ಕಲಬುರಗಿ: ಶರಣಬಸವೇಶ್ವರ ಸಂಸ್ಥಾನದ 8ನೇ ಪೀಠಾಧಿಪತಿ ಮಹಾದಾಸೋಹಿ ಪೂಜ್ಯ ಶರಣಬಸವಪ್ಪ ಅಪ್ಪಾಜಿಯವರು, ನಮ್ಮ ಭಾಗದ ಒಂದು ಶಕ್ತಿ, ಪ್ರೇರಣೆ, ಹುಮ್ಮಸ್ಸು. ಅವರಿಗೆ ಪದ್ಮಭೂಷಣ ಪ್ರಶಸ್ತಿ ದೊರಕಲು ಎಲ್ಲರೂ ಕೂಡಿ ಪ್ರಯತ್ನಿಸೋಣ ಎಂದು ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ಯೋಗ ಸಚಿವರ ಶರಣಬಸವಪ್ಪ ದರ್ಶನಾಪುರ ಹೇಳಿದರು.
ನಗರದ ಪೂಜ್ಯ ಡಾ. ಬಸವರಾಜಪ್ಪ ಅಪ್ಪ ಸ್ಮರಣಾರ್ಥ ಭವನದಲ್ಲಿ ಬುಧವಾರದಂದು ಜಿಲ್ಲಾ ವೀರಶೈವ ಸಮಾಜ ಹಮ್ಮಿಕೊಂಡ ಪೂಜ್ಯ ಡಾ. ಶರಣಬಸವಪ್ಪ ಅಪ್ಪಾಜಿಯವರ 89ನೇಯ ಜನ್ಮದಿನೋತ್ಸವ ಶರಣಬಸವೇಶ್ವರ ಸಂಸ್ಥಾನದ 9ನೇ ಪೀಠಾಧಿಪತಿಗಳಾದ ಚಿರಂಜೀವಿ ದೊಡ್ಡಪ್ಪ ಅಪ್ಪಾಜಿಯವರ 7ನೇಯ ಜನ್ಮದಿನೋತ್ಸವ ಹಾಗೂ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಚೇರಪರ್ಸನ್ ಮಾತೋಶ್ರೀ ಡಾ. ದಾಕ್ಷಾಯಿಣಿ ಅವ್ವಾಜಿಯವರ 54ನೇಯ ಜನ್ಮದಿನೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಶೈಕ್ಷಣಿಕವಾಗಿ ಹಿಂದುಳಿದ ನಮ್ಮ ಭಾಗದಲ್ಲಿ ಶಿಕ್ಷಣವನ್ನು ನೀಡಿ ಎಜುಕೇಷನ್ ಹಬ್ ಮಾಡುವಲ್ಲಿ ಪೂಜ್ಯ ಡಾ. ಅಪ್ಪಾಜಿಯವರ ಕೊಡುಗೆ ಮಹತ್ವದ್ದಾಗಿದೆ. ಅನ್ನ ದಾಸೋಹದ ಜೊತೆಗೆ ಶಿಕ್ಷಣ ದಾಸೋಹ ನೀಡುತ್ತಿರುವ ಶರಣಬಸವೇಶ್ವರ ಸಂಸ್ಥಾನ ಎಂದಿಗೂ ಮರೆಯಲು ಸಾಧ್ಯವಿಲ್ಲ. ಇಳಿ ವಯಸ್ಸಿನಲ್ಲಿಯೂ ಅಪ್ಪಾಜಿಯವರಲ್ಲಿ ಶಿಕ್ಷಣದ ಹುಮ್ಮಸ್ಸು ತುಂಬಿಕೊಂಡಿದೆ. ಮುಖ್ಯವಾಗಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ತನು ಮನ ಧನದಿಂದ ಶಿಕ್ಷಣವನ್ನು ಧಾರೆಯೆರೆದಿದ್ದಾರೆ ಎಂದು ತಿಳಿಸಿದರು.
ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮ ಪ್ರಭು ಪಾಟೀಲ, ಅಫಜಲಪೂರ ಶಾಸಕ ಎಂ. ವೈ. ಪಾಟೀಲ, ಶಾಸಕ ಬಿ. ಜಿ. ಪಾಟೀಲ ಮಾತನಾಡಿದರು.
ಡಾ. ನೀಲಾಂಬಿಕಾ ಶೇರಿಕಾರ ವಿಶೇಷ ಉಪನ್ಯಾಸ ನೀಡಿದರು. ಇದೇ ಸಂಧರ್ಭದಲ್ಲಿ ಡಾ. ಪಿ. ಎಸ್. ಶಂಕರ ಹಾಗೂ ಪೆÇ್ರ. ಕೊ. ರಂ. ಬಸವರಾಜು ಅವರಿಗೆ ಶರಣ ಶ್ರೀ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಭವಾನಿ ಎಸ್ ಅಪ್ಪಾ, ಶಿವಾನಿ ಎಸ್ ಅಪ್ಪಾ, ಮಹೇಶ್ವರಿ ಎಸ್ ಅಪ್ಪಾ ಉಪಸ್ಥಿತರಿದ್ದರು.
ಶ್ರೀಶೈಲ ಹಾಗೂ ಸುಲಫುಲ ಮಠದ ಪೂಜ್ಯ ಜಗದ್ಗುರು ಸಾರಂಘಧರ ದೇಶಿಕೇಂದ್ರ ಮಹಾಸ್ವಾಮಿಗಳು ಕೂಡಲಸಂಗಮ ಲಿಂಗಾಯತ-ಪಂಚಮಸಾಲಿ ಜಗದ್ಗುರು ಮಹಾಪೀಠದ ಪೂಜ್ಯ ಜಗದ್ಗುರು ಬಸವ ಜಯ ಮೃತ್ಯಂಜಯ ಮಹಾಸ್ವಾಮಿಗಳು, ಚೌದಾಪೂರಿ ಮಠದ ಪೂಜ್ಯ ಡಾ. ರಾಜಶೇಖರ ಶಿವಾಚಾರ್ಯರು, ಮಾಜಿ ಶಾಸಕ ದೊಡ್ಡಪ್ಪ ಪಾಟೀಲ ನರಿಬೋಳ, ಶಶಿಕಾಂತ ಪಾಟೀಲ, ಜಿಲ್ಲಾ ವೀರಶೈವ ಸಮಾಜದ ಅರುಣಕುಮಾರ ಪಾಟೀಲ ಕೊಡಲಹಂಗರಗಾ, ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಬಸವರಾಜ ದೇಶಮುಖ, ಶರಣಬಸವ ವಿಶ್ವವಿದ್ಯಾಲಯದ ಉಪಕುಲಪತಿ ಡಾ. ನಿರಂಜನ್ ವಿ ನಿಷ್ಠಿ, ಸಮಕುಲಪತಿ ಪೆÇ್ರ. ವಿ. ಡಿ. ಮೈತ್ರಿ, ಕುಲಸಚಿವ ಡಾ. ಅನಿಲಕುಮಾರ ಬಿಡವೆ, ಡೀನ್ ಲಕ್ಷ್ಮೀ ಪಾಟೀಲ ಮಾಕಾ ಸೇರಿದಂತೆ ಇತರರು ವೇದಿಕೆ ಮೇಲಿದ್ದರು.
ಶ್ರೀಶೈಲ ಘೂಳಿ ಸ್ವಾಗತಿಸಿದರೆ, ಅರುಣಕುಮಾರ ಪಾಟೀಲ ಪ್ರಸ್ತಾವಿಕ ಮಾತುಗಳನ್ನಾಡಿದರು. ಪೆÇ್ರ. ನಾನಾ ಸಾಹೇಬ ಹಚ್ಚಡದ್ ಮತ್ತು ಪೆÇ್ರ. ಚೆನ್ನಮ್ಮ ನಿರೂಪಿಸಿದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…