ಬಿಸಿ ಬಿಸಿ ಸುದ್ದಿ

KEA ಪರೀಕ್ಷೆಯ ಪ್ರಮುಖ ಆರೋಪಿಗೆ ಸರಕಾರದ ಪ್ರಮುಖರ ಬೆಂಬಲವಿದೆ: ಬಿ.ವೈ ವಿಜಯೆಂದ್ರ ಆರೋಪ

ಕಲಬುರಗಿ: ಕೆಇಎ ನೇಮಕಾತಿ ಪರೀಕ್ಷೆಯ ಬ್ಲೂಟೂತ್ ಅಕ್ರಮದ ಪ್ರಮುಖ ಆರೋಪಿ ಆರ್.ಡಿ. ಪಾಟೀಲ ಇರುವ ಬಗ್ಗೆ ಐಪಿಎಸ್ ಅಧಿಕಾರಿ ಮಾಹಿತಿ ಕೊಟ್ಟರು ಆತನನ್ನು ಹಿಡಿಯಲು ಸಾಧ್ಯವಾಗಿಲ್ಲ. ಕಣ್ಣಿಗೆ ಕಾಣದ ಶಕ್ತಿ ಇದರ ಹಿಂದೆ ಕೆಲಸ ಮಾಡುತ್ತಿದೆ. ಸರ್ಕಾರದ ಪ್ರಮುಖ ಹುದ್ದೆಯಲ್ಲಿ ಇರುವವರೇ ಆರ್.ಡಿ. ಪಾಟೀಲಗೆ ಬೆಂಬಲ ಕೊಡುತ್ತಿದ್ದಾರೆ ಎಂಬುದು ಮೇಲ್ನೋಟಕ್ಕೆ ತಿಳಿದು ಬರುತ್ತಿದೆ’ ಎಂದು ಬಿಜೆಪಿ ಶಾಸಕ ಬಿ.ವೈ. ವಿಜಯೇಂದ್ರ ಆರೋಪಿಸಿದರು.

ನಗರದಲ್ಲಿ ಮಂಗಳವಾರ ಮಾಧ್ಯಮಗಳ ಜತೆ ಮಾತನಾಡಿದ ಅವರು, ‘ಬಿಜೆಪಿ ಸರ್ಕಾರ ಇದ್ದಾಗ ಕಾಂಗ್ರೆಸಿಗರು ನಾನಾ ಆರೋಪ ಮಾಡಿದ್ದರು. ಈಗಿನ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್‌ ಖರ್ಗೆ ಅವರು ಬಿಜೆಪಿ ಸರ್ಕಾರದ ಮೇಲೆ ಗೂಬೆ ಕೂರಿಸುವ ಕೆಲಸ ಮಾಡಿದ್ದರು. ಆರ್.ಡಿ. ಪಾಟೀಲ ಸೇರಿ ಇಡೀ ಅವರ ತಂಡ ಕಾಂಗ್ರೆಸ್‌ನ ಕೈಗೊಂಬೆಯಂತೆ ಕೆಲಸ ಮಾಡುತ್ತಿದ್ದಾರೆ. ಈಗ ಅಕ್ರಮದ ಮತ್ತೊಂದು ಕೃತ್ಯ ನಡೆಸಿದ್ದಾರೆ. ಆರ್.ಡಿ. ಪಾಟೀಲ ತಪ್ಪಿಸಿಕೊಳ್ಳುವ ಪಿತೂರಿಗೆ ಸಚಿವರು ಸಹಕಾರ ಕೊಡುತ್ತಿದಾರೆ’ ಎಂದು ಗಂಭೀರ ಆಪಾದನೆ ಮಾಡಿದರು.

‘ಇಡೀ ಕಾಂಗ್ರೆಸ್‌ ಸರ್ಕಾರ ಇಂತಹ ವ್ಯಕ್ತಿಗಳಿಗೆ ಬೆನ್ನೆಲುಬಾಗಿ ನಿಂತು ಶಕ್ತಿ ತುಂಬುತ್ತಿದ್ದಾರೆ ಎಂಬುದು ಮೇಲ್ನೋಟಕ್ಕೆ ಗೊತ್ತಾಗುತ್ತದೆ. ಆರ್.ಡಿ. ಪಾಟೀಲ ಸಾಮಾನ್ಯ ವ್ಯಕ್ತಿಯಲ್ಲ. ಆತನಿಗೆ ಆಡಳಿತ ಪಕ್ಷದ ಘಟಾನುಘಟಿ ನಾಯಕರ ಸಂಪರ್ಕ ಇದೆ. ಅವರ ಬೆಂಬಲವೂ ಇದೆ. ಇವತ್ತು ಕಣ್ಮರಸಿ ಹೋಗುವ ಪರಿಸ್ಥಿತಿ ಉದ್ಭವಿಸಿದ್ದು, ಪೊಲೀಸ್ ಅಧಿಕಾರಿಗಳಿಗೆ ಕಿಮ್ಮತ್ತು ಇಲ್ಲದಂತೆ ಆಗಿದೆ. ಹಗರಣ ಮಾಡಿಕೊಂಡು ಹೋಗುತ್ತಿರುವುದು ದುರಾದೃಷ್ಟಕರ’ ಎಂದರು.

