ಸುರಪುರ: ಮತಕ್ಷೇತ್ರದಾದ್ಯಂತ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಅಕ್ರಮ ನಡೆಯುತ್ತಿದ್ದು ತನಿಖೆ ನಡೆಸುವಂತೆ ಆಗ್ರಹಿಸಿ ಶೋಷಿತರ ಪರ ಹೊರಾಟದ ಸಂಘಟನೆಗಳ ಒಕ್ಕೂಟ ದಿಂದ ನಗರದ ಮಹಾತ್ಮ ಗಾಂಧಿ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ನಡೆಸಲಾಯಿತು.
ಒಕ್ಕೂಟದ ರಾಜ್ಯಾಧ್ಯಕ್ಷ ವೆಂಕೋಬ ದೊರೆ ಮಾತನಾಡಿ,ಮತಕ್ಷೇತ್ರದ ಅನೇಕ ಗ್ರಾಮ ಪಂಚಾಯತಿಗಳಲ್ಲಿ ಉದ್ಯೋಗ ಖಾತ್ರಿ ಯೋಜನೆಯ ಕಾಮಗಾರಿ ಮಾಡದೆ ಬೋಗಸ್ ಬಿಲ್ಲು ಪಡೆಯಲಾಗಿದೆ,ಕೆಲ ಕಡೆಗಳಲ್ಲಿ ಕ್ರೀಯಾಯೋಜನೆಯಂತೆ ಕೆಲಸ ಮಾಡಿಲ್ಲ,ಅನೇಕ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಉದ್ಯೋಗ ಖಾತ್ರಿ ಕೆಲಸ ಮಾಡಿದ ಕಾರ್ಮಿಕರಿಗೆ ಕೂಲಿ ಹಣ ನೀಡಿಲ್ಲ ಎಂದು ಆರೋಪಿಸಿದರು.
ಅಲ್ಲದೆ ಕೆಬಿಜೆಎನ್‍ಎಲ್ ಭೀಮರಾಯನಗುಡಿ ಜೋನ್‍ನಲ್ಲಿ ಗುತ್ತಿಗೆದಾರರಿಂದ ಎಲ್ಲಾ ಬಿಲ್ ಮಾಡಲು ಪರ್ಸೆಂಟೇಜ್ ಪಡೆಯಲಾಗುತ್ತಿದ್ದು ಇದಕ್ಕೆ ಕಡಿವಾಣ ಹಾಕಬೇಕು,ಸುರಪುರ ನಗರದ ಎರಡು ಕಡೆಗಳಲ್ಲಿ ನಿರ್ಮಿಸಿರುವ ಕರ್ನಾಟಕ ಗೃಹ ಮಂಡಳಿ ವತಿಯಿಂದ ನಿರ್ಮಿಸಿರುವ ಮನೆಗಳು ಹತ್ತು ವರ್ಷವಾದರು ಮನೆಗಳ ಹಂಚಿಕೆಯಾಗಿಲ್ಲ ಇದಕ್ಕೆ ಕಳಪೆ ಕಾಮಗಾರಿ ನಿರ್ಮಾಣ ಕಾರಣವಾಗಿದ್ದು ಇದನ್ನು ತನಿಖೆ ಮಾಡಿಸುವಂತೆ ಆಗ್ರಹಿಸಿದರು.
ನಂತರ ಜಿಲ್ಲಾಧಿಕಾರಿಗಳಿಗೆ ಬರೆದ ಮನವಿಯನ್ನು ತಹಸೀಲ್ದಾರ್ ಕಚೇರಿ ಸಿರಸ್ತೆದಾರ ಗುರುಬಸಪ್ಪ ಪಾಟೀಲ್ ಮೂಲಕ ಸಲ್ಲಿಸಿದರು.
ಈ ಸಂದರ್ಭದಲ್ಲಿ ಆಟೋ ಚಾಲಕರ ಸಂಘದ ಗೌರವಾಧ್ಯಕ್ಷ ವೆಂಕಟೇಶ ,ಅಧ್ಯಕ್ಷ ಹಣಮಂತ್ರಾಯ ಸೇರಿದಂತೆ ಇನ್ನೂ ಅನೇಕರು ಭಾಗವಹಿಸಿದ್ದರು.
ಕಲಬುರಗಿ: ಸ್ಲಂ ಜನರ ಸಂಘಟನೆ ಕರ್ನಾಟಕ ವತಿಯಿಂದ ಆಯೋಜಿಸಿದ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ವೃತ್ತ ಹೈ -ಕೋರ್ಟ್ ರಸ್ತೆ…
ಕಲಬುರಗಿ: ಕರ್ನಾಟಕ ರಾಜ್ಯದ ಕಲಬುರಗಿ-ಜಿಲ್ಲೆಯಲ್ಲಿ ದಲಿತ (ಮಾದಿಗ) ಸಮುದಾಯದವರಿಗೆ ರಾಷ್ಟ್ರೀಕೃತ ಬ್ಯಾಂಕ್‍ಗಳು ಸಾಲ ಸೌಲಭ್ಯ ನೀಡದಿರುವ ಕುರಿತು ಶೋಷಿತ ಜನಜಾಗೃತಿ…
ಕಲಬುರಗಿ: ಪ್ರಶಸ್ತಿ ಪುರಸ್ಕೃತರು ಸನ್ಮಾನ ಸಮಾರಂಭಕ್ಕೆ ಗೈರಾಗಿರುವುದು ಬೇಸರದ ಸಂಗತಿ ಎಂದು ಜಿಲ್ಲಾ ವೈದ್ಯ ಸಾಹಿತ್ಯ ಪರಿಷತ್ ಅಧ್ಯಕ್ಷ ಹಾಗೂ…
ಕಲಬುರಗಿ: ಹಣೆಯ ಮೇಲೆ ಹಚ್ಚಿದ ವಿಭೂತಿ ಸಮಾನತೆ ಸಾರುವದರೊಂದಿಗೆ ಮನುಷ್ಯನ ಆತ್ಮವಿಶ್ವಾಸ ಹೆಚ್ಚಿಸುತ್ತದೆ ಎಂದು ಆರಾಧನಾ ಪದವಿ ಪೂರ್ವ ಕಾಲೇಜಿನ…
ಕಲಬುರಗಿ ಕೇಂದ್ರ ಕಾರಾಗೃಹದಲ್ಲಿರುವ ಸಂವಿಧಾನ ದಿನವನ್ನು ಸರ್ಕಾರದ ಸುತ್ತೋಲೆ ಆದೇಶದಂತೆ ಕಾರಾಗೃಹದ ಲಿಪಿಕ/ ಕಾನಿನಿರ್ವಹಕ ಅಧಿಕಾರಿ/ಸಿಬ್ಬಂದಿಯವರೊಂದಿಗೆ ಡಾ|| ಬಾಬಾ ಸಾಹೇಬ್…
ಕಲಬುರಗಿ; ಸಂವಿಧಾನವನ್ನು ರಕ್ಷಿಸಲು ಮತ್ತು ಜನರಲ್ಲಿ ಸಂವಿಧಾನದ ಮೇಲಿನ ನಂಬಿಕೆಯನ್ನು ಬಲಪಡಿಸಲು ಜಾಗೃತ ಶಕ್ತಿಯಾಗಿ ಕಾರ್ಯನಿರ್ವಹಿಸುವ ಗುರುತರವಾದ ಜವಾಬ್ದಾರಿಯನ್ನು ದೇಶದ…