ಕಲಬುರಗಿ: ಚಿತ್ತಾಪುರ ತಾಲೂಕಿನ ಹಲಕರ್ಟಿ ಗ್ರಾಮದ ರಾಷ್ಟ್ರೀಯ ಹೆದ್ದಾರಿ 150.ಮೇಲೆ ಭೀಕರ ಅಪಘಾತ ಸಂಭವಿಸಿದ್ದು, 6. ಜನ ಪ್ರಯಾಣಿಕರು ಸ್ಥಳದಲ್ಲಿ ಸಾವನ್ನಪ್ಪಿರುವ ಘಟನೆ ಗುರವಾರ ಸಂಜೆ ನಡೆದಿದೆ.
ನಾಲವಾರ ಗ್ರಾಮದ ವಾರ್ಡ್ ನಂ.1 ಅಕಾನಿ ಮಸ್ಜಿದ್ ಹತ್ತಿರದ ನಿವಾಸಿಗಳಾದ ನಜ್ಮಿನ್ ಬೇಗಂ (28), ಬೀಬಿ ಫಾತಿಮಾ(12), ಅಬೂಬಕ್ಕರ್(4), ಬೀಬಿ ಮರಿಯಮ್( 3 ತಿಂಗಳು), ಮಹ್ಮದ್ ಪಾಷಾ,(20) ಹಾಗೂ ಆಟೋ ಚಾಲಕ ಬಾಬಾ(35) ಸ್ಥಳದಲ್ಲಿಯೇ ಮೃತಪಟ್ಟವರು. 10 ವರ್ಷದ ಬಾಲಕ ಮಹ್ಮದ್ ಹುಸೇನ್ ಗಾಯಗೊಂಡಿದ್ದಾನೆ.
ವಾಡಿ ಪಟ್ಟಣದಿಂದ ನಾಲವಾರ ಕಡೆ ತೆರಳುತ್ತಿದ್ದ ಟಂಟಂ ವಾಹನಕ್ಕೆ ಬೂದಿ ತುಂಬಿದ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ, ವಾಹನದಲ್ಲಿದ್ದ ಆರು ಸವಾರರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೃತರು ನಾಲವಾರ ಗ್ರಾಮದ ನಿವಾಸಿಗಳಾಗಿದ್ದು, ಆಧಾರ್ ತಿದ್ದುಪಡಿಗಾಗಿ ಚಿತ್ತಾಪುರಕ್ಕೆ ಹೋಗಿ ಮರಳಿ ನಾಲವಾರ ಗ್ರಾಮಕ್ಕೆ ಬರುತ್ತಿದ್ದಾಗ ಈ ದುರ್ಘಟನೆಯ ಸಂಭವಿಸಿದೆ.
ನಾಲವಾರಕ್ಕೆ ತೆರಳುತ್ತಿದ್ದಾಗ ಹಲಕರ್ಟಿ ಸಮೀಪ ವೇಗವಾಗಿ ಬರುತ್ತಿದ್ದ ಬೂದಿ ಟ್ಯಾಂಕರ್ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆತಕ್ಕೆ ಸುಮಾರು 100 ಆಡಿಗೂ ಅಧಿಕ ಎಳೆದು ಕೊಂಡು ಹೋಗಿದ್ದು ದೇಹಗಳು ಛಿದ್ರಗೊಂಡು ಹೆದ್ದಾರಿ ತುಂಬಾ ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದವೇ.
ಟ್ಯಾಂಕರ್ ಚಾಲಕ ಪರಾರಿಯಾಗಿದ್ದು, ವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿಕೊಂಡು ತನಿಖೆ ಮಾಡಲಾಗುತ್ತಿದ್ದು, ಸುದ್ದಿ ತಿಳಿಯುತ್ತಿದ್ದಂತೆ ಎಸ್ಪಿ ಅಡೂರು ಶ್ರೀನಿವಾಸಲು, ಡಿವೈಎಸ್ ಪಿ, ಸಿಪಿಐ ಹಾಗೂ ಪಿಎಸ್ಐ ತಿರುಮಲೇಶ್ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ರಸ್ತೆಯಲ್ಲಿನ ಶವಗಳನ್ನು ತೆಗೆಯವ ಕಾರ್ಯ ನಡೆದಿದೆ. ಅಪಘಾತದಿಂದಾಗಿ ರಸ್ತೆಯಲ್ಲಿ ಸಂಚಾರ ದಟ್ಟಣೆ ಉಂಟಾಗಿದೆ.