ಕಲಬುರಗಿ; DPSE ಪೂರ್ವ ಪ್ರಾಥಮಿಕ ಶಿಕ್ಷಣದಲ್ಲಿ ಡಿಪ್ಲೋಮೋ ಕೋರ್ಸನ್ನು ಮುಗಿಸಿರುವ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಬೇಕೆಂದು ಒತ್ತಾಯಿಸಿ ಬುಧವಾರ ಡಿ.ಪಿ.ಎಸ್.ಇ ತರಬೇತಿ ಪಡೆದ ಶಿಕ್ಷಕರ ಸಂಘದಿಂದ ಕೆ.ಕೆ.ಆರ್.ಡಿ.ಬಿ ಅಧ್ಯಕ್ಷರಾದ ಶಾಸಕ ಡಾ. ಅಜಯಸಿಂಗ್ ಅವರಿಗೆ ಮನವಿ ಸಲ್ಲಿಸಿ ಒತ್ತಾಯಿಸಿದರು.
ನಗರದ ಆಕಾಶವಾಣಿ ಕೇಂದ್ರದಲ್ಲಿ ಭೇಟಿ ನೀಡಿ ರಾಜ್ಯವ್ಯಾಪಿ 1500ಕ್ಕೂ ಅಧಿಕ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಆಂಗ್ಲ ಮಾಧ್ಯಮದಲ್ಲಿ ತರಗತಿಗಳು ನಡೆಯುತ್ತಿದೆ ಹಾಗೂ 276 ಕರ್ನಾಟಕ ಪಬ್ಲಿಕ್ ಶಾಲೆಗಳು (KPS) ಕಾರ್ಯ ನಿರ್ವಹಿಸುತ್ತಿದ್ದು, ಸದರಿ ಶಾಲೆಗಳಲ್ಲಿ ಆಂಗ್ಲ ಮಾಧ್ಯಮದಲ್ಲಿ 1 ಮತ್ತು 2ನೇ ತರಗತಿಗಳನ್ನು ಪ್ರಾರಂಭಿಸಲಾಗಿದೆ. ಈ ಶಾಲೆಗಳಲ್ಲಿ ತರಗತಿಗಳಿಗೆ ಬೋಧಿಸಲು ನಿಗದಿತ ವಿದ್ಯಾರ್ಹತೆ ಹೊಂದಿದ ಹಾಗೂ ತರಬೇತಿ ಪಡೆದ ಶಿಕ್ಷಕರು ಲಭ್ಯವಿರುವುದಿಲ್ಲ. ಮಕ್ಕಳ ಕಲಿಕೆಯ ಮೇಲೆ ಪ್ರತಿಕೂಲ ಪರಿಣಾಮ ಉಂಟಾಗುತ್ತಿದೆ ಎಂದು ತಿಳಿಸಿದರು.
ಕೋರ್ಸ್ ತೇರ್ಗಡೆಯಾದ ಅಭ್ಯರ್ಥಿಗಳನ್ನು ಕಲ್ಯಾಣ ಕರ್ನಾಟಕ ಭಾಗದಲ್ಲಿ ಆಂಗ್ಲ ಮಾಧ್ಯಮದ ಸರ್ಕಾರಿ ಪ್ರಾಥಮಿಕ ಶಾಲೆ ಹಾಗೂ ಕೆಪಿ ಎಸ್ ಶಾಲೆಗಳಲ್ಲಿ ನೇಮಕ ಮಾಡಿಕೊಳ್ಳಲು ಅಗತ್ಯವಿರುವ ವೃಂದ ಮತ್ತು ನೇಮಕಾತಿ ನಿಯಮಗಳನ್ನು ರಚನೆ ಮಾಡಿ ನೇಮಕಾತಿ ಮಾಡಿಕೊಳ್ಳಬೇಕು. ರಾಜ್ಯ ಸರಕಾರದ ಮೇಲೆ ಈ ಬಗ್ಗೆ ಒತ್ತಾಡ ತರಬೇಕೆಂದು ಮನವಿ ಸಲ್ಲಿಸುವ ಮೂಲಕ ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಸಂಘದ ಉಪಾ ಅಧ್ಯಕ್ಷರಾದ ಆಶಾ, ನೇಹಾ ಫಾತೀಮಾ ಹಾಗೂ ರೀಹಾನ್ ಸೇರಿದಂತೆ ಮುತಾಂದವರು ಇದ್ದರು.