ಕಲಬುರಗಿ: ರಾಜ್ಯ ಸಚಿವ ಸಂಪುಟಕ್ಕೆ ಸುರಪುರ ಬಿಜೆಪಿ ಶಾಸಕ ರಾಜುಗೌಡ (ನರಸಿಂಹ ನಾಯಕ್) ಅವರನ್ನು ಸೇರಿಸಿಕೊಳ್ಳಬೇಕೆಂದು ಒತ್ತಾಯಿಸಿ ಅಭಿಮಾನಿ ಬಳಗದ ಕಾರ್ಯಕರ್ತರು ನಗರದ ಸರ್ದಾರ್ ವಲ್ಲಭಬಾಯಿ ಪಟೇಲ್ ವೃತ್ತದಿಂದ ಜಿಲ್ಲಾಧಿಕಾರಿಗಳ ಕಚೇರಿಯವರೆಗೆ ಬುಧವಾರ ಪ್ರತಿಭಟನಾ ಮೆರವಣಿಗೆ ಮಾಡಿದರು.
ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಶ್ರೀಧರ್ ರತ್ನಗಿರಿ ಅವರ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಅಭಿಮಾನಿ ಬಳಗದ ಅಧ್ಯಕ್ಷ ದಸ್ತಗೀರ್ ಪಟೇಲ್, ಮಾಜಿ ಉಪ ಮೇಯರ್ ನಂದಕುಮಾರ್ ಮಾಲಿಪಾಟೀಲ್, ಶರಣು ಸುಬೇದಾರ್, ಮುಕುಂದ್ ಅಷ್ಟಗಿ, ರಾಜು ಸಿರಸಗಿ ಮುಂತಾದವರು ಪಾಲ್ಗೊಂಡಿದ್ದರು.
ಕಳೆದ ಲೋಕಸಭಾ ಚುನಾವಣೆಯಲ್ಲಿ ರಾಯಚೂರಿನಲ್ಲಿ ರಾಜಾ ಅಮರೇಶ್ವರ್ ನಾಯಕ್, ಕಲಬುರ್ಗಿಯಲ್ಲಿ ಡಾ. ಉಮೇಶ್ ಜಾಧವ್ ಅವರನ್ನು ಗೆಲ್ಲಿಸುವಲ್ಲಿ ರಾಜುಗೌಡರು ಸಾಕಷ್ಟು ಶ್ರಮಪಟ್ಟಿದ್ದಾರೆ. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಅವರಿಗೆ ಜವಾಬ್ದಾರಿ ಕೊಟ್ಟರೆ ಈ ಭಾಗದಲ್ಲಿ ಸುಮಾರು ೮ರಿಂದ ೧೦ ಬಿಜೆಪಿ ಪಕ್ಷದ ಶಾಸಕರನ್ನು ಆಯ್ಕೆಗೊಳಿಸುವ ಸಾಮರ್ಥ್ಯ ಹೊಂದಿದ್ದಾರೆ. ಈ ಹಿಂದೆ ಬಿಜೆಪಿ ಸರ್ಕಾರದಲ್ಲಿಯೇ ರಾಜುಗೌಡ ಅವರು ಸಚಿವರಾಗಿದ್ದು, ಒಂದು ಕಪ್ಪು ಚುಕ್ಕೆಯಿಲ್ಲದೇ ಕಾರ್ಯನಿರ್ವಹಿಸಿದ್ದಾರೆ. ಅವರಿಗೆ ಮತ್ತೆ ಸಚಿವ ಸ್ಥಾನ ಕೊಡುವ ಮೂಲಕ ಸೇವೆ ಸಲ್ಲಿಸಲು ಅವಕಾಶ ಕಲ್ಪಿಸಿಕೊಡಬೇಕು ಎಂದು ಅವರು ಆಗ್ರಹಿಸಿದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…