ಕಲಬುರಗಿ: ನವೆಂಬರ.2; ಹಲವಾರು ವರ್ಷಗಳಿಂದ ನ್ಯಾಯಾಲಯಗಳಲ್ಲಿ ಬಾಕಿ ಉಳಿದುಕೊಂಡಿರುವ ರಾಜಿ ಸಂಧಾನದ ಮೂಲಕ ಇತ್ಯರ್ಥಗೊಳಿಸುವ ಪ್ರಕರಣಗಳನ್ನು ಇತ್ಯರ್ಥಗೊಳಿಸಲು ಬರುವ ಡಿಸೆಂಬರ್ ೯ ರಂದು ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಲೋಕ್ ಅದಾಲತ್ ನಡೆಸಲಾಗುವುದು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಎಸ್.ನಾಗಶ್ರೀ ಹೇಳಿದರು.
ನಗರದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಕಚೇರಿಯಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಹಿಂದೆ ನಡೆದ ಲೋಕ್ ಅದಾಲತ್‌ನಲ್ಲಿ ಒಟ್ಟು ೨೩ ಸಾವಿರ ಪ್ರಕರಣಗಳು ಇತ್ಯರ್ಥಗೊಂಡಿದ್ದು, ಪ್ರಸ್ತುತ ಒಟ್ಟು ೪೯ ಸಾವಿರ ಪ್ರಕರಣಗಳು ಬಾಕಿ ಉಳಿದುಕೊಂಡಿದ್ದು, ಅವುಗಳನ್ನು ಬರುವ ಡಿಸೆಂಬರ್ ೯ ರಂದು ನಡೆಯುವ ಲೋಕ್ ಅದಾಲತ್‌ನಲ್ಲಿ ರಾಜಿ ಸಂಧಾನದ ಮೂಲಕ ಇತ್ಯರ್ಥಗೊಳಿಸಲಾಗುವುದು. ಇದರ ಲಾಭ ಎಲ್ಲ ಕಕ್ಷಿದಾರರು ಪಡೆದುಕೊಳ್ಳಬೇಕು ಎಂದು ಮನವಿ ಮಾಡಿದರು.
ಲೋಕ್ ಅದಾಲತ್‌ನಲ್ಲಿ ಸಿವಿಲ್ ಪ್ರಕರಣಗಳು ರಾಜಿಯಾಗುವ ಕ್ರಿಮಿನಲ್ ಪ್ರಕರಣಗಳು, ಚೆಕ್ ಬೌನ್ಸ್ ಪ್ರಕರಣಗಳು, ಮೋಟಾರ ವಾಹನ ಅಪಘಾತ ಪ್ರಕರಣಗಳು, ಬ್ಯಾಂಕ್ ವಸೂಲಾತಿ ಪ್ರಕರಣಗಳು, ಉದ್ಯೋಗದಲ್ಲಿ ಪುನಃ ಸ್ಥಾಪಿಸಲ್ಪಡುವ ಕೈಗಾರಿಕಾ ಕಾರ್ಮಿಕರ ವೇತನಕ್ಕೆ ಸಂಬAಧಿಸಿದ ಕ್ಲೇಮ್‌ಗಳು, ವಿಚ್ಛೇದನ ಹೊರತುಪಡಿಸಿ ವೈವಾಹಿಕ ಕುಟುಂಬ ನ್ಯಾಯಾಲಯದ ಪ್ರಕರಣಗಳು, ಜಿಲ್ಲಾ ಗ್ರಾಹಕ ವೇದಿಕೆ ಪ್ರಕರಣಗಳು, ಸಾಲ ವಸೂಲಾತಿ ನ್ಯಾಯಾಧೀಶಕರಣದ ಪ್ರಕರಣಗಳು, ಕಾರ್ಮಿಕ ವಿವಾದಗಳು, ಕಾಯಂ ಜನತಾ ನ್ಯಾಯಾಲಯದ ಪ್ರಕರಣಗಳು, ವಿದ್ಯುತ್ ಹಾಗೂ ನೀರಿನ ಶುಲ್ಕಗಳು, ವೇತನ ಭತ್ಯೆಗಳಿಗೆ ಸಂಬAಧಿಸಿದ ಸೇವಾ ಪ್ರಕರಣಗಳು ಹಾಗೂ ಪಿಂಚಣಿ ಪ್ರಕರಣಗಳು ಮತ್ತು ಜೀವನಾಂಶ ಪ್ರಕರಣಗಳು ರಾಜಿ ಮಾಡಿಕೊಳ್ಳುವ ಅವಕಾಶವಿದ್ದು, ಕಕ್ಷಿದಾರರು ತಮ್ಮ ತಾಲೂಕಿನ ನ್ಯಾಯಾಲಯದಲ್ಲಿ ನಡೆಯುವ ಈ ಲೋಕ್ ಅದಾಲತ್‌ನಲ್ಲಿ ಇದರ ಲಾಭ ಪಡೆದುಕೊಳ್ಳಬೇಕು ಎಂದರು.
