ಕಲಬುರಗಿ: ಪ್ರವಾದಿ ಮುಹಮ್ಮದ್ ( ಸ.ಅ.) ಜೀವನದ ಸಂದೇಶಗಳ ಕುರಿತು “ದ” ವಾಹ ಲೈಫ್ ಆಫ್ ಪ್ರಾಫಿಟ್ ಮೊಹಮ್ಮದ್ (ಸ.ಅ.) ವಿಷಯಾಧಾರಿತ ಜಮಾತೆ ಇಸ್ಲಾಮಿ ಹಿಂದ್ ವತಿಯಿಂದ ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ ಆಯೋಜಿಸಲಾಗಿದೆ. ನವೆಂಬರ್ 26 ರಂದು ಮೂರು ಅತ್ಯುನ್ನತ ಆಯ್ಕೆಯಾದ ವಿಜೆತರಿಗೆ ನಗದು ಬಹುಮಾನ ನೀಡಲಾಗುವುದೆಂದು ಆಯೋಜಕರಾದ ಜಾಕೀರ್ ಹುಸೇನ್ ತಿಳಿಸಿದ್ದಾರೆ.
ಈ ಸ್ಪರ್ಧೆ ಪ್ರೌಢಶಾಲಾ, ಪಿಯು ಮತ್ತು ಪದವಿ ಕಾಲೇಜು ವಿದ್ಯಾರ್ಥಿಗಳಿಗೆ ನಡೆಸಲಾಗುತಿದೆ. ಮೊಹಮ್ಮದ್ (ಸ.ಅ) ಅವರ ಜೀವನ್ ಮತ್ತು ಸಂದೇಶಗಳ ಬಗ್ಗೆ ಇಂಗ್ಲಿಷ್ ಅಥವಾ ಉರ್ದು ಭಾಷೆಯಲ್ಲಿ 30 ನಿಮಿಷಗಳ ಕಾಲವಧಿಯಲ್ಲಿ ಪರೀಕ್ಷೆ ನಡೆಸಲಾಗುತ್ತಿದೆ. ಈ ಪರೀಕ್ಷೆ ನವೆಂಬರ್ 20ರ ಒಳಗಾಗಿ ನಡೆಸಲಾಗುತ್ತಿದೆ. ಈಗಾಗಲೇ ಕೆಲವೊಂದು ಶಾಲಾ, ಕಾಲೇಜುಗಳಲ್ಲಿ ನಡೆಸಲಾಗುತ್ತಿದೆ. ಆಸಕ್ತ ವಿದ್ಯಾರ್ಥಿಗಳು ನವೆಂಬರ್ 20ರ ಒಳಗೆ ನಗರದ ಸಂಘತ್ರಾಶ್ ವಾಡಿ ಬಸ್ ನಿಲ್ದಾಣದ ಹತ್ತಿರದ ಹಿದಾಯತ್ ಸೆಂಟರ್ ನಲ್ಲಿ ಈ ಪ್ರಬಂಧ ಸ್ಪರ್ಧೆಯ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗಿದೆ ಎಂದು ಇ-ಮೀಡಿಯಾ ಲೈನ್ ಗೆ ಮಾಹಿತಿ ನೀಡಿದರು.
ಸ್ಪರ್ಧೆಯಲ್ಲಿ ಆಯ್ಕೆಯಾಗುವ ಅತ್ಯುನ್ನತ ಮೂರು ಪ್ರಬಂಧ ಸ್ಪರ್ಧಾ ವಿಜೆತರಿಗೆ ನಗದು ಬಹುಮಾನ ನೀಡಲಾಗುತ್ತದೆ. ಮೊದಲನೇ ಬಹುಮಾನ 15 ಸಾವಿರ, ಎರಡನೇ ಬಹುಮಾನ 10 ಸಾವಿರ ಮತ್ತು ಮೂರನೇ ಬಹುಮಾನ 5 ಸಾವಿರ ಬಹುಮಾನ ಇರುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ 8095353250, 8095353250ಗೆ ಸಂಪರ್ಕಿಸಬಹುದು.
ಕಲಬುರಗಿ: ಸ್ಲಂ ಜನರ ಸಂಘಟನೆ ಕರ್ನಾಟಕ ವತಿಯಿಂದ ಆಯೋಜಿಸಿದ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ವೃತ್ತ ಹೈ -ಕೋರ್ಟ್ ರಸ್ತೆ…
ಕಲಬುರಗಿ: ಕರ್ನಾಟಕ ರಾಜ್ಯದ ಕಲಬುರಗಿ-ಜಿಲ್ಲೆಯಲ್ಲಿ ದಲಿತ (ಮಾದಿಗ) ಸಮುದಾಯದವರಿಗೆ ರಾಷ್ಟ್ರೀಕೃತ ಬ್ಯಾಂಕ್‍ಗಳು ಸಾಲ ಸೌಲಭ್ಯ ನೀಡದಿರುವ ಕುರಿತು ಶೋಷಿತ ಜನಜಾಗೃತಿ…
ಕಲಬುರಗಿ: ಪ್ರಶಸ್ತಿ ಪುರಸ್ಕೃತರು ಸನ್ಮಾನ ಸಮಾರಂಭಕ್ಕೆ ಗೈರಾಗಿರುವುದು ಬೇಸರದ ಸಂಗತಿ ಎಂದು ಜಿಲ್ಲಾ ವೈದ್ಯ ಸಾಹಿತ್ಯ ಪರಿಷತ್ ಅಧ್ಯಕ್ಷ ಹಾಗೂ…
ಕಲಬುರಗಿ: ಹಣೆಯ ಮೇಲೆ ಹಚ್ಚಿದ ವಿಭೂತಿ ಸಮಾನತೆ ಸಾರುವದರೊಂದಿಗೆ ಮನುಷ್ಯನ ಆತ್ಮವಿಶ್ವಾಸ ಹೆಚ್ಚಿಸುತ್ತದೆ ಎಂದು ಆರಾಧನಾ ಪದವಿ ಪೂರ್ವ ಕಾಲೇಜಿನ…
ಕಲಬುರಗಿ ಕೇಂದ್ರ ಕಾರಾಗೃಹದಲ್ಲಿರುವ ಸಂವಿಧಾನ ದಿನವನ್ನು ಸರ್ಕಾರದ ಸುತ್ತೋಲೆ ಆದೇಶದಂತೆ ಕಾರಾಗೃಹದ ಲಿಪಿಕ/ ಕಾನಿನಿರ್ವಹಕ ಅಧಿಕಾರಿ/ಸಿಬ್ಬಂದಿಯವರೊಂದಿಗೆ ಡಾ|| ಬಾಬಾ ಸಾಹೇಬ್…
ಕಲಬುರಗಿ; ಸಂವಿಧಾನವನ್ನು ರಕ್ಷಿಸಲು ಮತ್ತು ಜನರಲ್ಲಿ ಸಂವಿಧಾನದ ಮೇಲಿನ ನಂಬಿಕೆಯನ್ನು ಬಲಪಡಿಸಲು ಜಾಗೃತ ಶಕ್ತಿಯಾಗಿ ಕಾರ್ಯನಿರ್ವಹಿಸುವ ಗುರುತರವಾದ ಜವಾಬ್ದಾರಿಯನ್ನು ದೇಶದ…