ಶಾಲ್ ಹಾಕಿಸಿ ಮಕ್ಕಳನ್ನು ಧರ್ಮ ರಕ್ಷಣೆಗೆ ಕಳುಹಿಸುವ ಬದಲು ಉನ್ನತ ಶಿಕ್ಷಣ ಪಡೆಯಲು ಕಳಿಸಿ: ಪ್ರಿಯಾಂಕ್ ಖರ್ಗೆ

0
15

ಕಲಬುರಗಿ: ಇತ್ತೀಚಿಗೆ ಶಾಲ್ ಹಾಕಿಸಿ ಬಡವರ ಮಕ್ಕಳನ್ನು ಧರ್ಮ ರಕ್ಷಣೆಗೆ ಹಾಗೂ ಗೋ ರಕ್ಷಣೆಗೆ ಕಳಿಸಲಾಗುತ್ತಿದೆ. ಅಚ್ಚರಿ ಎಂದರೆ ಅವರ ಮಕ್ಕಳನ್ನು ಉನ್ನತ ಶಿಕ್ಷಣಕ್ಕಾಗಿ ವಿದೇಶಕ್ಕೆ ಕಳಿಸುತ್ತಾರೆ. ಧರ್ಮ ರಕ್ಷಣೆಗೂ ತಮ್ಮ ಮಕ್ಕಳನ್ನು ಯಾಕೆ ಕಳಿಸುವುದಿಲ್ಲ ? ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಟೀಕಿಸಿದರು.

ಆಳಂದ ಪಟ್ಟಣದಲ್ಲಿ ನಡೆದ ಸರ್ಕಾರಿ ಪಾಲಿಟೆಕ್ನಿಕ್ ಕಟ್ಟಡ ಅಂದಾಜು ಮೊತ್ತ ರೂ 800 ಲಕ್ಷ ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಅಂದಾಜು ಮೊತ್ತ ರೂ 625.95 ಲಕ್ಷ ಕಟ್ಟಡದ ಅಡಿಗಲ್ಲು ಸಮಾರಂಭ ನೆರವೇರಿಸಿ ಅವರು ಮಾತನಾಡುತ್ತಿದ್ದರು.

Contact Your\'s Advertisement; 9902492681

ಪ್ರಧಾನಿ ನರೇಂದ್ರ ಮೋದಿ ವೈಜ್ಞಾನಿಕ ಮನೋಭಾವನೆಗೆ ಒತ್ತು ನೀಡದೆ 5000 ಹಿಂದಿನ ಆಚರಣೆಗಳನ್ನು ಅನುಸರಿಸುವಂತೆ ಕರೆ ನೀಡುತ್ತಾ ಅವುಗಳನ್ನು ಅಳವಡಿಸಿಕೊಳ್ಳುವಂತೆ ಇಂಡಿಯನ್ ಸೈನ್ಸ್ ಕಾಂಗ್ರೆಸ್ ನ ಕಾರ್ಯಕ್ರಮದಲ್ಲಿ ಹೇಳುತ್ತಾರೆ. ನಾನು ಹೇಳುವುದು ಇಷ್ಟೆ, ಎಲ್ಲವನ್ನೂ ಮಕ್ಕಳು ಓದಲಿ ಆದರೆ, ವೈಜ್ಞಾನಿಕ ಮನೋಭಾವನೆಯನ್ನು ಬೆಳೆಸಿಕೊಳ್ಳಬೇಕು ಎಂದು ಕರೆ ನೀಡಿದರು.

