ಬೆಂಗಳೂರು; ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಮಂತ್ರಾಲಯವು ರಾಜ್ಯದ ನಗರ, ಸ್ಥಳೀಯ ಸಂಸ್ಥೆಗಳಲ್ಲಿ ನವೆಂಬರ್ 07 ರಿಂದ 9 ರವರೆಗೆ ನಗರಾಭಿವೃದ್ಧಿ ಇಲಾಖೆ ಮತ್ತು ಪೌರಾಡಳಿತ ನಿರ್ದೇಶನಾಲಯದ ಅಮೃತ್ 20 ಯೋಜನೆಯಡಿ ಆಯ್ದ ನಗರ, ಸ್ಥಳೀಯ ಸಂಸ್ಥೆಗಳು ಮತ್ತು ರಾಷ್ಟ್ರೀಯ ಜೀವನೋಪಾಯ ಅಭಿಯಾನ, ಕೌಶಲ್ಯಾಭಿವೃದ್ದಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಸಹಯೋಗದೊಂದಿಗೆ ಸ್ವ-ಸಹಾಯ ಸಂಘದ ಮಹಿಳೆಯರನ್ನು ಗುರುತಿಸಿ “ಜಲ ದೀಪಾವಳಿ” – ಮಹಿಳೆಯರಿಗಾಗಿ ನೀರು, ನೀರಿಗಾಗಿ ಮಹಿಳೆಯರು ಎಂಬ ಕಾರ್ಯಕ್ರಮವನ್ನು ಆಯೋಜಿಸಲಾಗಿರುತ್ತದೆ.
ಅಮೃತ್ ಯೋಜನೆಯಡಿ ನಗರ, ಸ್ಥಳಿಯ ಸಂಸ್ಥೆಗಳಲ್ಲಿರುವ ಜಲಶುದ್ದೀಕರಣ ಘಟಕಗಳಿಗೆ, ನಗರ ಮತ್ತು ಸ್ಥಳೀಯ ಸಂಸ್ಥೆಗಳಲ್ಲಿನ ಮಹಿಳಾ ಸ್ವ-ಸಹಾಯ ಗುಂಪುಗಳು ಭೇಟಿ ನೀಡಿ ಜಲಶುದ್ದೀಕರಣ ಘಟಕಗಳ ಮೂಲಕ ಮನೆಗಳಿಗೆ ಶುದ್ಧ ಮತ್ತು ಸುರಕ್ಷಿತ ಕುಡಿಯುವ ನೀರು ಪೂರೈಕೆ ಪ್ರಕ್ರಿಯೆ, ಉತ್ತಮ ಗುಣಮಟ್ಟದ ನೀರನ್ನು ಪಡೆದುಕೊಳ್ಳಲು ಅನುಸರಿಸುವ ವಿವಿಧ ಪರೀಕ್ಷಾ ಮಾದರಿಯ ಪ್ರಕ್ರಿಯೆಯ ಬಗ್ಗೆ ಮಾಹಿತಿಯನ್ನು ತಿಳಿಸುವುದರ ಜೊತೆಗೆ ನೀರಿನ ಮೂಲ ಸೌಕರ್ಯದ ಬಗ್ಗೆ ಮಾಲಿಕತ್ವದ ಭಾವನೆಯನ್ನು ಮಹಿಳೆಯರ ನಡುವೆ ತರುವುದು ಈ ಕಾರ್ಯಕ್ರಮದ ಪ್ರಮುಖ ಉದ್ದೇಶವಾಗಿದೆ.
ಕಾರ್ಯಕ್ರಮದಲ್ಲಿ ಭಾಗವಹಿಸಲು, ನಗರ, ಸ್ಥಳಿಯ ಸಂಸ್ಥೆಗಳ ಅಧಿಕಾರಿಗಳು, ಸಮುದಾಯ ಸಂಘಟನಾಧಿಕಾರಿಗಳು ತಲಾ 30 ಮಹಿಳಾ ಸ್ವ-ಸಹಾಯ ಸಂಘದ ಸದಸ್ಯರನ್ನು ಗುರುತಿಸಿ, ಅವರನ್ನು ಸ್ಥಳೀಯ ಜಲಶಯದ್ದೀಕರಣ ಘಟಕಗಳಿಗೆ ಭೇಟಿ ನೀಡಲು ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ರಾಜ್ಯದಲ್ಲಿ ಮೊದಲ ದಿನವಾದ ನವೆಂಬರ್ 7 ರಂದು ಮೈಸೂರು ಮಹಾನಗರ ಪಾಲಿಕೆ, ಹೊಸಪೇಟೆ, ಬಸವಕಲ್ಯಾಣ, ಚಡಚಣ, ಬೀಳಗಿ, ಜಮಖಂಡಿ, ಮದ್ದೂರು, ಬಂಕಾಪುರ, ಹಾನಗಲ್, ಶಿಗ್ಗಾಂವ್, ಸವಣೂರು, ಪಿರಿಯಾಪಟ್ಟಣ, ಟಿ. ನರಸೀಪುರ ಮತ್ತು ಅಳ್ನಾವರ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಯಸಸ್ವಿಯಾಗಿ “ಜಲ ದೀಪಾವಳಿ” ಕಾರ್ಯಕ್ರಮವನ್ನು ಚಾಲನೆಗೊಳಿಸಿದರು ಎಂದು ಪೌರಾಡಳಿತ ಇಲಾಖೆಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಲಬುರಗಿ: ಕಾಂಗ್ರೆಸ್ ಪಕ್ಷದ ಅಂಗ ಸಂಖ್ಯೆ ಸೇವಾದಳ ಯಂಗ್ ಬ್ರಿಗೇಡ್ ಸದಸ್ಯತ್ವ ಅಭಿಯಾನ ನ.20ರಿಂದ ರಾಜ್ಯವ್ಯಾಪಿ ಆರಂಭ ಮಾಡಲಾಗಿದ್ದು, ಆಸಕ್ತರು…
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…