ಕಲಬುರಗಿ; ಪದವಿ ಕಾಲೇಜುಗಳಲ್ಲಿ ವ್ಯಾಸಂಗ ಮುಗಿಸಿದ ಹಳೇ ವಿದ್ಯಾರ್ಥಿಗಳನ್ನು ಸಂಪರ್ಕಿಸಿ ಈಶಾನ್ಯ ಪದವೀಧರ ಕ್ಷೇತ್ರ ಮತದಾರರ ಪಟ್ಟಿಗೆ ಅವರ ಹೆಸರು ಸೇರಿಸಲು ಎಲೆಕ್ಟೋರಲ್ ಲಿಟರಸಿ ಕ್ಲಬ್ ಸಂಯೋಜಕರು ಮುಂದಾಗಬೇಕು ಎಂದು ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ ಅವರು ಕರೆ ನೀಡಿದರು.
ಗುರುವಾರ ಕಲಬುರಗಿ ನಗರದ ಸರ್ಕಾರಿ ಮಹಾವಿದ್ಯಾಲಯದಲ್ಲಿ ಜಿಲ್ಲಾಡಳಿತ, ಜಿಲ್ಲಾ ಸ್ವೀಪ್ ಸಮಿತಿ, ಕಾಲೇಜು ಶಿಕ್ಷಣ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಚುನಾವಣಾ ಜಾಗೃತಿ ಮತ್ತು ಮತದಾರರ ವಿಶೇಷ ನೋಂದಣಿ ಅಭಿಯಾನ ಉದ್ಘಾಟಿಸಿ ಮಾತನಾಡಿದ ಅವರು, ಈಶಾನ್ಯ ಪದವೀಧರ ಕ್ಷೇತ್ರದಲ್ಲಿ ಮತದಾರರ ನೊಂದಣಿ ನಿರೀಕ್ಷಿತ ಮಟ್ಟದಲ್ಲಿಲ್ಲ. ಹೀಗಾಗಿ ಪಟ್ಟಿಗೆ ಅರ್ಹರ ಹೆಸರು ಸೇರಿಸಲು ಹೆಚ್ಚಿನ ಜನ ಜಾಗೃತಿ ಮೂಡಿಸಬೇಕು ಎಂದರು.
ಹಳೇ ವಿದ್ಯಾರ್ಥಿಗಳು ವ್ಯಾಸಂಗ ಮುಗಿಸಿ ಕೆಲಸ ಅರಸಿ ದೂರದ ನಗರಕ್ಕೆ ಹೋಗಿರುತ್ತಾರೆ. ಮತದಾರರ ಪರಿಷ್ಕರಣೆ ಬಗ್ಗೆ ಅವರಿಗೆ ಮಾಹಿತಿ ಇರಲ್ಲ. ಇಂತವರನ್ನು ಅಲುಮ್ನಿ ಅಸೋಸಿಯೇಷನ್ ಮೂಲಕ ಸಂಪರ್ಕ ಸಾಧಿಸಿ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ ಮಾಡಿಸಬೇಕು. ಸದೃಢ ಪ್ರಜಾಪ್ರಭುತ್ವ ನಿರ್ಮಾಣಕ್ಕೆ ಯುವ ಮತದಾರರ ಭಾಗೀದಾರಿಕೆ ತುಂಬಾ ಮುಖ್ಯವಾಗಿದೆ ಎಂದು ಅಭಿಪ್ರಾಯಪಟ್ಟ ಜಿಲ್ಲಾಧಿಕಾರಿಗಳು, ಉತ್ತಮರನ್ನು ಆಯ್ಕೆ ಮಾಡಲು ಮತದಾನ ಸಂವಿಧಾನಬದ್ಧ ಹಕ್ಕಾಗಿದೆ. ಇದನ್ನೆಲ್ಲರು ಚಲಾಯಿಸಬೇಕೆಂದರು.
