ಬೆಂಗಳೂರು; ವಿಕಲಚೇತನರ ರಾಷ್ಟ್ರೀಯ ವೃತ್ತಿ ಸೇವಾ ಕೇಂದ್ರ, ಭಾರತ ಸರ್ಕಾರ, ಉದ್ಯೋಗ ಮಹಾ ನಿರ್ದೇಶನಾಲಯ, ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ ಪೀಣ್ಯ, ಬೆಂಗಳೂರು, ಮತ್ತು ರಾಷ್ಟ್ರೀಯ ದಿವ್ಯಾಂಗರ ಹಣಕಾಸು ಮತ್ತು ಅಭಿವೃದ್ಧಿ ನಿಗಮ, ನವದೆಹಲಿ ಇವರ ಸಹಯೋಗದೊಂದಿಗೆ ವಿಕಲಚೇತನ ನಿರುದ್ಯೋಗಿ ಯುವಕ –ಯವತಿಯರಿಗೆ “ಉದ್ಯೋಗ ಮೇಳ”ವನ್ನು ನವೆಂಬರ್ 3 ರಂದು ಬೆಳಿಗ್ಗೆ 10 ಗಂಟೆಗೆ ಬೆಂಗಳೂರಿನ ಜಾಲಹಳ್ಳಿ ಮುಖ್ಯರಸ್ತೆಯ ಹೆಚ್.ಎಂ.ಟಿ. ಮೈದಾನದಲ್ಲಿ ಆಯೋಜಿಸಲಾಗಿದೆ.
ಎಸ್‍ಎಸ್‍ಎಲ್‍ಸಿ, ಐಟಿಐ, ಡಿಪ್ಲೊಮಾ, ಪಿಯುಸಿ, ಪದವಿ ಹೊಂದಿರುವ ವಿಕಲಚೇತನರು ಈ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದಾಗಿದೆ. ಅಭ್ಯರ್ಥಿಗಳು ತಮ್ಮ ಪರಿಚಯ ಪತ್ರದ ಜೊತೆಗೆ ಎಸ್‍ಎಸ್‍ಎಲ್‍ಸಿ ಅಂಕಪಟ್ಟಿಯ 3 ನಕಲು ಪ್ರತಿಗಳು, ಆಧಾರ್ / ಮತದಾರರ ಗುರುತಿನ ಚೀಟಿ / ಡ್ರೈವಿಂಗ್ ಲೈಸನ್ಸ್, ಗುರುತು ಪತ್ತೆಗಾಗಿ, ಪಾಸ್‍ಪೋರ್ಟ್ ಭಾವಚಿತ್ರ, ಅನುಭವ ಪ್ರಮಾಣಪತ್ರಗಳನ್ನು ತರಲು ಕೋರಿದೆ. 20ಕ್ಕೂ ಅಧಿಕ ಪ್ರತಿಷ್ಟಿತ ಕಂಪನಿಗಳು ಈ ಉದ್ಯೋಗ ಮೇಳದಲ್ಲಿ ಭಾಗವಹಿಸಲಿವೆ.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 080-28392907, ಹಾಗೂ ಇ-ಮೇಲ್ dydirvrch.blr-dget@gov.in, vrchblr.ka@gmail.com ನ್ನು ಸಂಪರ್ಕಿಸಬಹುದಾಗಿದೆ ಎಂದು ಪುನರ್ವಸತಿ, ವಿಕಲಚೇತನರ ರಾಷ್ಟ್ರೀಯ ಸೇವಾ ಕೇಂದ್ರದ ಉಪ ನಿರ್ದೇಶಕರು ಶಿವಶಾಂತವೀರ್ ದಿವಾಕರ್ ಅವರು ಪ್ರಕಟಣೆಯಲ್ಲಿ ತಿಳಿಸಿದೆ.
ಕಲಬುರಗಿ: ಪುರಾತನ ಕಾಲದಲ್ಲಿ ನಾಗಾವಿ ಪ್ರದೇಶವು ದಕ್ಷಿಣ ಭಾರತದಲ್ಲಿ ನಾಗಾವಿ ಪ್ರಸಿದ್ದಿ ಪಡೆದ ವಿಶ್ವ ವಿದ್ಯಾಲಯವಾಗಿತ್ತು ಎಂದು ತಹಸಿಲ್ದಾರ್ ನಾಗಯ್ಯ…
ಕಲಬುರಗಿ: ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ದಿ.1-1-2025 ಅರ್ಹತಾ ದಿನವನ್ನಾಗಿ ಪರಿಗಣಿಸಿಕೊಂಡು ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ನಡೆಸಲಾಗುತ್ತಿದ್ದು,…
ಕಲಬುರಗಿ: ವಿದ್ಯಾರ್ಥಿಗಳು ಜಿಲ್ಲೆಯ ಎಲ್ಲಾ ವಿಕಲಚೇತನರಿಗೆ ಹೆಚ್ಚಿನ ಸ್ಥಾನಮಾನಗಳನ್ನು ಸಿಗಬೇಕು ಹಾಗೂ ಎಲ್ಲ್ಲಾ ಕ್ರೀಡೆಗಳಲ್ಲಿ ಭಾಗವಹಿಸಿ ಜಯಸಾಧಿಸಬೇಕು ಎಂದು ಅಪರ…
ಪ್ರಜ್ವಲ್,ಧೀರಜ್ ಸೋಲಿಸಿ ಗೆದ್ದು ಬೀಗಿದ ಬೊಬ್ರೋಬ್ ಹಾಗೂ ಸುಲ್ತಾನೋವ್ ಕಲಬುರಗಿ, ನವೆಂಬರ್ ೨೧ : ಐಟಿಎಫ್ ಕಲಬುರಗಿ ಓಪನ್ ಟೆನಿಸ್…
ಕಲಬುರಗಿ: ವೀರಭದ್ರೇಶ್ವರ ಸಾಂಸ್ಕೃತಿಕ ಹಾಗೂ ಗ್ರಾಮೀಣ ಅಭಿವೃದ್ಧಿ ಸಂಸ್ಥೆ ರಿ ಆಳಂದ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು…
ಕಲಬುರಗಿ: ಸರಕಾರಿ ಮಹಾವಿದ್ಯಾಲಯ ಸ್ವಾಯತ್ತದ ಡಾ.ಬಿ.ಆರ್. ಅಂಬೇಡ್ಕರ್ ಫಂಕ್ಷನ್ ಹಾಲ್‍ನಲ್ಲಿ ಆಡಿಟ್ ದಿವಸ ದಿನಾಚರಣೆ ಪ್ರಯುಕ್ತ ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮ…