ಬಿಸಿ ಬಿಸಿ ಸುದ್ದಿ

ರಂಗಂಪೇಟ ಕನ್ನಡ ಸಾಹಿತ್ಯ ಸಂಘಕ್ಕೆ ಮುಖ್ಯಮಂತ್ರಿ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ

ಸುರಪುರ: ಕರ್ನಾಟಕ ನಾಮಕರಣಗೊಂಡು 50 ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ನಾಡಿನ 10 ಕನ್ನಡ ನಾಡು ನುಡಿಯ ಸೇವೆಗೈದ ಸಂಘ ಸಂಸ್ಥೆಗಳಿಗೆ 2023ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ನೀಡಲಾಗುತ್ತಿದ್ದ ಹಿನ್ನೆಲೆಯಲ್ಲಿ ನಗರದ ರಂಗಂಪೇಟೆಯ ಕನ್ನಡ ಸಾಹಿತ್ಯ ಸಂಘಕ್ಕೆ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ ಮಾಡಲಾಗಿತ್ತು.

ಅದರಂತೆ ಬುಧವಾರ ಸಂಜೆ ಬೆಂಗಳೂರಿನಲ್ಲಿ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ,ಗೃಹ ಮಂತ್ರಿ ಜಿ.ಪರಮೇಶ್ವರ,ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಚಿವ ಶಿವರಾಜ ತಂಗಡಗಿ ಸೇರಿದಂತೆ ವಿವಿಧ ಸಚಿವರು ಹಾಗೂ ಅಧಿಕಾರಿಗಳ ಸಮ್ಮುಖದಲ್ಲಿ ರಂಗಂಪೇಟೆ ಕನ್ನಡ ಸಾಹಿತ್ಯ ಸಂಘದ ಅಧ್ಯಕ್ಷ ಸೂಗುರೇಶ ವಾರದ ಅವರಿಗೆ ಪ್ರಶಸ್ತಿ ಪ್ರದಾನ ಫಲಕ ನೀಡಿ,5 ಲಕ್ಷ ಧನದೊಂದಿಗೆ ಸನ್ಮಾನಿಸಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಶಾಸಕ ರಾಜಾ ವೆಂಕಟಪ್ಪ ನಾಯಕ,ಸಂಘದ ಗೌರವಾಧ್ಯಕ್ಷ ಶಾಂತಪ್ಪ ಬೂದಿಹಾಳ,ನಮ್ಮ ಕರ್ನಾಟಕ ಸೇನೆ ರಾಜ್ಯಾಧ್ಯಕ್ಷ ಬಸವರಾಜ ಪಡಕೋಟೆ ಸೇರಿದಂತೆ ಸಾವಿರಾರು ಜನರು ಭಾಗವಹಿಸಿದ್ದರು.

emedialine

Recent Posts

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

9 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

10 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

10 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

1 day ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

1 day ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

1 day ago