ದೇವದುರ್ಗ: ಕನ್ನಡ ಕೇವಲ ಅಭಿಮಾನದ ಪ್ರಶ್ನೆಯಾಗಬಾರದು. ಕನ್ನಡ ಅನ್ನ ನೀಡುವ, ಉದ್ಯೋಗ ಒದಗಿಸುವ ಭಾಷೆಯಾಗಬೇಕು ಎಂದು ಪತ್ರಕರ್ತ- ಸಾಹಿತಿ ಡಾ. ಶಿವರಂಜನ ಸತ್ಯಂಪೇಟೆ ಅಭಿಪ್ರಾಯಪಟ್ಟರು.
ತಾಲ್ಲೂಕು ಆಡಳಿತದ ವತಿಯಿಂದ ಸಾರ್ವಜನಿಕ ಕ್ಲಬ್ ಮೈದಾನದಲ್ಲಿ ಬುಧವಾರ ಹಮ್ಮಿಕೊಂಡಿದ್ದ 68ನೇ ರಾಜ್ಯೋತ್ಸವ ಕಾರ್ಯಕ್ರಮ ಹಾಗೂ ಸುವರ್ಣ ಕರ್ನಾಟಕ ವರ್ಷ ಕಾರ್ಯಕ್ರಮದಲ್ಲಿ ಕನ್ನಡ ಪ್ರಜ್ಞೆ ವಿಷಯ ಕುರಿತು ಉಪನ್ಯಾಸ ನೀಡಿದ ಅವರು, ಕನ್ನಡ ಹೆಸರಾದಂತೆ ಪ್ರತಿಯೊಬ್ಬರ ಉಸಿರಾಗಬೇಕು ಎಂದರು.
ಕನ್ನಡ ಭಾಷೆಯು ಸಮಸ್ತ ನಾಡಿನ ಕನ್ನಡಿಗರ ಆಸ್ಮಿತೆಯಾಗಿದ್ದು ಕನ್ನಡ ಕಟ್ಟುವ ಕೆಲಸ ಕನ್ನಡ ಕಾಪಾಡುವ ಕೆಲಸವನ್ನು ಕಾಯಾ ವಾಚಾ ಮನಸಾ ಎನ್ನುವಂತೆ ಮಾಡಿದಾಗ ಮಾತ್ರ ಕನ್ನಡಕ್ಕೆ ಬೆಲೆ ದೊರೆಯಲಿದೆ ಎಂದು ಅವರು ತಿಳಿಸಿದರು.
ಭಾಷಾವಾರು ಪ್ರಾಂತ ರಚನೆ, ಏಕೀರಕರಣ ಚಳವಳಿ, ಗೋಕಾಕ್ ಚಳವಳಿಯ ನಂತರ ಉದಯವಾದ ಚಲುವ ಕನ್ನಡ ನಾಡು ಕಲೆ, ಸಾಹಿತ್ಯ, ಸಂಸ್ಕೃತಿಗಳ ತವರೂರಾಗಿದೆ ಎಂದು ಬಣ್ಣಿಸಿದರು. ಕನ್ನಡ ಶಾಲೆಗಳಲ್ಲಿ ಕಲಿತವರಿಗೆ ಸರ್ಕಾರಿ ಉದ್ಯೋಗದಲ್ಲಿ ಮೀಸಲಾತಿ ಐಟಿಬಿಟಿ ಕಂಪನಿಗಳಲ್ಲಿ ಮೀಸಲಾತಿ ಇವುಗಳಿಗೆ ವಿಶೇಷವಾದ ಕಾನೂನು ರೂಪಿಸುವುದು ಸರ್ಕಾರದ ಕೆಲಸವಾಗಿದೆ ಎಂದು ಅಭಿಪ್ರಾಯಪಟ್ಟರು.
ಕಾರ್ಯಕ್ರಮ ಉದ್ಘಾಟಿಸಿದ ತಹಸೀಲ್ದಾರ್ ಚೆನ್ನಮಲ್ಲಪ್ಪ ಘಂಟಿ ಮಾತನಾಡಿ, ಪ್ರತಿಯೊಬ್ಬರಲ್ಲಿ ಕನ್ನಡ ಭಾಷೆ ಪ್ರೇಮವನ್ನು ಬೆಳೆಸಿಕೊಳ್ಳುವುದು ಗೌರವ ನೀಡುವುದು ನಮ್ಮ ಕರ್ತವ್ಯವಾಗಿದೆ ಎಂದು ಹೇಳಿದರು.
ತಾಲೂಕು ಮಟ್ಟದ ಅಧಿಕಾರಿಗಳಾದ ಕಾರ್ಯನಿರ್ವಾಖ ಅಧಿಕಾರಿಗಳಾದ ರಾಮರೆಡ್ಡಿ ಪಾಟೀಲ್, ಶಿವರಾಜ್ ಪೂಜಾರಿ, ವೆಂಕಟಪ್ಪ ಬಕ್ಕಪ್ಪ, ಕೆ. ಹಂಪಯ್ಯ ಕವಡಿಮಠ, ಬಂದೋಲಿ ಸಾಬ, ಭೀಮರಾಯ ನಾಯಕ, ಭೀಮನಗೌಡ, ತಾಲ್ಲೂಕು ಕಸಾಪ ಅಧ್ಯಕ್ಷ ಎಚ್. ಶಿವರಾಜ ಪಾಟೀಲ, ಕರವೇ ಅಧ್ಯಕ್ಷ ಡಿ. ಶ್ರೀನಿವಾಸ ವೇದಿಕೆಯಲ್ಲಿದ್ದರು.
ಎಸ್ ಎಸ್. ಎಲ್. ಸಿ. ಪರೀಕ್ಷೆಯಲ್ಲಿ ಕನ್ನಡ ಭಾಷೆ ವಿಷಯದಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ತಾಲೂಕ್ ಆಡಳಿತ ಮತ್ತು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಪದಕ ಹಾಗೂ ಪ್ರಶಸ್ತಿ ಪತ್ರ ವಿತರಿಸಲಾಯಿತು. ನಂತರ ವಿವಿಧ ಶಾಲೆಯ ಮಕ್ಕಳಿಂದ ಸಾಂಸ್ಕೃತಿ ಕಾರ್ಯಕ್ರಮಗಳು ಜರಗಿದವು.
ಇದಕ್ಕೂ ಮುನ್ನ ತಾಲೂಕು ಪಂಚಾಯಿತಿಯಿಂದ ತಾಯಿ ಭುವನೇಶ್ವರಿ ಭಾವಚಿತ್ರವನ್ನು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡಲಾಯಿತು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…