ಪೊಲೀಸರ ತನಿಖೆಯಿಂದ ಸತ್ಯ ಗೊತ್ತಾಗುತ್ತದೆ. ನ್ಯಾಯ ಸಿಗುತ್ತದೆ ಎಂದು ಹೇಳಲು ಸಾಧ್ಯವಿಲ್ಲ. ಖಂಡಿತವಾಗಿ ಈ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಲೇಬೇಕು. ಇಲ್ಲದೆ ಇದ್ದರೆ ಪ್ರತಿ ಬಾರಿ ಈ ರೀತಿ ಪ್ರಕರಣಗಳು ಮಾಡುತ್ತಲೇ ಇರುತ್ತಾನೆ, ಸರ್ಕಾರವೂ ಬೆಂಬಲ ಕೊಡುತ್ತಲೇ ಇರುತ್ತದೆ’ ಎಂದು ದೂರಿದರು.

ಈ ಸಂದರ್ಭದಲ್ಲಿ ಬಿಜೆಪಿ ಮಾಜಿ ಶಾಸಕ ಸುನೀಲ್ ವಲ್ಲಾಪೂರ್, ಚಂದು ಪಾಟೀಲ್, ಶಿವಣ್ಣಗೌಡ ರದ್ದೇವಾಡಿ ಸೇರಿದಂತೆ ಹಲವರು ಇದ್ದರು.

emedialine

Recent Posts

ಜಾನಪದ ಜೀವನ ಮೌಲ್ಯಗಳ ಪ್ರತೀಕ

ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…

13 hours ago

ಸುರಪುರ:ನೂತನ ಮರಗಮ್ಮ ದೇವಿ ರಜತ ಮೂರ್ತಿ ಪ್ರತಿಷ್ಠಾಪನೆ

ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…

13 hours ago

ಜುಲೈ 8 ರಂದು ಕಾಳಗಿಯಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ

ಕಲಬುರಗಿ: ನಗರದ ಪ್ರತಿಷ್ಠಿತ ಸುಬೇದಾರ ಕೇರ್ ಹಾಸ್ಪಿಟಲ್ ವತಿಯಿಂದ ಕಾಳಗಿ ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಜುಲೈ 8 ರಂದು…

15 hours ago

ವಾಡಿ: “ತಾಯಿ ಹೆಸರಲ್ಲಿ ಒಂದು ಸಸಿ” ಅಭಿಯಾನ

ವಾಡಿ: ಪಟ್ಟಣದ ಬಸ್ ನಿಲ್ದಾಣದ ಹತ್ತಿರದ ಹನುಮಾನ ಮಂದಿರದ ಮುಂಭಾಗದಲ್ಲಿ ಬಿಜೆಪಿ ಮುಖಂಡರು ಸಾರ್ವಜನಿಕರಿಗೆ ಸಸಿಗಳನ್ನು ವಿತರಿಸುವ ಮೂಲಕ"ತಾಯಿ ಹೆಸರಲ್ಲಿ…

15 hours ago

ವಾಡಿ: ಶ್ಯಾಮ್‌ ಪ್ರಸಾದ್ ಮುಖರ್ಜಿ ಜಯಂತಿ, ಬಾಬು ಜಗಜೀವನ್ ರಾಮ್ ಪುಣ್ಯಸ್ಮರಣೆ

ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಭಾರತೀಯ ಜನಸಂಘದ ಸಂಸ್ಥಾಪಕರು, ಭಾರತದ ಅಖಂಡತೆ ಹಾಗೂ ಏಕತೆಗಳಿಗಾಗಿ ಶ್ರಮಿಸಿದ ಡಾ. ಶ್ಯಾಮ ಪ್ರಸಾದ್…

15 hours ago

ನಾಳೆ ವಾಡಿಯಲ್ಲಿ ಕವಿಗೋಷ್ಠಿ

ವಾಡಿ: ಸಂಚಲನ ಸಾಹಿತ್ಯ ಮತ್ತು ಸಾಂಸ್ಕøತಿಕ ವೇದಿಕೆ ವತಿಯಿಂದ ಜುಲೈ ಇಂದು ಬೆಳಿಗ್ಗೆ 10:00 ಗಂಟೆಗೆ ಪಟ್ಟಣದ ಡಾ. ಅಂಬೇಡ್ಕರ್…

16 hours ago