ಬರನಿರ್ವಹಣೆ ಕಾರ್ಯಕ್ರಮಗಳ ವರದಿ ನೀಡಲು ಜಿಲ್ಲಾ ಉಸ್ತುವಾರಿ ಸಚಿವರುಗಳಿಗೆ ಮುಖ್ಯಮಂತ್ರಿ ಸೂಚನೆ

0
31
cm siddu

ಬೆಂಗಳೂರು; ಬರ ಪರಿಸ್ಥಿತಿಯ ಸಂಪೂರ್ಣ ವಸ್ತುಸ್ಥಿತಿ ಹಾಗೂ ಜಿಲ್ಲೆಗಳಲ್ಲಿ ಕೈಗೊಳ್ಳಲಾದ ಬರ ನಿರ್ವಹಣೆ ಕಾರ್ಯಕ್ರಮಗಳ ಬಗ್ಗೆ ಪ್ರತಿ ತಾಲ್ಲೂಕುಗಳಲ್ಲಿ ಮಾಧ್ಯಮಗಳಿಗೆ ವಿವರಿಸಿ ನವಂಬರ್ 15ರೊಳಗೆ ವರದಿ ನೀಡಲು ಜಿಲ್ಲಾ ಉಸ್ತುವಾರಿ ಸಚಿವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚನೆ ನೀಡಿದ್ದಾರೆ.

ರಾಜ್ಯದ 236 ತಾಲ್ಲೂಕುಗಳ ಪೈಕಿ ಇದುವರೆಗೆ 216 ತಾಲ್ಲೂಕುಗಳನ್ನು ಬರಪೀಡಿತವೆಂದು ಘೋಷಿಸಲಾಗಿದೆ. ಬರದ ಹಿನ್ನೆಲೆಯಲ್ಲಿ ಜನ-ಜಾನುವಾರುಗಳಿಗೆ ಕುಡಿಯುವ ನೀರು, ಮೇವು, ಕೃಷಿ -ಕೈಗಾರಿಕೆಗಳಿಗೆ ನೀರು, ಬೆಳೆಹಾನಿ, ಜನರ ಉದ್ಯೋಗದ ಸ್ಥಿತಿ, ಬರ ಪರಿಹಾರ ವಿತರಣೆ ಮುಂತಾದ ಬರ ನಿರ್ವಹಣೆ ಕಾರ್ಯಕ್ರಮಗಳನ್ನು ಕೈಗೊಳ್ಳುವ ಕುರಿತು ಸಚಿವ ಸಂಪುಟ ಸಭೆಗಳಲ್ಲಿ ಚರ್ಚಿಸಲಾಗಿದೆ ಹಾಗೂ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯಿತಿಗಳ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಹಲವು ಬಾರಿ ನಿರ್ದೇಶನಗಳನ್ನು ನೀಡಲಾಗಿದೆ.

Contact Your\'s Advertisement; 9902492681

ಈ ಸಂಬಂಧ ಜಿಲ್ಲಾ ಉಸ್ತುವಾರಿ ಸಚಿವರುಗಳು ಮುಂದಿನ ಎರಡು ವಾರಗಳಲ್ಲಿ ತಮ್ಮ ಉಸ್ತುವಾರಿ ಜಿಲ್ಲೆಯ ಪ್ರತಿ ತಾಲ್ಲೂಕುಗಳಿಗೆ ಭೇಟಿ ನೀಡಿ, ಕುಡಿಯುವ ನೀರು, ಮೇವು, ಉದ್ಯೋಗ, ಬೆಳೆಹಾನಿ, ಮುಂತಾದವುಗಳ ಸ್ಥಿತಿಗತಿಗಳ ಕುರಿತು ಪರಿಶೀಲಿಸಿ ಪರಿಸ್ಥಿತಿಯನ್ನು ಅವಲೋಕಿಸಿ ಅಗತ್ಯ ಮಾಹಿತಿ ಸಂಗ್ರಹಿಸುವುದು ಹಾಗೂ ಸ್ಥಳೀಯ ಶಾಸಕರೊಂದಿಗೆ ಗೋಶಾಲೆ, ಮೇವು ಬ್ಯಾಂಕ್, ಕುಡಿಯುವ ನೀರು, ಉದ್ಯೋಗ ಸೃಷ್ಟಿ ಮುಂತಾದ ಪರಿಹಾರ ಕ್ರಮಗಳ ಬಗ್ಗೆ ಸಮಾಲೋಚಿಸಿ, ಅಗತ್ಯವಿರುವ ಕಡೆ ಭೇಟಿ ನೀಡಿ ಪರಿಶೀಲಿಸುವುದು. ಬರ ನಿರ್ವಹಣೆ ಕಾರ್ಯಕ್ರಮಗಳ ಅನುಷ್ಠಾನದಲ್ಲಿ ಯಾವುದೇ ರೀತಿಯ ವೈಫಲ್ಯಗಳಾಗದಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಬೇಕು ಎಂದು ಮುಖ್ಯಮಂತ್ರಿಗಳು ಸೂಚನೆ ನೀಡಿದ್ದಾರೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here