ಕಲಬುರಗಿ: ಬುದ್ಧ ಪೂರ್ಣಿಮೆಯನ್ನು ರಾಜ್ಯ ಸರ್ಕಾರದಿಂದ ಆಚರಣೆ ಮಾಡಬೇಕು ಮತ್ತು ಸರ್ಕಾರಿ ರಜೆ ಘೋಷಿಸುವಂತೆ ಒತ್ತಾಯಿಸಿ ಬಾಬಾ ಸಾಹೇಬ್ ಡಾ. ಬಿ.ಆರ್.ಅಂಬೇಡ್ಕರ ಜಿಲ್ಲಾ ಜಯಂತೋತ್ಸವ ಸಮಿತಿಯ ಜಿಲ್ಲಾಧ್ಯಕ್ಷ ದಿನೇಶ ದೊಡ್ಡಮನಿ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ಜಿಲ್ಲಾ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಮನವಿ ಸಲ್ಲಿಸಲಾಯಿತು. ಸಂತೋಷ್ ಮೇಲಿನಮನಿ ಹಾಗೂ ಇತರರಿದ್ದರು.