ನೌಕರರ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ 15ಕ್ಕೆ ಉಸ್ತುವಾರಿ ಸಚಿವರ ಕಚೇರಿ ಮುಂದೆ ಧರಣಿ

0
7

ಸುರಪುರ: ರಾಜ್ಯದಲ್ಲಿರುವ ಪಾಲಿಕೆ,ನಗರಸಭೆ,ಪುರಸಭೆ ಹಾಗೂ ಪಟ್ಟಣ ಪಂಚಾಯತಿಗಳಲ್ಲಿ ಹೊರಗುತ್ತಿಗೆ ನೌಕರರ ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಕರ್ನಾಟಕ ರಾಜ್ಯ ಪಾಲಿಕೆ,ನಗರಸಭೆ,ಪುರಸಭೆ ಹಾಗೂ ಪಟ್ಟಣ ಪಂಚಾಯತಿ ಹೊರಗುತ್ತಿಗೆ ನೌಕರರ ಸಂಘ ದಿಂದ ಜಿಲ್ಲಾ ಉಸ್ತುವಾರಿ ಸಚಿವರ ಕಚೇರಿ ಮುಂದೆ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ತಾಲೂಕು ಅಧ್ಯಕ್ಷ ಜಗದೀಶ ಶಾಖಾನರ್ ತಿಳಿಸಿದ್ದಾರೆ.

ಈ ಕುರಿತು ಪ್ರತಿಕಾ ಹೇಳಿಕೆ ನೀಡಿರುವ ಅವರು,ಹೊರಗುತ್ತಿಗೆ ನೌಕರರನ್ನು ಪೌರಕಾರ್ಮಿಕರಂತೆ ನೇರಪಾವತಿಗೆ ಒಳಪಡಿಸಬೇಕು ಎನ್ನುವುದು ಸೇರಿದಂತೆ ಹಲವು ಬೇಡಿಕೆಗಳಿಗಾಗಿ ನಮ್ಮ ತಾಲೂಕು ಘಟಕವು ಭಾಗವಹಿಸಿ ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪಗೌಡ ದರ್ಶನಾಪುರ ಅವರ ಕಚೇರಿ ಮುಂದೆ ಇದೇ ನವೆಂಬರ್ 15ನೇ ತಾರಿಖು ಧರಣಿ ನಡೆಸಲಿದ್ದೇವೆ ಎಂದು ತಿಳಿಸಿದ್ದಾರೆ.

Contact Your\'s Advertisement; 9902492681

ಅಂದು ರಾಜ್ಯಾಧ್ಯಂತ ಏಕಕಾಲಕ್ಕೆ ಮುಷ್ಕರ ನಡೆಯಲಿದ್ದು ಯಾದಗಿರಿಯಲ್ಲಿ ನಡೆಯುವ ಮುಷ್ಕರದಲ್ಲಿ ತಾಲೂಕು ಘಟಕದ ಎಲ್ಲಾ ಪದಾಧಿಕಾರಿಗಳು ಮತ್ತು ಸದಸ್ಯರು ಭಾಗವಹಿಸಿ ಬೇಡಿಕೆಗಳ ಈಡೇರಿಸಲು ಆಗ್ರಹಿಸಲಿದ್ದೇವೆ ಎಂದು ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಹೊರಗುತ್ತಿಗೆ ಸಿಬ್ಬಂದಿಗಳಾದ ಸತೀಶ ಕುಮಾರ್ ನಾಯಕ,ಗೋಪಾಲ ಸತ್ಯಂಪೇಟೆ,ಅನಿಲ ಕುಮಾರ ನಾಯಕ,ಮಂಜುನಾಥ ಗೋಗಿಕೇರ,ವಿಶಾಲ್ ಕಟ್ಟಿಮನಿ,ಗೌರವಾಧ್ಯಕ್ಷ ಅಯ್ಯಣ್ಣ ಪೂಜಾರಿ ಸೇರಿದಂತೆ ಇತರರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here