ಜಿಲ್ಲಾ ಪಂಚಾಯತ್ ಸಿ.ಇ.ಓ ಮತ್ತು ಸ್ವೀಪ್ ಸಮಿತಿ ಅಧ್ಯಕ್ಷ ಭಂವರ್ ಸಿಂಗ್ ಮೀನಾ ಮಾತನಾಡಿ ಸ್ವೀಪ್ ಸಮಿತಿ ಎಲ್ಲಾ ಚಟುವಟಿಕೆಯಲ್ಲಿ ಕಾಲೇಜು ಮಟ್ಟದಲ್ಲಿ ಎಲ್ಲಾ ವಿದ್ಯಾರ್ಥಿಗಳು ಭಾಗವಹಿಸುವಂತೆ ಲಿಟರಸಿ ಕ್ಲಬ್ ಸದಸ್ಯರು ಸಮನ್ವಯತೆ ಸಾಧಿಸಬೇಕು. ಈಶಾನ್ಯ ಮತದಾರರ ಪಟ್ಟಿಗೆ ಹೆಸರು ಸಏರಿಸಲು ಇದೇ ನವೆಂಬರ್ 6 ಕೊನೆ ದಿನವಾಗಿದ್ದು, ಅದರೊಳಗೆ ಹೆಸರು ಸೇರ್ಪಡೆ ಮಾಡಿಕೊಳ್ಳಬೇಕು ಎಂದರು.
ಕಲಬುರಗಿ ಮಹಾನಗರ ಪಾಲಿಕೆ ಆಯುಕ್ತ ಭುವನೇಶ ಪಾಟೀಲ ದೇವಿದಾಸ್ ಅವರು ಸಹ ಚುನಾವಣಾ ಜಾಗೃತಿ ಮತ್ತು ಮತದಾರರ ನೊಂದಣಿ ಮಹತ್ವ ಕುರಿತು ಮಾತನಾಡಿದರು.
ವಿಶೇಷ ಕೌಂಟರ್: ಮತದಾರರ ವಿಶೇಷ ನೋಂದಣಿ ಅಭಿಯಾನ ಅಂಗವಾಗಿ ಸ್ಥಾಪಿಸಲಾದ ಕೌಂಟರ್‍ನಲ್ಲಿ ವಿದ್ಯಾರ್ಥಿಗಳು 152 ಅರ್ಜಿಗಳನ್ನು ಪಡೆದುಕೊಂಡಿದ್ದು, ಸ್ಥಳದಲ್ಲಿಯೇ 35 ಅರ್ಜಿಗಳನ್ನು ಭರ್ತಿ ಮಾಡಿ ಸಲ್ಲಿಸಲಾಗಿದೆ.
ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಉಪನಿರ್ದೇಶಕ ಶಿವಶರಣಪ್ಪ ಮೂಳೆಗಾಂವ, ಕಾಲೇಜು ಶಿಕ್ಷಣ ಇಲಾಖೆಯ ಜಂಟಿ ನಿರ್ದೇಶಕರ ಕಚೇರಿಯ ವಿಶೇಷ ಅಧಿಕಾರಿ ಡಾ.ಸೂರ್ಯಕಾಂತ, ಕಲಬುರಗಿ ಸರ್ಕಾರಿ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಸವಿತಾ ತಿವಾರಿ, ಡೀನ್ ಡಾ. ಸಾಲಿಮನಿ, ಸಿಬ್ಬಂದಿ ಕಾರ್ಯದರ್ಶಿ ಡಾ.ವಿಜಯಾನಂದ ವಿಠ್ಠಲರಾವ್ ಸೇರಿದಂತೆ ಜಿಲ್ಲೆಯ ಲಿಟರಸಿ ಕ್ಲಬ್ ಸಂಯೋಜಕರು, ಕಾಲೇಜಿನ ಬೋಧಕ-ಬೋಧಕೇತರ ವೃಂದ, ವಿದ್ಯಾರ್ಥಿಗಳು ಭಾಗವಹಿಸಿದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…