ಈ ಲೋಕ್ ಅದಾಲತ್‌ನಲ್ಲಿ ರಾಜಿ ಸಂಧಾನದ ಮೂಲಕ ಇತ್ಯರ್ಥಗೊಂಡ ಪ್ರಕರಣ ಅಂತಿಮ ತೀರ್ಪು ಆಗಿದ್ದು, ಇದನ್ನು ಪ್ರಶ್ನಿಸಿ ಯಾವುದೇ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸಲು ಅವಕಾಶ ಇರುವುದಿಲ್ಲ. ಹೀಗಾಗಿ ಕಕ್ಷಿದಾರರು ಬಾಕಿ ಉಳಿದುಕೊಂಡಿರುವ ತಮ್ಮ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥಗೊಳಿಸಲು ಉತ್ತಮ ಅವಕಾಶ ಕಲ್ಪಿಸಲಾಗಿದೆ ಎಂದು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶ್ರೀನಿವಾಸ್ ನವಲೇ ಇದ್ದರು.
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…
ಕಲಬುರಗಿ: ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಚಿವ ಪ್ರಿಯಾಂಕ್ ಖರ್ಗೆ ಅವರ ಜನ್ಮದಿನದ ಪ್ರಯುಕ್ತ ಜೈ ಕನ್ನಡಿಗರ…
ಕಲಬುರಗಿ; ಕಾರಾಗೃಹದ ಬಂದಿಗಳಿಗೆ ಉಚಿತವಾಗಿ ಅದಾನಿ ಸಕ್ಷಮ ಸ್ಕಿಲ್ ಡೆವಲಪ್‍ಮೆಂಟ್, ವಾಡಿ ಹಾಗೂ ಕೇಂದ್ರ ಕಾರಾಗೃಹದ ಸಹಯೋಗದೊಂದಿಗೆ ಬಂದಿಗಳ ಮನಃ…
ಕಲಬುರಗಿ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಯವರು ಮೂರು ವರ್ಷಗಳು ಪೂರೈಸಿರುವ…
ಕಲಬುರಗಿ: ವಿದ್ಯಾರ್ಥಿನಿಯರ ಸರ್ವತೋಮುಖ ಬೆಳವಣಿಗೆಯೇ ಶಿಕ್ಷಣ, ಶಿಕ್ಷಣವೆಂದರೆ ಕೇವಲ ಆನಲೈನ ಮಾಹಿತಿಯಲ್ಲ, ಪುಸ್ತಕದ ಜ್ಞಾನವೂ ಅಲ್ಲ, ವಿದ್ಯಾರ್ಥಿನಿಯರ ಬೌದ್ಧಿಕ, ಮಾನಸಿಕ,…
ಶಹಾಬಾದ: ನಗರದ ಶಿವಯೋಗಿಸ್ವಾಮಿ ಪ್ರೌಢಶಾಲೆಯಲ್ಲಿ ಪ್ರಿಯಾಂಕ್ ಖರ್ಗೆ ಅಭಿಮಾನಿ ಬಳಗದ ವತಿಯಿಂದ ಶುಕ್ರವಾರ ಸಚಿವರಾದ ಪ್ರಿಯಾಂಕ್ ಖರ್ಗೆ ಅವರ ಜನ್ಮ…