮ್ ಚಾಲ್ರ್ಸ್ ಧ್ವಜಾರೋಹಣ ನೆರವೇರಿಸಿದರು.ಕಾರ್ಯಕ್ರಮದಲ್ಲಿ ನಗರಸಭೆ ಸದಸ್ಯರಾದ ರಾಜಾ ಪಿಡ್ಡ ನಾಯಕ (ತಾತಾ),ಮಾನಪ್ಪ ಚಳ್ಳಿಗಿಡ,ಶಿವಕುಮಾರ ಕಟ್ಟಿಮನಿ,ಶಕೀಲ ಅಹ್ಮದ್,ಮಹ್ಮದ್ ಗೌಸ್ ಕಿಣ್ಣಿ,ಜುಮ್ಮಣ್ಣ ಕೆಂಗುರಿ,ವೆಂಕಟೇಶ ಹೊಸ್ಮನಿ ಸೇರಿದಂತೆ ನಗರಸಭೆ ವ್ಯವಸ್ಥಾಪಕ ಯಲ್ಲಪ್ಪ ನಾಯಕ,ಎಇಇ ಶಾಂತಪ್ಪ ಸೇರಿದಂತೆ ವಿವಿಧ ಸದಸ್ಯರು ಹಾಗೂ ಸಿಬ್ಬಂದಿಗಳು ಭಾಗವಹಿಸಿದ್ದರು.
ಕರ್ನಾಟಕ ರಕ್ಷಣಾ ವೇದಿಕೆ: ನಗರದ ಮಹಾತ್ಮ ಗಾಂಧಿ ವೃತ್ತದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ರಾಜ್ಯೋತ್ಸವ ಆಚರಿಸಲಾಯಿತು.ಕನ್ನಡ ಧ್ವಜಾರೋಹಣ ನೆರವೇರಿಸಿದ ಸಂಘಟನೆ ತಾಲೂಕು ಅಧ್ಯಕ್ಷ ವೆಂಕಟೇಶ ನಾಯಕ ಬೈರಿಮಡ್ಡಿ ಮಾತನಾಡಿದರು.ಭೀಮು ನಾಯಕ ಮಲ್ಲಿಬಾವಿ,ಹಣಮೆಗೌಡ ಶಖಾಪುರ,ಶ್ರೀನಿವಾಸ ಲಕ್ಷ್ಮೀಪುರ,ಆನಂದ ಮಾಚಗುಂಡಾಳ,ಹಣಮಂತ ಹಾಲಗೇರಿ ಸೇರಿದಂತೆ ಅನೇಕರು ಭಾಗವಹಿಸಿದ್ದರು.
ಜಯ ಕರ್ನಾಟಕ ರಕ್ಷಣಾ ಸೇನೆ: ನಗರದಲ್ಲಿ ಜಯ ಕರ್ನಾಟಕ ರಕ್ಷಣಾ ಸೇನೆ ತಾಲೂಕು ಘಟಕದ ಕಚೇರಿಯಲ್ಲಿ 68ನೇ ರಾಜ್ಯೋತ್ಸವ ಆಚರಿಸಲಾಯಿತು.ನಂತರ ನಗರದಲ್ಲಿ ಕನ್ನಡ ಭುವನೇಶ್ವರಿಯ ಭಾವಚಿತ್ರದ ಮೆರವಣಿಗೆ ನಡೆಸಲಾಯಿತು.ಕಾರ್ಯಕ್ರಮದಲ್ಲಿ ಸಂಘಟನೆ ತಾಲೂಕು ಅಧ್ಯಕ್ಷ ಮಲ್ಲಪ್ಪ ನಾಯಕ ಕಬಾಡಗೇರ,ಜಿಲ್ಲಾ ಕಾರ್ಯಾಧ್ಯಕ್ಷ ಶರಣು ಭೈರಿಮಡ್ಡಿ,ಶಿವರಾಜ ವಗ್ಗರ,ರಾಘು ಗೋಗಿಕೇರ,ತಿಪ್ಪಣ್ಣ ಕಾನಿಕೇರ,ಮುಕ್ತಿಯಾರ್, ಮಹಿಳಾ ಘಟಕದ ಅಧ್ಯಕ್ಷೆ ಲಕ್ಷ್ಮೀಬಾಯಿ ಸೇರಿದಂತೆ ಅನೇಕರು ಭಾಗವಹಿಸಿದ್ದರು.
ಕನ್ನಡ ಸೇನೆ ಕರ್ನಾಟಕ: ನಗರದ ತಹಸೀಲ್ದಾರ್ ರಸ್ತೆಯಲ್ಲಿರುವ ಕನ್ನಡ ಧ್ವಜಾಸ್ತಂಬದ ಬಳಿಯಲ್ಲಿ ಕನ್ನಡ ಸೇನೆ ಕರ್ನಾಟಕ ಸಂಘಟನೆಯಿಂದ 68ನೇ ಕನ್ನಡ ರಾಜ್ಯೋತ್ಸವ ಆಚರಿಸಲಾಯಿತು.ಕನ್ನಡ ಭುವನೇಶ್ವರಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಕನ್ನಡ ಧ್ವಜಾರೋಹಣ ನೆರವೇರಿಸಿದರು.ಸಂಘಟನೆ ತಾಲೂಕು ಅಧ್ಯಕ್ಷ ಮಲ್ಲು ಹೊಸ್ಮನಿ,ಕಾರ್ಯಾಧ್ಯಕ್ಷ ಭಾಗನಾಥ ಗುತ್ತೇದಾರ ಸೇರಿದಂತೆ ಅನೇಕರು ಭಾಗವಹಿಸಿದ್ದರು.
ಕನ್ನಡ ಸಾಹಿತ್ಯ ಸಂಘ ಸುರಪುರ: ನಗರದ ರಾಜಾ ಮದನಗೋಪಾಲ ನಾಯಕ ಸ್ಮಾರಕ ಭವನದಲ್ಲಿ ಕನ್ನಡ ಸಾಹಿತ್ಯ ಸಂಘ ಸುರಪುರ ವತಿಯಿಂದ 68ನೇ ಕನ್ನಡ ರಾಜ್ಯೋತ್ಸವ ಆಚರಿಸಲಾಯಿತು.ಭುವನೇಶ್ವರಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಆಚರಿಸಿದರು.ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಬಸವರಾಜ ಜಮದ್ರಖಾನಿ,ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ ಜಾಲವಾದಿ,ಪ್ರಕಾಶಚಂದ್ ಜೈನ್,ಜಯಲಲಿತಾ ಪಾಟೀಲ್,ರಾಜಶೇಖರ ದೇಸಾಯಿ,ರಾಘವೇಂದ್ರ ಭಕ್ರಿ,ಎ.ಕಮಲಾಕರ ಸೇರಿದಂತೆ ಅನೇಕರಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…