ಶೈಕ್ಷಣಿಕ ಸಹಾಯಧನಕ್ಕಾಗಿ ಕೂಲಿ ಕಟ್ಟಡ ಕಾರ್ಮಿಕರ ಮಕ್ಕಳಿಂದ ಪತ್ರ ಚಳುವಳಿ

0
32

ಶಹಾಬಾದ :ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಶೈಕ್ಷಣಿಕ ಸಹಾಯಧನ ಬಿಡುಗಡೆಗೆ ಒತ್ತಾಯಿಸಿ ಶನಿವಾರ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಫೆಡರೇಶನ್ ಶಹಾಬಾದ ತಾಲೂಕು ಸಮಿತಿಯಿಂದ ನಗರದ ಅಂಚೆ ಕಛೇರಿ ಮುಂದೆ ಕೂಲಿ ಕಟ್ಟಡ ಕಾರ್ಮಿಕರ ಮಕ್ಕಳು ಪತ್ರ ಚಳುವಳಿ ಮೂಲಕ ಮುಖ್ಯಮಂತ್ರಿ ಮತ್ತು ಕಾರ್ಮಿಕ ಸಚಿವರಿಗೆ ಪತ್ರ ಹಾಕುವುದರ ಮೂಲಕ ಎಚ್ಚರಿಕೆ ನೀಡಿದರು.ಕೂಲಿ ಕಟ್ಟಡ ಕಾರ್ಮಿಕರ ಮಕ್ಕಳಿಂದ ಪತ್ರ ಚಳುವಳಿ ನಡೆಸಿದರು.

ಈ ಸಂದರ್ಭದಲ್ಲಿ ಕಟ್ಟಡ ಕಾರ್ಮಿಕರ ಸಂಘದ ಅಧ್ಯಕ್ಷ ರಾಮು ಜಾಧವ, ಸಿಐಟಿಯು ಪ್ರಧಾನ ಕಾರ್ಯದರ್ಶಿ ನಾಗಪ್ಪ ರಾಯಚೂರಕರ ಮಾತನಾಡಿ, 2023-24ನೇ ಸಾಲಿನ ಶೈಕ್ಷಣಿಕ ವರ್ಷ ಆರಂಭವಾಗಿ ಅರ್ಧ ವರ್ಷ ಕಳೆಯುತ್ತಿದ್ದರೂ ಈವರೆಗೂ ಸಹಾಯಧನಕ್ಕಾಗಿ ಅರ್ಜಿಯನ್ನೇ ಆಹ್ವಾನಿಸಿಲ್ಲ, ಹಾಗೆಯೇ 2021-22ನೇ ಸಾಲಿನಲ್ಲಿ ಶೈಕ್ಷಣಿಕ ಸಹಾಯಧನಕ್ಕಾಗಿ ಅರ್ಜಿ ಸಲ್ಲಿಸಿದ ಸುಮಾರು 11 ಲಕ್ಷ ಜನ ಕಾರ್ಮಿಕರಿಗೆ ಸಹಾಯಧನ ಕೊಡದೇ ಬಾಕಿ ಉಳಿಸಿಕೊಳ್ಳಲಾಗಿದೆ.

Contact Your\'s Advertisement; 9902492681

ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಉದ್ಯೋಗ ಮತ್ತು ಸೇವಾ ಷರತ್ತುಗಳ ಕಾಯ್ದೆ 1996ರ ನಿಯಮ 4ರ ಅಡಿಯಲ್ಲಿ ಕಟ್ಟಡ ನಿರ್ಮಾಣ ಕಾರ್ಮಿಕರ ಇಬ್ಬರು ಮಕ್ಕಳಿಗೆ ‘ಕಲಿಕಾ ಭಾಗ್ಯ’ ಯೋಜನೆಯಡಿ ಶೈಕ್ಷಣಿಕ ಸಹಾಯಧನ ನೀಡಬೇಕೆಂದು ಕಾನೂನು ಹೇಳುತ್ತದೆ ಮತ್ತು ನೊಂದಾಯಿತ ಕಾರ್ಮಿಕರು ಈ ಸೌಲಭ್ಯವನ್ನು ಪಡೆಯುತ್ತಿದ್ದಾರೆ ಎಂದರು.

ಹೋರಾಟದ ಮುಖ್ಯ ಬೇಡಿಕೆಯೆಂದರೆ, 2022-23 ನೇ ಸಾಲಿನ ಶೈಕ್ಷಣಿಕ ಸಹಾಯಧನವನ್ನು ಕೂಡಲೇ ಬಿಡಗಡೆ ಮಾಡಬೇಕು, 2023-24ನೇ ಸಾಲಿನ ಶೈಕ್ಷಣಿಕ ವರ್ಷ ಆರಂಭವಾಗಿರುವ ಹಿನ್ನೆಲೆಯಲ್ಲಿ ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಬೇಕು ಎಂದು ಒತ್ತಾಯಿಸಿದರು.

ಈ ಸಂಧರ್ಭದಲ್ಲಿ ಸಿಐಟಿಯು ತಾಲೂಕ ಅಧ್ಯಕ್ಷೆ ಶೇಖಮ್ಮ ಕುರಿ, ಪ್ರಕಾಶ ಕುಸಾಳೆ, ಮಲ್ಲಣ್ಣ ಹೊನಗುಂಟಾ, ಹಣಮಂತ ಯಡ್ರಾಮಿ, ಯಶವಂತ ಪಾಟೀಲ, ಲಕ್ಷ್ಮೀಕಾಂತ ಸಾಗರ, ಚಂದ್ರಕಾಂತ ಟಾಂಗದವರ, ನಿಲೇಶ ರಾಠೋಡ,ಸಿದ್ರಾಮ ಹರನಾಳ, ಲಕ್ಷ್ಮಣ ಪಾಟೀಲ, ನೀಲು ಚವ್ಹಾಣ, ಅರ್ಜುನ ನಾಟೀಕಾರ ಹಾಗೂ ಕಟ್ಟಡ ಕಾರ್ಮಿಕರ ಮಕ್ಕಳು ಉಪಸ್ಥಿತರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here