ನಾನು ಇತ್ತೀಚಿಗೆ ಅಮೇರಿಕಾಗೆ ಹೋದಾಗ ನಮ್ಮ ರಾಜ್ಯದ ಐತಿಹಾಸಿಕ ಹಿನ್ನೆಲೆಯ ಬಗ್ಗೆ ಅಲ್ಲಿ ವಿವರಿಸಿ ಹೇಳಬೇಕಿತ್ತು. ಅಲ್ಲಿನ ಕಂಪನಿಗಳ ಪ್ರಮುಖರು ಭಾರತದಲ್ಲಿ ಬಂಡವಾಳ ಹೂಡುವುದಕ್ಕೆ ಆಸಕ್ತಿ ತೋರಿಸಿದ್ದರು ಕಾರಣ ಇಲ್ಲಿನ ಮಾನವಸಂಪನ್ಮೂಲ. ಈ ಸಂಪನ್ಮೂಲಗಳನ್ನು ಬಳಸಿಕೊಳ್ಳುವ ಬಗ್ಗೆ ಅವರು ಉತ್ಸುಕರಾಗಿದ್ದಾರೆ. ಇದಕ್ಕೆ ಗುಣಮಟ್ಟದ ಶಿಕ್ಷಣ ಕಾರಣವಾಗಿದೆ ಎಂದರು.

ಮಾನವ ಸಂಪನ್ಮೂಲ ನಮ್ಮ ದೇಶದ ಪ್ರಬಲ ಶಕ್ತಿಯಾಗಿದೆ. ನಮ್ಮ ಮಾನವ ಸಂಪನ್ಮೂಲಕ್ಕೆ ಇಡೀ ವಿಶ್ವದಲ್ಲೇ ಬೇಡಿಕೆ ಇದೆ. ಸಶಕ್ತ ರಾಷ್ಟ್ರ ನಿರ್ಮಾಣವಾಗಬೇಕಾದರೆ ಯುವಶಕ್ತಿಯನ್ನು ಬೆಳೆಸಬೇಕು. ಯುವಕರ ಸಂಖ್ಯಾಬಲಕ್ಕೆ ಸರಿಯಾದ ಶಿಕ್ಷಣ ನೀಡಿದಾಗ ಮಾತ್ರ ರಾಷ್ಟ್ರ ನಿರ್ಮಾಣಕ್ಕೆ ಅನುಕೂಲವಾಗಲಿದೆ. ಆಣೆಕಟ್ಟಯ ಹಾಗೂ ರಸ್ತೆ ನಿರ್ಮಾಣದ ಜೊತೆಗೆ ಯುವಶಕ್ತಿಗೆ ವೈಜ್ಞಾನಿಕ ಶಿಕ್ಷಣ ನೀಡಿದಾಗ ಮಾತ್ರ ಸುಭದ್ರ ರಾಷ್ಟ್ರ ವಾಗಲಿದೆ ಎಂದು ಅಭಿಪ್ರಾಯಪಟ್ಟರು.

ಗುಣಮಟ್ಟದ ಶಿಕ್ಷಣ ಹಾಗೂ ವೈಜ್ಞಾನಿಕ ಮನೋಭಾವನೆ ಸಮೃದ್ಧ ಮಾನವಸಂಪನ್ಮೂಲ ದ ಅಭಿವೃದ್ದಿಗೆ ಸಹಕಾರಿಯಾಗಲಿದೆ ಎಂದ ಖರ್ಗೆ ಅವರು ಸಂವಿಧಾನದ ಅಡಿಯಲ್ಲಿ ದೊರಕುವ ಸೌಲಭ್ಯಗಳನ್ನು ಬಳಸಿಕೊಂಡು ಎಲ್ಲರೂ ಉತ್ತಮ ಶಿಕ್ಷಣದೊಂದಿಗೆ ವೈಜ್ಞಾನಿಕ ಮನೋಭಾವನೆ ಬೆಳೆಸಿಕೊಳ್ಳಬೇಕು, ಬಿ.ಆರ್.ಪಾಟೀಲ್ ಅವರಂತ ಪ್ರಗತಿಪರ ಮನೋಭಾವದವರಿದ್ದು ಇದರಿಂದ ಮಕ್ಕಳಲ್ಲಿ ವೈಜ್ಞಾನಿಕ ಮನೋಭಾವನೆಯ ಬೆಳವಣಿಗೆಗೆ ಸಹಕಾರಿಯಾಗಲಿದೆ ಎಂದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here