ಬಿಸಿ ಬಿಸಿ ಸುದ್ದಿ

ಕಲಬುರಗಿ ಕೆಬಿಎನ್ ವಿವಿಯಲ್ಲಿ ಕವನ ವಾಚನ ಕಾರ್ಯಕ್ರಮ

ಕಲಬುರಗಿ : ನಗರದ ಖಾಜಾ ಬಂದಾನವಾಜ ವಿಶ್ವ ವಿದ್ಯಾಲಯದ ಇಂಗ್ಲೀಷ್ ವಿಭಾಗದಲ್ಲಿ ಬುಧವಾರ ಕವನ ವಾಚನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಭಾಷಾ ನಿಕಾಯದ ಡೀನ್ ಡಾ. ನಿಶಾತ ಆರೀಫ್ ಹುಸ್ಸೇನಿ ಮುಖ್ಯ ಅತಿಥಿಯಾಗಿ ಭಾಗ ವಹಿಸಿದ್ದರು. ವಿದ್ಯಾರ್ಥಿಗಳಲ್ಲಿ ಮತ್ತು ಅಧ್ಯಾಪಕರಲ್ಲಿ ಹೆಚ್ಚು ಸಾಹಿತ್ಯಆಸಕ್ತಿಯನ್ನು ಬೆಳೆಸುವುದು ಹಾಗೂ ಕವನ ರಚಿಸುವುದರ ಮೂಲಕ ಓದುವ ಹವ್ಯಾಸ ಉತ್ತೇಜಿಸುವುದು ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿತ್ತು. ಇಂಗ್ಲೀಷ್ ವಿಭಾಗದ ವಿದ್ಯಾರ್ಥಿಗಳು ತಮ್ಮ ಆಯ್ಕೆಯ ಕವನಗಳನ್ನು ವಾಚಿಸಿದರು. ಆಯ್ದ ಕವಿತೆಗಳ ವಿಷಯವು ಸಮಕಾಲೀನ ಸಂದರ್ಭದ ವಸ್ತುಸ್ಥಿತಿಯನ್ನು ಬಿಂಬಿಸುವ ಕಾವ್ಯಗಳಾಗಿದ್ದವು.

ವಿದ್ಯಾರ್ಥಿನಿ ಬುಶ್ರಾ ಕಮಲಾ ದಾಸ್ ಅವರ “ಲುಮಿನೋಲ್”, ಶಹಬಾಜ್ ಅವರು ಜಯಂತ ಮಹಾಪಾತ್ರ ಅವರ “ಹಸಿವು” ಕವನ ಓದಿದರು. ಇಕ್ರಾ ಮತ್ತು ಶಬ್ರಾ ಅವರು ಆದಿಲ್ ಜುಸ್ಸಾವಾಲಾ ಅವರ “ಕಾಣೆಯಾದ ವ್ಯಕ್ತಿ” ಮತ್ತು ಅರುಣ್ ಕೋಲಾಟ್ಕರ್ ಅವರ “ದಿ ಬಸ್” ಕವನಗಳನ್ನು ಪಠಿಸಿದರು.

ವಾಚನದ ನಂತರ ಹಿರಿಯ ಕವಿ ಪ್ರೊ. ನಿಶಾತ್ ಇವರ ಸಂದರ್ಶನ ನಡೆಸಲಾಯಿತು. ಇವರು ರಚಿಸಿರುವ ವೈವಿಧ್ಯಮಯ ವಿಷಯಗಳ ಕುರಿತು ಬರೆದ ಕವನಗಳು, ಸಂಕಲನಗಳು ವಿವಿಧ ನಿಯತಕಾಲಿಕೆಗಳಲ್ಲಿ ಪ್ರಕಟ ವಾಗಿವೆ. ಪ್ರೊ.ನಿಶಾತ್ ಅವರು ವಿದ್ಯಾರ್ಥಿಗಳಿಗೆ ಜೀವನದಲ್ಲಿ ಕಾವ್ಯದ ಅಗತ್ಯ ಮತ್ತು ಕವನ ಬರೆಯುವ ಪ್ರಕ್ರಿಯೆಯ ಬಗ್ಗೆ ವಿವರಿಸಿದರು. ಪ್ರೇಕ್ಷಕರಿಗೆ ಸಂಪನ್ಮೂಲ ವ್ಯಕ್ತಿಯೊಂದಿಗೆ ಸಂವಾದ ನಡೆಸಲಾಯಿತು.

ಉರ್ದು ವಿಭಾಗದ ಸಹಾಯಕ ಪ್ರಾಧ್ಯಾಪಕಿ ಡಾ. ಮೈಮೂನಾ ಸರಡಗಿ, ಇಂಗ್ಲೀಷ್ ವಿಭಾಗದ ಪ್ರಾಧ್ಯಪಕಿ ಡಾ. ಅತಿಯಾ ಸುಲ್ತಾನ ಹಾಗೂ ಡಾ. ಜೈನಬ ಸ್ವರಚಿತ ಕವನ ವಾಚಿಸಿದರು.

emedialine

Recent Posts

ಆತ್ಮವಿಶ್ವಾಸವಿದ್ದರೆ ಜೀವನದಲ್ಲಿ ಏನನ್ನಾದರೂ ಸಾಧಿಸಬಹುದು : ಶಂಕರಗೌಡ

ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…

2 hours ago

ಬೌದ್ಧಿಕ ವಿಕಾಸದಿಂದ ತನ್ನತನದ ಶೋಧ

ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…

2 hours ago

ನಿಧನ ವಾರ್ತೆ; ಆನಂದಪ್ಪ ಉಮ್ಮನಗೋಳ್

ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…

4 hours ago

ಸಂಘಸಂಸ್ಥೆಗಳು ಸಮಾಜಕ್ಕೆ ನೀಡಿದ ಕೋಡುಗೆ ಅಪಾರ ಪಾಳಾಶ್ರೀ

ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…

4 hours ago

ಹೊಸ ಹೊಸ ಉದ್ಯೋಗ ಸೃಷ್ಟಿಸಲು HKE ಸಂಸ್ಥೆ ಕಾರ್ಯ ಶ್ಲಾಘನೀಯ

ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…

4 hours ago

ಸ್ವಾಭಿಮಾನದ ಬದುಕಿಗೆ ಸಂಗೀತ ಪೂರಕ

ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…

4 hours ago