ಬೇಡಿಕೆಗಳ ಈಡೇರಿಸಲು ಆಗ್ರಹಿಸಿ ಶೋಷಿತರ ಪರ ಹೋರಾಟದ ಒಕ್ಕೂಟ ಪ್ರತಿಭಟನೆ

0
19

ಸುರಪುರ:ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಶೋಷಿತರ ಪರ ಹೋರಾಟದ ಸಂಘಟನೆಗಳ ಒಕ್ಕೂಟ ದಿಂದ ನಗರದ ನಾಲ್ವಡಿ ರಾಜಾ ವೆಂಕಟಪ್ಪ ನಾಯಕ ವೃತ್ತದಲ್ಲಿ ರಸ್ತೆ ತಡೆದು ಪ್ರತಿಭಟನೆ ನಡೆಸಲಾಯಿತು.

ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಸಂಘಟನೆಯ ರಾಜ್ಯಾಧ್ಯಕ್ಷ ವೆಂಕೋಬ ದೊರೆ ಮಾತನಾಡಿ,ತಾಲೂಕಿನಲ್ಲಿಯ ಪರಿಶಿಷ್ಟ ಜಾತಿ,ಪರಿಶಿಷ್ಟ ಪಂಗಡ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣಕ್ಕೆ ಸರಕಾರ ದಿಂದ ಬಂದಿರುವ ಅನುದಾನದ ಮಾಹಿತಿ ನೀಡುವಂತೆ ಮತ್ತು ವಸತಿ ನಿಲಯಗಳಲ್ಲಿನ ಸೌಲಭ್ಯಗಳ ಕುರಿತು ಮಾಹಿತಿ ನೀಡುವಂತೆ ಮತ್ತು ವಾಗಣಗೇರಿ ಗ್ರಾಮ ಪಂಚಾಯತಿ ಸೇರಿದಂತೆ ತಾಲೂಕಿನ ಅನೇಕ ಗ್ರಾಮ ಪಂಚಾಯತಿಗಳಲ್ಲಿ ಉದ್ಯೋಗ ಖಾತ್ರಿ ಯೋಜನೆ ಕಾಮಗಾರಿಗಳು ಬೋಗಸ್ ಆಗಿದ್ದು ತನಿಖೆ ನಡೆಸಿ ತಪ್ಪಿತಸ್ಥರ ಮೇಲೆ ಕ್ರಮ ಕೈಗೊಳ್ಳಬೇಕು ಇಲ್ಲವಾದಲ್ಲಿ ನಮ್ಮ ಸಂಘಟನೆಯಿಂದ ಇದೇ 10ನೇ ತಾರಿಖು ರಸ್ತೆ ತಡೆದು ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದರು.

Contact Your\'s Advertisement; 9902492681

ನಂತರ ಜಿಲ್ಲಾ ಉಸ್ತುವಾರಿ ಸಚಿವರಿಗೆ ಬರೆದ ಮನವಿಯನ್ನು ತಹಸೀಲ್ದಾರ್ ಕಚೇರಿ ಸಿರಸ್ತೆದಾರ ಗುರುಬಸಪ್ಪ ಪಾಟೀಲ್ ಹಾಗೂ ಪ್ರವೀಣ ಅವರ ಮೂಲಕ ಸಲ್ಲಿಸಿದರು.ಪ್ರತಿಭಟನೆಯಲ್ಲಿ ಒಕ್ಕೂಟದ ಜಿಲ್ಲಾಧ್ಯಕ್ಷ ಮೌನೇಶ,ತಾಲೂಕು ಅಧ್ಯಕ್ಷ ಕೇಶವ ನಾಯಕ,ಹಣಮಂತ್ರಾಯ,ರಮೇಶಗೌಡ,ದವಲಸಾಬ ಸೇರಿದಂತೆ ಅನೇಕರು ಭಾಗವಹಿಸಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here